ಮೀಸಲು ವಿವಾದ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Team Udayavani, Jan 11, 2019, 1:15 AM IST
ಬೆಂಗಳೂರು: ರಾಜ್ಯದ 26 ಜಿಲ್ಲೆಗಳ 101 ನಗರ ಸ್ಥಳೀಯ ಸಂಸ್ಥೆಗಳಿಗೆ ಕ್ಷೇತ್ರ ಪುನರ್‌ವಿಂಗಡಣೆಗೊಳಿಸಿ ವಾರ್ಡ್‌ವಾರು ಮೀಸಲಾತಿ ನಿಗದಿಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ತರಕಾರು ಅರ್ಜಿಗಳ ವಿಚಾರಣೆಯನ್ನು ಗುರುವಾರ ಪೂರ್ಣಗೊಳಿಸಿದ ಹೈಕೋರ್ಟ್, ಈ ಕುರಿತು ತೀರ್ಪು ಕಾಯ್ದಿರಿಸಿದೆ.
ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಸುಮಾರು 25ಕ್ಕೂ ಹೆಚ್ಚು ಅರ್ಜಿಗಳ ಸಲ್ಲಿಕೆಯಾಗಿದ್ದವು. ಈ ಎಲ್ಲ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿದ ನ್ಯಾ.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ತೀರ್ಪು ಕಾಯ್ದಿರಿಸುವುದಾಗಿ ಹೇಳಿತು. ಈ ಮಧ್ಯೆ ಜ.16ರವರೆಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸುವುದಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್‌ಗೆ ಹೇಳಿದೆ. ಈ ಹಿಂದೆ ಜ.10ರವರೆಗೆ ವೇಳಾಪಟ್ಟಿ ಪ್ರಕಟಿಸುವುದಿಲ್ಲವೆಂದು ಆಯೋಗ ಹೇಳಿತ್ತು.
ಆದರೆ, ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ ಹಿನ್ನೆಲೆಯಲ್ಲಿ ಜ.16ರವರೆಗೆ ವೇಳಾಪಟ್ಟಿ ಪ್ರಕಟಿಸುವುದಿಲ್ಲ ಎಂದು ಗುರುವಾರ ನ್ಯಾಯಪೀಠಕ್ಕೆ ತಿಳಿಸಿತು. ಈ ವರ್ಷ ಮಾರ್ಚ್‌ನಲ್ಲಿ ಅವಧಿ ಪೂರ್ಣಗೊಳ್ಳಲಿರುವ ಆರು ಮಹಾನಗರ ಪಾಲಿಕೆಗಳು ಸೇರಿ ರಾಜ್ಯದ 26 ಜಿಲ್ಲೆಗಳ 101 ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡ್‌ಗಳ ಕ್ಷೇತ್ರ ಪುನರ್‌ವಿಂಗಡಣೆಗೊಳಿಸಿ ಹಾಗೂ ವಾರ್ಡ್‌ವಾರು ಮೀಸಲಾತಿ ನಿಗದಿಪಡಿಸಿ 2018ರ ಆಗಸ್ಟ್ನಲ್ಲಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಅದನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.