ಮೀಸಲು ಬಡ್ತಿ: ಹೊಸ ಕಾಯ್ದೆ ಜಾರಿಗೆ ಚಿಂತನೆ
Team Udayavani, Aug 2, 2018, 6:15 AM IST
ಬೆಂಗಳೂರು: ಮೀಸಲು ಬಡ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಪ್ರಕರಣ ಇತ್ಯರ್ಥಗೊಳ್ಳುವುದು ವಿಳಂಬವಾದರೆ ಇತ್ತೀಚೆಗೆ ತಾನೇ ಸರ್ಕಾರ ರೂಪಿಸಿರುವ ಮೀಸಲು ಆಧಾರದ ಮೇಲೆ ಬಡ್ತಿ ಹೊಂದಿರುವ ಸರಕಾರಿ ನೌಕರರಿಗೆ ತತ್ಪರಿಣಾಮವಾದ ಜ್ಯೇಷ್ಠತೆ ವಿಸ್ತರಿಸುವ ಕಾಯ್ದೆಯನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಮೀಸಲು ಬಡ್ತಿ ವಿವಾದ ಕುರಿತ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ಆ. 14ರಂದು ವಿಚಾರಣೆಗೆ ಬರಲಿದ್ದು, ಅದಕ್ಕೆ ಮುನ್ನವೇ ಈ ಕುರಿತು ಮಧ್ಯಂತರ ಅರ್ಜಿ ಸಲ್ಲಿಸಿ, ಸುಪ್ರೀಂ ಕೋರ್ಟ್ ಆದೇಶದಂತೆ ಈಗಾಗಲೇ ಹಿಂಬಡ್ತಿಗೆ ಒಳಗಾಗಿರುವ ಮೀಸಲು ಪಡ್ತಿ ಪಡೆದಿದ್ದ ನೌಕರರಿಗೆ ಮತ್ತೆ ಬಡ್ತಿಗೆ ಅವಕಾಶ ನೀಡುವಂತೆ ಕೋರಲು ಬುಧವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವರು ಮತ್ತು ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಅಲ್ಲದೆ, ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲೂ ಸುಪ್ರೀಂ ಕೋರ್ಟ್ ಆದೇಶ, ಅದರ ಪರಿಣಾಮಗಳು, ಮೀಸಲು ಆಧಾರದ ಮೇಲೆ ಬಡ್ತಿ ಹೊಂದಿರುವ ಸರಕಾರಿ ನೌಕರರಿಗೆ ತತ್ಪರಿಣಾಮವಾದ ಜ್ಯೇಷ್ಠತೆ ವಿಸ್ತರಿಸುವ ವಿಧೇಯಕ ಜಾರಿ ಹೇಗೆ? ಇದರಿಂದ ಸರ್ಕಾರ ಅಥವಾ ಮೀಸಲು ಆಧಾರದ ಮೇಲೆ ಬಡ್ತಿ ಪಡೆದವರಿಗೆ ಮತ್ತೆ ಸಮಸ್ಯೆಯಾದರೆ ಏನು ಮಾಡಬೇಕು ಎಂಬಿತ್ಯಾದಿ ವಿಚಾರಗಳ ಕುರಿತು ಚರ್ಚಿಸಲೂ ಸಭೆಯಲ್ಲಿ ನಿರ್ಧರಿಸಲಾಗಿದೆ.
ಮೌಖೀಕ ಆದೇಶ ಅನ್ವಯವಾಗುವುದಿಲ್ಲ:
ಮೀಸಲು ಬಡ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿರುವ ಪ್ರಕರಣದ ಕುರಿತಂತೆ ಸಭೆಗೆ ಮಾಹಿತಿ ನೀಡಿದ ಅಡ್ವೋಕೇಟ್ ಜನರಲ್ ಉದಯ್ ಹೊಳ್ಳ, ನ್ಯಾಯಾಂಗ ನಿಂದನೆ ಅರ್ಜಿ ಇತ್ಯರ್ಥಗೊಳ್ಳುವವರೆಗೆ ಆಧಾರದ ಮೇಲೆ ಬಡ್ತಿ ಹೊಂದಿರುವ ಸರಕಾರಿ ನೌಕರರಿಗೆ ತತ್ಪರಿಣಾಮವಾದ ಜ್ಯೇಷ್ಠತೆ ವಿಸ್ತರಿಸುವ ಕಾಯ್ದೆ ಕುರಿತು ಯತಾಸ್ಥಿತಿ ಕಾಪಾಡುವಂತೆ ಸುಪ್ರೀಂ ಕೋರ್ಟ್ ಮೌಖೀಕ ಸೂಚನೆ ನೀಡಿದೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಭೆಯಲ್ಲಿದ್ದ ಸಚಿವರು, ಸರ್ಕಾರಿ ನೌಕರರ ವಿಚಾರಗಳಿಗೆ ಮೌಖೀಕ ಆದೇಶ ಅನ್ವಯವಾಗುವುದಿಲ್ಲ. ಹೀಗಾಗಿ ಕಾಯ್ದೆ ಜಾರಿಗೊಳಿಸಲು ಅಡ್ಡಿಯಿಲ್ಲ ಎಂದು ಹೇಳಿದರು.
ಈ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. ಅಂತಿಮವಾಗಿ ಮೀಸಲು ಬಡ್ತಿಯನ್ನು ಉಳಿಸಿಕೊಳ್ಳುವ ಕಾಯ್ದೆಯನ್ನು ಜಾರಿಗೊಳಿಸುವ ಪ್ರಕ್ರಿಯೆಯನ್ನು ಆ. 14ರವರೆಗೆ ಸ್ಥಗಿತಗೊಳಿಸಲು ತೀರ್ಮಾನಿಸಲಾಯಿತು. ಈ ಮಧ್ಯೆ ಆ. 14ರಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಇತ್ಯರ್ಥಗೊಳ್ಳದೇ ಇದ್ದರೆ ಆ. 14ರ ಮೀಸಲು ಬಡ್ತಿ ಉಳಿಸಿಕೊಳ್ಳುವ ಕಾಯ್ದೆಯ ಅನುಷ್ಠಾನಕ್ಕೆ ಅನುಮತಿ ಕೋರಿ ಅದಕ್ಕೆ ಮುನ್ನವೇ ಮಧ್ಯಂತರ ಅರ್ಜಿ ಸಲ್ಲಿಸಲು ನಿರ್ಧರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಸುಪ್ರೀಂ ಕೋರ್ಟ್‌ನಲ್ಲಿ ಆ. 14ರಂದು ಏನಾಗುತ್ತದೆ ಎಂದು ಕಾದು ನೋಡೋಣ. ಅದರ ಜತೆಗೆ ರಾಷ್ಟ್ರಪತಿಗಳ ಅಂಕಿತ ದೊರೆತು ಸಿದ್ಧವಾದ ಬಡ್ತಿ ಮೀಸಲು ಉಳಿಸಿಕೊಳ್ಳು ಕಾಯ್ದೆ ಜಾರಿ ಕುರಿತಂತೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ವರ್ಗಾವಣೆ ತಡೆ ಅಸಾಧ್ಯ:
ಈ ಮಧ್ಯೆ ಮೀಸಲು ಬಡ್ತಿ ವಿವಾದ ಬಗೆಹರಿಯುವವರೆಗೆ ವರ್ಗಾವಣೆ ಪ್ರಕ್ರಿಯೆ ಸ್ಥಗಿತಗೊಳಿಸಬೇಕು. ಇಲ್ಲವಾದರೆ ಮುಂದೆ ಸಮಸ್ಯೆ ಎದುರಾಗಬಹುದು ಎಂದು ಸಭೆಯಲ್ಲಿದ್ದ ಬಹುತೇಕ ಸದಸ್ಯರು ಒತ್ತಾಯಿಸಿದರು. ಆದರೆ, ವರ್ಗಾವಣೆ ಪ್ರಕ್ರಿಯೆ ಸ್ಥಗಿತಗೊಳಿಸಲು ನಿರಾಕರಿಸಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಆಡಳಿತದ ದೃಷ್ಟಿಯಿಂದ ಈ ತೀರ್ಮಾನ ಅಸಾಧ್ಯ. ವಿವಾದ ಬಗೆಹರಿದ ಬಳಿಕ ಮುಂದಿನ ಯೋಚನೆ ಮಾಡೋಣ ಎಂದು ಸ್ಪಷ್ಟಪಡಿಸಿದರು.
ಸಭೆಯಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕೃಷ್ಣಬೈರೇಗೌಡ, ಎನ್.ಮಹೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಡ್ವೋಕೇಟ್ ಜನರಲ್ ಉದಯ್ ಹೊಳ್ಳ, ಸಮಾಜ ಕಲ್ಯಾಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಲಕ್ಷ್ಮೀನಾರಾಯಣ್, ದಲಿತ ಸಂಘಟನೆಗಳ ಪ್ರತಿನಿಧಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.