ಶಿಕ್ಷಣದಿಂದಷ್ಟೇ ಸರ್ವ ಜನಾಂಗಗಳಿಗೆ ಗೌರವ
Team Udayavani, Jul 10, 2017, 11:35 AM IST
ಕೆ.ಆರ್.ಪುರ: “ಎಲ್ಲಾ ಸಮುದಾಯಗಳಂತೆ ನಾವು ಕೂಡ ಗೌರವಯುತವಾಗಿ ಬದುಕಬೇಕಾದರೆ, ಮೊದಲು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು,’ ಎಂದು ಮಾಜಿ ಸಚಿವೆ ಮೋಟಮ್ಮ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ಛಲವಾದಿ ವೇದಿಕೆಯ ಕೇಂದ್ರ ಕಚೇರಿ ಹಾಗೂ ಒನಕೆ ಓಬವ್ವ ಮಹಿಳಾ ಅಭಿವೃದ್ಧಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
“ಸಮಾಜದಲ್ಲಿ ಕೆಲವರ ಮನಸ್ಸು ಕಲುಷಿತಗೊಂಡಿದೆ. 21ನೆ ಶತಮಾನದಲ್ಲಿಯೂ ದಲಿತರು ಕ್ಷುಲ್ಲಕ ಕಾರಣಗಳಿಗೆ ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾಗುತ್ತಿದ್ದಾರೆ. ಜೀತಪದ್ದತಿ ಜಿವಂತವಾಗಿದೆ. ಸಮುದಾಯದ ಪ್ರತಿನಿಧಿಗಳು ಸಂಘಟನೆಗೆ ಆದ್ಯತೆ ನೀಡಬೇಕು. ಪ್ರಮುಖವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಸಭೆಗಳನ್ನು ನಡೆಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು,’ ಎಂದು ಮೋಟಮ್ಮ ಕರೆ ನೀಡಿದರು.
“ಅಂಬೇಡ್ಕರ್ ಪ್ರತಿಪಾದಿಸಿದಂತೆ ಶಿಕ್ಷಣ, ಸಂಘಟನೆ ಹಾಗೂ ಹೋರಾಟಕ್ಕೆ ನಾವು ಮುಂದಾಗಬೇಕು. ಜನಪ್ರತಿನಿಧಿಗಳು ಸಮಾಜದಲ್ಲಿನ ಎಲ್ಲ ವರ್ಗಗಳನ್ನು ಜೊತೆಗೆ ಕೊಂಡೊಯ್ಯಬೇಕು. ಒಂದು ಸಮಾಜ ಮತ್ತೂಂದು ಸಮಾಜದ ಮೇಲೆ ಸವಾರಿ ಮಾಡುವ ಪ್ರಯತ್ನಕ್ಕೆ ಎಂದಿಗೂ ಬೆಂಬಲ ನೀಡಬಾರದು,’ ಎಂದು ಮನವಿ ಮಾಡಿದರು.
ಸ್ಥಳೀಯ ಶಾಸಕ ಬಿ.ಎ.ಬಸವರಾಜ ಮಾತನಾಡಿ, ತುಳಿತಕ್ಕೊಳದ ಜನಾಂಗಗಳನ್ನು ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಮೇಲೆ ತರುವ ಕೆಲಸವನ್ನು ನಾವು ಮಾಡಬೇಕಿದೆ. ಯಾರೂ ಇಂತಹದೆ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಕೊಂಡಿರುವುದಿಲ್ಲ. ಅನಿರೀಕ್ಷಿತವಾಗಿ ಯಾವುದೋ ಒಂದು ಜಾತಿಯಲ್ಲಿ ಹುಟ್ಟಿರುತ್ತೇವೆ. ಆದರೆ, ಎಲ್ಲ ವರ್ಗಗಳ ಜನರನ್ನು ಸಮಾನರಂತೆ ಕಾಣುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮಾತನಾಡಿ, “ಸದನ ಸಮಿತಿಯ ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿ ನಮ್ಮ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಅನುದಾನ ಒದಗಿಸುವಂತೆ ಸರಕಾರಕ್ಕೆ ಶಿಪಾರಸ್ಸು ಮಾಡಿದ್ದೆ. ಅದರಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಶೇಷ ಕಾಯ್ದೆಯನ್ನು ಜಾರಿಗೆ ತಂದು ಅನುಷ್ಠಾನಗೊಳಿಸಿ¨ªಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಎಸ್ಸಿ-ಎಸ್ಟಿ ಸಮುದಾಯಕ್ಕೆ 86 ಸಾವಿರ ಕೋಟಿ ರೂ. ಅನುದಾನ ಸಿಕ್ಕಿದೆ,’ ಎಂದು ತಿಳಿಸಿದರು.
ಸಮಾರಂಭದ ಸಾನಿಧ್ಯವನ್ನು ಚಿತ್ರದುರ್ಗ ಛಲವಾದಿ ಮಹಾಸಂಸ್ಥಾನದ ಶ್ರೀ ಬಸವನಾಗಿದೇವ ಸ್ವಾಮಿ ವಹಿಸಿದ್ದರು. ನಗರದ ಹೆಚ್ಚುವರಿ ಪೊಲೀಸ್ ಆಯುಕ್ತ ಎಂ.ನಂಜುಂಡಸ್ವಾಮಿ, ಛಲವಾದಿ ವೇದಿಕೆ ರಾಜಾಧ್ಯಕ್ಷ ಛಲವಾದಿ ಎಂ.ವೆಂಕಟೇಶ್, ಒನಕೆ ಓಬವ್ವ ಮಹಿಳಾ ಅಭಿವೃದ್ಧಿ ಸಂಘದ ಅಧ್ಯಕ್ಷೆ ಎಸ್.ಜ್ಯೋತಿ ಛಲವಾದಿ, ಮುಖಂಡ ಎಲ್.ಮುನಿಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ದೇವಸ್ಥಾನಗಳಿಗೆ ಏಕೆ ಹೋಗಬೇಕು?
“ಹಿಂದುಳಿದ, ತುಳಿತಕ್ಕೊಳಗಾದವರ ಪರವಾಗಿ ಶಾಸಕರು ನಿಲ್ಲಬೇಕು. ಚುನಾವಣೆ ಸಂದರ್ಭದಲ್ಲಿ ನನಗೆ ದೇವಸ್ಥಾನವೊಂದಕ್ಕೆ ಕರೆದುಕೊಂಡು ಹೋಗಿದ್ದರು. ನಾನು ಹೋಗಿ ಬಂದ ನಂತರ ಆ ದೇವಸ್ಥಾನವನ್ನು ಶುದ್ಧೀಕರಿಸಿದರು ಎಂಬ ವಿಷಯ ಕೇಳಿ ಮನಸ್ಸಿಗೆ ನೋವಾಯಿತು. ಅಂದಿನಿಂದ, ದೇವಸ್ಥಾನಗಳಿಗೆ ಯಾಕೆ ಹೋಗಬೇಕು ಎಂದೆನಿಸುತ್ತಿದೆ,’ ಎಂದು ಮಾಜಿ ಸಚಿವೆ ಮೋಟಮ್ಮ ತೀವ್ರ ಬೇಸರ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.