ಅಟಲ್ ಸಾರಿಗೆ ಪುನಶ್ಚೇತನಗೊಳಿಸಿ
Team Udayavani, Aug 18, 2018, 2:35 PM IST
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡವರ ಅನುಕೂಲಕ್ಕಾಗಿ ಆರಂಭಿಸಿದ್ದ ಅಟಲ್ ಸಾರಿಗೆ ವ್ಯವಸ್ಥೆಯನ್ನು ಪುನಶ್ಚೇತನಗೊಳಿಸಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜಧಾನಿ ಬೆಂಗಳೂರಿನ ಬಡವರ, ಕೂಲಿ ಕಾರ್ಮಿಕರ ಅನುಕೂಲಕ್ಕಾಗಿ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಅಟಲ್ ಸಾರಿಗೆ ವ್ಯವಸ್ಥೆ ಈಗ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಇದನ್ನು ಪುನಶ್ಚೇತನಗೊಳಿಸುವ ಮೂಲಕ ರಾಜ್ಯ ಸರ್ಕಾರ ಅಜಾತಶತ್ರು ವಾಜಪೇಯಿ ಅವರಿಗೆ ಗೌರವ ನಮನ ಸಲ್ಲಿಸಬೇಕು ಎಂದರು.
ಕೊಳಗೇರಿ ನಿವಾಸಿಗಳು, ಕೂಲಿಕಾರ್ಮಿಕರು ಶೇ.50ರಷ್ಟು ರಿಯಾಯ್ತಿ ದರದಲ್ಲಿ ಪ್ರಯಾಣಿಸಲು ಅನುಕೂಲವಾಗುವಂತೆ ಅಟಲ್ ಸಾರಿಗೆ ವ್ಯವಸ್ಥೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲಿ ಆರಂಭಿಸಿದ್ದೆವು. ಬಿಎಂಟಿಸಿಯಿಂದ 25 ಬಸ್‌ಗಳನ್ನು ನೀಡಿದ್ದೆವು. ನಂತರ ರಾಜ್ಯ ಸರ್ಕಾರ ನಿರ್ಲಕ್ಷ್ಯದಿಂದ ಬಸ್‌ಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.