ನಿವೃತ್ತ ಬಿಬಿಎಂಪಿ ಅಧಿಕಾರಿಗೆ ದಂಡ


Team Udayavani, Jul 7, 2017, 11:15 AM IST

highcourt.jpg

ಬೆಂಗಳೂರು: ಸಿವಿಲ್‌ ನ್ಯಾಯಾಂಗ ನಿಂದನೆ ಪ್ರಕರಣವೊಂದರ ಸಂಬಂಧ ಬಿಬಿಎಂಪಿ ನಗರ ಯೋಜನಾ ವಿಭಾಗದ ನಿವೃತ್ತ ಹೆಚ್ಚುವರಿ ನಿರ್ದೇಶಕ ಎಂ.ಬಿ.ತಿಪ್ಪಣ್ಣ ಅವರಿಗೆ ಹೈಕೋರ್ಟ್‌ 1 ಲಕ್ಷ ರೂ. ದಂಡ ವಿಧಿಸಿದೆ.

ತಿಪ್ಪಣ್ಣ ಅವರ ವಿರುದ್ಧ ಅಬ್‌ಶಾಟ್‌ ಲೇಔಟ್‌ ನಿವಾಸಿಗಳ ಸಂಘ ದಾಖಲಿಸಿದ್ದ ಸಿವಿಲ್‌ ನ್ಯಾಯಾಂಗ ನಿಂದನೆ ಅರ್ಜಿಯನ್ನು ಗುರುವಾರ ಇತ್ಯರ್ಥಗೊಳಿಸಿದ ನ್ಯಾಯಮೂರ್ತಿ ಜಯಂತ್‌ ಪಟೇಲ್‌ ಹಾಗೂ ಎಸ್‌. ಸುಜಾತಾ ಅವರಿದ್ದ ವಿಭಾಗೀಯ ಪೀಠ, ಪ್ರತಿವಾದಿ ತಿಪ್ಪಣ್ಣ ಮುಂದಿನ 15ದಿನಗಳಲ್ಲಿ 1 ಲಕ್ಷ ರೂ. ದಂಡ ಪಾವತಿಸುವಂತೆ ತೀರ್ಪಿನಲ್ಲಿ ತಿಳಿಸಿದೆ.

ತಿಪ್ಪಣ್ಣ ಪಾವತಿಸುವ ದಂಡದ ಮೊತ್ತ 1 ಲಕ್ಷ ರೂ.ಗಳಲ್ಲಿ 50 ಸಾವಿರ ರೂ.ಗಳನ್ನು ಅರ್ಜಿದಾರರಿಗೆ ನೀಡಬೇಕು. 25 ಸಾವಿರ ರೂ.ಗಳನ್ನು ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಹಾಗೂ 25. ಸಾವಿರ ರೂ.ಗಳನ್ನು ಬೆಂಗಳೂರು ವಕೀಲರ ಸಂಘಕ್ಕೆ (ವಕೀಲರ ಸಹಾಯ ನಿಧಿ) ಠೇವಣಿ ಇಡುವಂತೆ ನ್ಯಾಯಪೀಠ ತಿಳಿಸಿದೆ. ದಂಡ ಪಾವತಿ ಮಾಡುವ ತನಕ ತಿಪ್ಪಣ್ಣ, ವಿದೇಶಗಳಿಗೆ ತೆರಳಲು ಅನುಮತಿ ನೀಡಬಾರದು ಎಂದು ಸಕ್ಷಮ ಪ್ರಾಧಿಕಾರಗಳಿಗೆ ನಿರ್ದೇಶನ ನೀಡಿದೆ. 

ಏನಿದು ಪ್ರಕರಣ?: ಬಿಬಿಎಂಪಿ ನಗರ ಯೋಜನಾ ಪ್ರಾಧಿಕಾರ ಸ್ಯಾಂಕಿ ಕೆರೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ  ನಿತೇಶ್‌ ಎಸ್ಟೇಟ್‌ ಲಿಮಿಟೆಡ್‌ನ‌ವರಿಗೆ ಕಿರಿದಾದ ರಸ್ತೆ ಉಪಯೋಗಿಸಲು ಅನುಮತಿ ನೀಡಿರುವುದರಿಂದ ಸ್ಥಳೀಯರಿಗೆ ತೊಂದರೆಯಾಗಲಿದೆ ಎಂದು ಆಕ್ಷೇಪಿಸಿ ಅಬ್‌ಶಾಟ್‌ ಲೇಔಟ್‌ ನಿವಾಸಿಗಳ ಸಂಘ  ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿತ್ತು . 2016ರ ಜುಲೈ 21ರಂದು ಈ ಅರ್ಜಿ ಇತ್ಯರ್ಥಗೊಳಿಸಿದ್ದ ಹೈಕೋರ್ಟ್‌, ಅರ್ಜಿದಾರರ ಮನವಿಗೆ ಸ್ಪಂದಿಸಿ ಬಿಬಿಎಂಪಿ ಯೋಜನಾ ಪ್ರಾಧಿಕಾರದ ನಿರ್ದೇಶಕರು ಕ್ರಮ ಕೈಗೊಳ್ಳಲಿ ಎಂದು ಆದೇಶಿಸಿತ್ತು.

ಆದರೆ  2016 ಆಗಸ್ಟ್‌ 20ರಂದು ಜಂಟಿ ನಿರ್ದೇಶಕ ತಿಪ್ಪಣ್ಣ, ನಿತೇಶ್‌ ಎಸ್ಟೇಟ್‌ನವರಿಗೆ ಕಾನೂನು ಪ್ರಕಾರವೇ ರಸ್ತೆಯ ಅನುಮತಿ ನೀಡಲಾಗಿದೆ ಎಂದು ನ್ಯಾಯಾಲಯದ ಆದೇಶದ ಮಾದರಿಯಲ್ಲಿಯ ಪದ ಬಳಕೆ ಮಾಡಿ ಆದೇಶ ಹೊರಡಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಅರ್ಜಿದಾರರು,ನಮ್ಮ ಮನವಿಯನ್ನು ಪರಿಗಣಿಸದೇ ಅಧಿಕಾರಿ ತಿಪ್ಪಣ್ಣ ಏಕಪಕ್ಷೀಯವಾಗಿ ಆದೇಶ ಹೊರಡಿಸಿದ್ದಾರೆ ಎಂದು ಅವರ ವಿರುದ್ಧ ಸಿವಿಲ್‌ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ಓವರ್‌ ಸ್ಮಾರ್ಟ್‌ ನಡವಳಿಕೆ ಸಹಿಸುವುದಿಲ್ಲ!
ಮತ್ತೂಂದೆಡೆ ನಿತೇಶ್‌ ಎಸ್ಟೇಟ್‌ ಪರವಾಗಿ ಆಗಸ್ಟ್‌ 20, 2016ಕ್ಕೆ ಆದೇಶ ಹೊರಡಿಸಿದ್ದ ಅಧಿಕಾರಿ ತಿಪ್ಪಣ್ಣ, ಆದೇಶ ಪ್ರತಿಗೆ ಹಿಂದಿನ ಸಹಿ ಹಾಗೂ ದಿನಾಂಕ ನಮೂದಿಸಿದ್ದರು. ಈ ಅಂಶವನ್ನು ಪರಿಗಣಿಸಿರುವ ನ್ಯಾಯಪೀಠ,ನ್ಯಾಯಾಲಯದ ಆದೇಶಗಳನ್ನು ಪಾಲಿಸದೇ ” ಓವರ್‌ ಸ್ಮಾರ್ಟ್‌’ ವರ್ತನೆ ತೋರುವುದನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಅಷ್ಟೇ ಅಲ್ಲ ತಪ್ಪಿತಸ್ಥ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ  ಕ್ರಮ ಕೈಗೊಳ್ಳಲಾಗುವುದು ಎಂದು ನ್ಯಾಯಪೀಠ ಎಚ್ಚರಿಕೆ ನೀಡಿದೆ.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.