ವಿದ್ವತ್ ಹೇಳಿಕೆ ದಾಖಲಿಸದೆ ವಾಪಸಾದ ಅಧಿಕಾರಿಗಳು
Team Udayavani, Feb 27, 2018, 12:12 PM IST
ಬೆಂಗಳೂರು: ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ ಮೊಹಮ್ಮದ್ ನಲಪಾಡ್ನಿಂದ ಹಲ್ಲೆಗೊಳಗಾಗಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ವತ್ ಹೇಳಿಕೆ ದಾಖಲಿಸಿಕೊಳ್ಳಲು ಸೋಮವಾರ ಮಲ್ಯ ಆಸ್ಪತ್ರೆಗೆ ತೆರಳಿದ್ದ ಸಿಸಿಬಿ ಪೊಲೀಸರು, ವಿದ್ವತ್ ಆರೋಗ್ಯ ಸ್ಥಿತಿ ಕಂಡು, ಬರಿಗೈಲಿ ವಾಪಸಾಗಿದ್ದಾರೆ.
ವಿದ್ವತ್ ಆರೋಗ್ಯ ಅಲ್ಪ ಚೇತರಿಕೆ ಕಂಡಿದ್ದು, ಭಾನುವಾರ ವಿಶೇಷ ವಾರ್ಡ್ಗೆ ಸ್ಥಳಾಂತರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ತನಿಖಾಧಿಕಾರಿ ಅಶ್ವತ್ಥಗೌಡ ನೇತೃತ್ವದ ತಂಡ ಮಧ್ಯಾಹ್ನ 12 ಗಂಟೆಗೆ ಮಲ್ಯ ಆಸ್ಪತ್ರೆಗೆ ತೆರಳಿದೆ. ಈ ವೇಳೆ ತನಿಖಾಧಿಕಾರಿಗಳು ವಿದ್ವತ್ಗೆ ಮೇಲಿಂದ ಮೇಲೆ ಪ್ರಶ್ನೆ ಕೇಳಿದ್ದಾರೆ.
ಆದರೆ, ತುಟಿ ಹಾಗೂ ಬಾಯಿಗೆ ತೀವ್ರ ಗಾಯವಾಗಿರುವ ಕಾರಣ ಹೆಚ್ಚು ಮಾತನಾಡಲು ಸಾಧ್ಯವಿಲ್ಲ ಎಂದು ವಿದ್ವತ್ ಹೇಳಿದ್ದಾನೆ. ಆದರೂ ತನಿಖಾಧಿಕಾರಿಗಳು ಮಾಹಿತಿ ಪಡೆಯಲು ಯತ್ನಿಸಿದಾಗ ಅಲ್ಲೇ ಇದ್ದ ಕುಟುಂಬದ ಸದಸ್ಯರು ವಿದ್ವತ್ ಪರಿಸ್ಥಿತಿಯನ್ನು ಪೊಲೀಸರಿಗೆ ವಿವರಿಸಿದ್ದಾರೆ. ಅಲ್ಲದೇ ವೈದ್ಯರ ಜತೆ ಚರ್ಚಿಸುವಂತೆ ಸಲಹೆ ನೀಡಿದ್ದಾರೆ.
ನಂತರ ವೈದ್ಯ ಆನಂದ್, ವಿದ್ವತ್ ಸ್ಥಿತಿ ಬಗ್ಗೆ ತನಿಖಾಧಿಕಾರಿಗಳಿಗೆ ವಿವರಿಸಿ, ವಿದ್ವತ್ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಕೆಲ ದಿನಗಳ ಬಳಿಕ ಬಂದರೆ ಒಳಿತು ಎಂದು ತಿಳಿಸಿದ್ದು, ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳದೆ ವಾಪಸಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.