ರೇವಾ ವಿವಿಗೆ ಆರನೇ ರ್‍ಯಾಂಕ್
Team Udayavani, Oct 4, 2018, 12:43 PM IST
ಬೆಂಗಳೂರು: ಯಲಹಂಕ ಸಮೀಪ ವಿಶಾಲ ಕ್ಯಾಂಪಸ್ ಹೊಂದಿರುವ ರೇವಾ ವಿಶ್ವವಿದ್ಯಾಲಯಕ್ಕೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (ಎಂಎಚ್‌ಆರ್‌ಡಿ) ರಾಷ್ಟ್ರೀಯ ಮಟ್ಟದಲ್ಲಿ ಸ್ವತ್ಛ ಕ್ಯಾಂಪಸ್ ರ್‍ಯಾಂಕಿಂಗ್ ನೀಡುವ ಮೂಲಕ ವಿವಿ ಕಾರ್ಯ ಸಾಧನೆಯನ್ನು ಗೌರವಿಸಿದೆ.
ಎಂಎಚ್‌ಆರ್‌ಡಿ ರಾಷ್ಟ್ರೀಯ ಮಟ್ಟದಲ್ಲಿ ವಿಶ್ವವಿದ್ಯಾಲಯಗಳ ಸಮೀಕ್ಷೆ ನಡೆಸಿ ರೇವಾ ವಿವಿಗೆ 6ನೇ ರ್‍ಯಾಂಕ್ ನೀಡಿದೆ. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಅವರು ವಿವಿ ಕುಲಾಧಿಪತಿ ಡಾ. ಪಿ. ಶ್ಯಾಮರಾಜು ಪ್ರಶಸ್ತಿ ನೀಡಿ ಗೌರವಿಸಿದರು. ನಂತರ ಮಾತನಾಡಿದ ಡಾ. ಶ್ಯಾಮರಾಜು ಅವರು ನಮ್ಮ ವಿವಿ ಪರಿಸರ ಸ್ನೇಹಿಯಾಗಿದ್ದು, ಸಂಪೂರ್ಣ ಪ್ಲಾಸ್ಟಿಕ್ ಮುಕ್ತವಾಗಿದೆ. ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ನಿರ್ಮಿಸಿರುವ ಶೌಚಾಲಯ, ನೀರಿನ ವ್ಯವಸ್ಥೆ, ಮಳೆ ಕೊಯ್ಲು, ಸೌರಶಕ್ತಿ ಬಳಕೆ, ಕ್ಯಾಂಪಸ್ ನಲ್ಲಿರುವ ಉದ್ಯಾನವನ ಎಲ್ಲ ಅಂಶಗಳನ್ನು ಪರಿಗಣಿಸಿ ಎಂಎಚ್ ಆರ್‌ಡಿ ಸ್ವತ್ಛ ಕ್ಯಾಂಪಸ್ ಎಂದು ಆಯ್ಕೆ ಮಾಡಿದೆ.
ರಾಷ್ಟ್ರೀಯ ಮಟ್ಟದಲ್ಲಿ 6ನೇ ರ್‍ಯಾಂಕಿಂಗ್ ನೀಡಿರುವುದು ಹೆಚ್ಚಿನ ಸಂತೋಷ ತಂದಿದೆ. ಅಖೀಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ತು (ಎಐಸಿಟಿಇ) ಹಾಗೂ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಅಧಿಕಾರಿಗಳ
ತಂಡ ಕಾಲೇಜುಗಳಿಗೆ ಭೇಟಿ ನೀಡಿ ಕ್ಯಾಂಪಸ್‌ಗಳನ್ನು ಪರಿಶೀಲಿಸಿ, ಅಂತಿಮವಾಗಿ 51 ಶಿಕ್ಷಣ ಸಂಸ್ಥೆಗಳಿಗೆ
ನಾನಾ ರೀತಿ ಪ್ರಶಸ್ತಿ ನೀಡಿ ಸನ್ಮಾನಿಸಿದೆ ಎಂದರು. ಈ ಸಂದರ್ಭದಲ್ಲಿ ರೇವಾ ವಿವಿ ಕುಲಪತಿ ಡಾ. ವೈ.ಎಸ್.
ಕುಲಕರ್ಣಿ, ಕುಲಸಚಿವ ಡಾ. ಎಂ. ಧನಂಜಯ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.