ಡಿಜಿಟಲ್ ಆರೋಗ್ಯ ಸೇವೆಯಿಂದ ಕ್ರಾಂತಿಕಾರಕ ಬದಲಾವಣೆ: ಸಚಿವ ಸುಧಾಕರ್

Team Udayavani, Jun 13, 2022, 4:26 PM IST

ಡಿಜಿಟಲ್ ಆರೋಗ್ಯ ಸೇವೆಯಿಂದ ಕ್ರಾಂತಿಕಾರಕ ಬದಲಾವಣೆ: ಸಚಿವ ಸುಧಾಕರ್

ಬೆಂಗಳೂರು: ದೇಶದ ಕಟ್ಟಕಡೆಯ ವ್ಯಕ್ತಿಗೂ ಸಮರ್ಪಕ ಆರೋಗ್ಯ ಸೇವೆ ನೀಡುವ ಗುರಿಯುಳ್ಳ ‘ಆಯುಷ್ಮಾನ್ ಭಾರತ ಡಿಜಿಟಲ್ ಮಿಶನ್’ (ಎಬಿಡಿಎಂ) ಕಾರ್ಯಕ್ರಮ ಜಾಗತಿಕ ಮಟ್ಟದ ಅತ್ಯಂತ ದೊಡ್ಡ ಉಪಕ್ರಮವಾಗಿದೆ. ಇದು ಆರೋಗ್ಯ ಕ್ಷೇತ್ರದಲ್ಲಿರುವ ಕಂದಕಗಳನ್ನು ಮುಚ್ಚಿ, ಸುಸ್ಥಿರ ಮಾದರಿ ಆರೋಗ್ಯ ವ್ಯವಸ್ಥೆಯನ್ನು ಸೃಷ್ಟಿಸಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ನಾಸ್ಕಾಂ ಸೋಮವಾರ ಇಲ್ಲಿ ಏರ್ಪಡಿಸಿದ್ದ ‘ಆಯುಷ್ಮಾನ್ ಭಾರತ ಡಿಜಿಟಲ್ ಮಿಷನ್’ ಸಮಾವೇಶದಲ್ಲಿ ಮಾತನಾಡಿದ ಅವರು, ‘ಬೆಂಗಳೂರೊಂದರಲ್ಲೇ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ 7,500 ನವೋದ್ಯಮಗಳಿವೆ. ತಂತ್ರಜ್ಞಾನ ಬಳಕೆಯಲ್ಲಿ ಕರ್ನಾಟಕ ಮುಂಚೂಣಿ ರಾಜ್ಯವಾಗಿದೆ’ ಎಂದರು.

ರಾಜ್ಯದ ಆರೋಗ್ಯ ಸೇವೆಗಳ ಮಾಹಿತಿ, ಮಾನವ ಸಂಪನ್ಮೂಲ ವ್ಯವಸ್ಥೆ ಸಹಿತ ಆರೋಗ್ಯ ವಲಯದ ಸಮಗ್ರ ಮಾಹಿತಿಗಳನ್ನು ಕ್ರೋಢೀಕರಿಸಲಾಗುತ್ತಿದೆ. ಆ ಮೂಲಕ ಗುಣಮಟ್ಟದ ಸೇವೆ ಒದಗಿಸಲು ಸಾಧ್ಯವಿದೆ. ಇದಕ್ಕೆ ಪೂರಕವಾಗಿ ಆಂಬುಲೆನ್ಸ್ ಸೇವೆಯನ್ನು ಇನ್ನೊಂದು ತಿಂಗಳಲ್ಲಿ ಸಮಗ್ರವಾಗಿ ಬದಲಾಯಿಸಲಾಗುತ್ತಿದೆ. ರೋಗಿಗಳನ್ನು ಯಾವ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕೆಂಬ ಮಾಹಿತಿಯನ್ನು ಆಂಬುಲೆನ್ಸ್ ಚಾಲಕರಿಗೆ ಟೆಲಿಕಾಲ್ ಮೂಲಕ ಒದಗಿಸಲಾಗುವುದು. ಇದರಿಂದ ವಿಂಳಂಬವಿಲ್ಲದೆ ಅಗತ್ಯವಿರುವ ಚಿಕಿತ್ಸೆ ದೊರಕಿಸಲು ಸಾಧ್ಯ’ ಎಂದರು.

ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಯೋಜನೆಯಡಿ ಪ್ರತಿಯೊಬ್ಬ ಅರ್ಹರಿಗೂ ಒಂದು ಗುರುತಿನ ಸಂಖ್ಯೆ ನೀಡಲಾಗುವುದು. ಜತೆಗೆ, ಸರ್ಜನ್ ಮಟ್ಟದ ಪರಿಣತ ವೈದ್ಯರಿಂದ ಹಿಡಿದು ಸಾಮಾನ್ಯ ವೈದ್ಯರವರೆಗೂ ಸಮಗ್ರ ದತ್ತಾಂಶ ಸಂಗ್ರಹಿಸಲಾಗುವುದು. ಈ ಮೂಲಕ, ಆರೋಗ್ಯ ಕ್ಷೇತ್ರವನ್ನು ಕಾಡುತ್ತಿರುವ ನಕಲಿ ವೈದ್ಯರ ಸಮಸ್ಯೆಗೂ ತೆರೆ ಬೀಳಲಿದೆ ಎಂದು ಅವರು ನುಡಿದರು.

ಕೊರೋನಾ ನಂತರ, ಆರೋಗ್ಯ ಕ್ಷೇತ್ರದ ಚಹರೆಗಳೇ ಬದಲಾಗಿವೆ. ಕೋವಿಡ್ ಮೊದಲ ಅಲೆ ಸಂದರ್ಭದಲ್ಲಿ ಇ-ಮಾನಸ್ ವ್ಯವಸ್ಥೆಯ ಮೂಲಕ 25 ಲಕ್ಷಕ್ಕೂ ಹೆಚ್ಚು ಜನರಿಗೆ ಕೌನ್ಸೆಲಿಂಗ್ ನೆರವು ಒದಗಿಸಲಾಗಿದೆ. ಇದನ್ನು ಕೇಂದ್ರ ಸರಕಾರ ಕೂಡ ಶ್ಲಾಘಿಸಿ, ಇತರೆ ರಾಜ್ಯಗಳಿಗೂ ಯೋಜನೆ ವಿಸ್ತರಿಸುವ ನಿರ್ಣಯವನ್ನು ಕೈಗೊಂಡಿದೆ. ಹಾಗೆಯೇ ಟೆಲಿ ಐಸಿಯು, ಟೆಲಿ ಮೆಡಿಸನ್ ನಂತಹ ಕ್ರಮಗಳ ಮೂಲಕ ರಾಜ್ಯದ ಎಲ್ಲಾ ಭಾಗಗಳ ರೋಗಿಗಳಿಗೆ ಏಕರೂಪದ ಗುಣಮಟ್ಟದ ಚಿಕಿತ್ಸೆ ನೀಡಲಾಯಿತು ಎಂದು ವಿವರಿಸಿದರು.

ಇದನ್ನೂ ಓದಿ:ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ : ನೂಪುರ್ ಶರ್ಮಾ ವಿರುದ್ಧ ಬೃಹತ್ ಪ್ರತಿಭಟನೆ

ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ಖಾಸಗಿ ಆಸ್ಪತ್ರೆಗಳ ಪಾತ್ರವೂ ಮಹತ್ವದ್ದಾಗಿದೆ. ದೇಶದಲ್ಲಿ ಶೇಕಡ 50ಕ್ಕಿಂತಲೂ ಹೆಚ್ಚಿನ ಜನರು ಖಾಸಗಿ ಆಸ್ಪತ್ರೆಗಳನ್ನೇ ಅವಲಂಬಿಸಿದ್ದಾರೆ. ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ಎಲ್ಲ ಮಾಹಿತಿಗಳನ್ನೂ ತೆಗೆದುಕೊಳ್ಳುತ್ತವೆ. ಆ ಮಾಹಿತಿಯನ್ನು ಸರಕಾರಗಳೊಂದಿಗೆ ಹಂಚಿಕೊಳ್ಳುತ್ತಿಲ್ಲ. ಈ ಮನೋಭಾವ ಬದಲಾಗಬೇಕು ಎಂದರು.

ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿನ ರೋಗಿಗಳ ಮಾಹಿತಿ ಹಂಚಿಕೊಂಡರೆ, ಸುಗಮ ಆರೋಗ್ಯ ಸೇವೆ ಒದಗಿಸಲು ಬೇಕಾಗಿರುವ ಸೂಕ್ತ ವ್ಯವಸ್ಥೆಯನ್ನು ರೂಪಿಸಬಹುದು. ಈ ನಿಟ್ಟಿನಲ್ಲಿ, ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಕಾರ್ಯಕ್ರಮದ ಭಾಗವಾಗಿ ಖಾಸಗಿ ಆಸ್ಪತ್ರೆಗಳ ಜತೆ ಒಡಂಬಡಿಕೆ ಮಾಡಿಕೊಳ್ಳುವುದು ಅವಶ್ಯವಾಗಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.