“ನೀರಿನ ವಿಚಾರದಲ್ಲಿ ರಾಜ್ಯಕ್ಕೆಅನ್ಯಾಯ: ಧ್ವನಿ ಎತ್ತದ ಸಂಸದರು’
Team Udayavani, Nov 23, 2017, 2:40 PM IST
ದೊಡ್ಡಬಳ್ಳಾಪುರ: ಮಹದಾಯಿ, ಕಾವೇರಿ ನೀರಿನ ವಿಚಾರಗಳು ಸೇರಿದಂತೆ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ
ಸಂಸದರು ದನಿ ಎತ್ತುತ್ತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಪ್ರಮುಖವಾಗಿದ್ದು, ಈ ಅಸ್ತ್ರವನ್ನು
ಕನ್ನಡಿಗರು ಬಳಸಿಕೊಂಡು ನಾಡಿನ ಹಿತ ಕಾಯುವವರನ್ನು ಸಂಸತ್‌ಗೆ ಆರಿಸಿ ಕಳುಹಿಸಬೇಕಿದೆ ಎಂದು ಕರ್ನಾಟಕ
ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಎಚ್. ಶಿವರಾಮೇಗೌಡ ಹೇಳಿದ್ದಾರೆ. ನಗರದ ಮಾರುತಿ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡವೆಂದರೆ ಬರೀ ಭಾಷೆಯ ಕೆಲಸವಲ್ಲ: ಕನ್ನಡಿಗರು ಪ್ರತಿಯೊಂದು ಸೌಲಭ್ಯ ಪಡೆಯಲು ಹೋರಾಟ ಮಾಡುವ ವಾತಾವರಣ ಸೃಷ್ಟಿಯಾಗಿರುವುದು ವಿಷಾದಕರ. ಕನ್ನಡ ಭಾಷೆ ವಿಚಾರದಲ್ಲಿಯೂ ಸರ್ಕಾರಗಳು ನಿರ್ಲಕ್ಷ್ಯ ವಹಿಸುತ್ತಿರುವ ಪರಿಣಾಮ ಈಗ ರಾಜ್ಯದಲ್ಲಿ 10 ಸಾವಿರ ಕನ್ನಡ ಶಾಲೆಗಳು ಮುಚ್ಚಿವೆ. ಇಂದಿನ ಜಾಗತೀಕರಣದ ಸಂದರ್ಭದಲ್ಲಿ ಬಹು ರಾಷ್ಟ್ರೀಯ ಕಂಪನಿಗಳು ಹಾಗೂ ಅನ್ಯ ರಾಜ್ಯದವರು ಇಲ್ಲಿನ ಜಮೀನುಗಳನ್ನು ಖರೀದಿಸಿ, ರೈತರನ್ನು ಕೂಲಿ ಕಾರ್ಮಿಕರನ್ನಾಗಿಸುತ್ತಿದ್ದಾರೆ. ಕನ್ನಡದ ಕೆಲಸ ಎಂದರೆ ಬರೀ ಭಾಷೆಯ ಕೆಲಸವಲ್ಲ. ಇಲ್ಲಿನ ಜನರ ಜೀವನ ಹಸನಾಗಬೇಕು. ಬಹು ರಾಷ್ಟ್ರೀಯ ಕಂಪನಿಗಳ ಉತ್ಪನ್ನಗಳನ್ನು ಬಳಸುವ ಬದಲು ಇಲ್ಲಿನ ರೈತರ ಉತ್ಪನ್ನಗಳನ್ನು ಬಳಸಿ ಅವರಿಗೆ ನೆರವಾಗಬೇಕು ಎಂದು ಹೇಳಿದರು.
ಮಕ್ಕಳಿಗೆ ಕನ್ನಡ ಸತ್ವ ಪರಿಚಯಿಸಿ: ಪ್ರಸ್ತುತ ಸಿನಿಮಾ ಸಾಹಿತ್ಯ ಅಸಂಬದ್ಧವಾಗಿದೆ. ಜಗತ್ತಿನ ಅಳಿವಿನ ಅಂಚಿನ ಭಾಷೆಗಳಲ್ಲಿ ಕನ್ನಡವೂ ಒಂದಾಗಿದೆ ಎನ್ನುವುದು ಆತಂಕಕಾರಿಯಾಗಿದ್ದು, ಕನ್ನಡವನ್ನು ಕೊಂದರೆ ನಮ್ಮ ತಾಯಿಯನ್ನು ನಾವು ಹತ್ಯೆ ಮಾಡಿದಂತೆ. ಈ ದಿಸೆಯಲ್ಲಿ ಇಂದಿನ ಮಕ್ಕಳಿಗೆ ಕನ್ನಡ ಭಾಷೆಯ ಸತ್ವವನ್ನು ಪರಿಚರಿಸ ಬೇಕು. ಭಾಷೆಯೊಂದಿಗೆ ನಮ್ಮ ಸಂಸ್ಕೃತಿ ಹಾಸು ಹೊಕ್ಕಾಗಬೇಕು ಎಂದು ಹೇಳಿದರು.
ಕನ್ನಡ ಪರ ಸಂಘಟನೆಗಳ ಕಾರ್ಯ ಶ್ಲಾಘನೀಯ: ನಗರಸಭಾ ಸದಸ್ಯ ಟಿ.ಎನ್.ಪ್ರಭುದೇವ್ ಮಾತನಾಡಿ, ಕನ್ನಡ ಭಾಷೆಗೆ ಧಕ್ಕೆ ಬಂದಾಗಲೆಲ್ಲಾ ಕನ್ನಡಪರ ಸಂಘಟನೆಗಳು ದನಿ ಎತ್ತಿವೆ. ಆದರೆ ಕನ್ನಡದ ಅನುಷ್ಠಾನ ಇನ್ನೂ ಸಮರ್ಪಕವಾಗಿ ಆಗುತ್ತಿಲ್ಲ. ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ಹಾಕುವ ಮೂಲಕ ಎಲ್ಲೆಡೆ
ಕನ್ನಡ ಭಾಷೆಯ ಸೊಗಡು ಕಾಣುವಂತಾಗಬೇಕು ಎಂದು ಆಶಿಸಿದರು. ಕನ್ನಡ ಪಕ್ಷದ ಅಧ್ಯಕ್ಷ ಸಂಜೀವ್ ನಾಯಕ್ ಮಾತನಾಡಿ, ರಾಜ್ಯದ ಹಿತದೃಷ್ಟಿಯಿಂದ ಇಲ್ಲಿ ಪ್ರಾದೇಶಿಕ ಪಕ್ಷದ ಆಡಳಿತ ಬರುವುದು ಉತ್ತಮ ಎಂದು ಅಭಿಪ್ರಾಯಪಟ್ಟರು.
ಬೆಂಗಳೂರಿನ ಶಶಿ ಮೆಲೋಡಿಸ್ ತಂಡದಿಂದ ವಾದ್ಯಗೋಷ್ಠಿ ನಡೆಯಿತು. ಸಮಾರಂಭದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಸಿದ್ದರಾಜು, ಎಸ್‌ಐ ಪಿ.ವಿ.ರೆಡ್ಡಿ, ಕಸಾಪ ತಾಲೂಕು ಅಧ್ಯಕ್ಷೆ ಪ್ರಮೀಳಾ, ನಗರಸಭಾ ಸದಸ್ಯ ಕೆಂಪರಾಜ್, ನಾಮಿನಿ ಸದಸ್ಯೆ ರೇವತಿ, ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ತಾಲೂಕು ಅಧ್ಯಕ್ಷ ಸು.ನರಸಿಂಹಮೂರ್ತಿ, ನಗರಸಭಾ ಸದಸ್ಯೆ ಅನುಸೂಯಮ್ಮ ಸುಬ್ರಮಣಿ, ಲಯನ್ಸ್ ಕ್ಲಬ್ ಅಧ್ಯಕ್ಷ ಸೋಮಶೇಖರ್, ನಂಜಪ್ಪ, ಪು. ವೆಂಕಟೇಶ್ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ತಾಲೂಕು ಅಧ್ಯಕ್ಷ ಮರುಳಾರಾಧ್ಯ ಹಾಗೂ ಕರವೇ
ಕಾರ್ಯಕರ್ತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ
Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
Bengaluru: ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್ ಬಂಧನ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.