ರಿಯಾಜ್‌ಗೆ ಸಿಕ್ಕಿತು ಪಾಸ್‌ಪೋರ್ಟ್
Team Udayavani, May 12, 2017, 11:28 AM IST
ಬೆಂಗಳೂರು: ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣದ ಆರೋಪಿ ಸೈಯದ್ ರಿಯಾಜ್‌ಗೆ ಮೆಕ್ಕಾ – ಮದೀನಾ ಯಾತ್ರೆ ಕೈಗೊಳ್ಳುವ ಸಲುವಾಗಿ ನಿಗದಿತ ಅವಧಿಗೆ ಪಾಸ್ ಪೋರ್ಟ್ ನೀಡುವಂತೆ ಅಧೀನ ನ್ಯಾಯಾಲಯಕ್ಕೆ ಹೈಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.
ಮೆಕ್ಕಾ-ಮದೀನಾ ಯಾತ್ರೆ ಕೈಗೊಳ್ಳುವ ಸಲುವಾಗಿ ಜಾಮೀನಿನ ಷರತ್ತು ಸಡಿಲಿಸಿ ನಿಗದಿತ ಅವಧಿಗೆ ಅಧೀನ ನ್ಯಾಯಾಲಯದಲ್ಲಿರುವ ಪಾಸ್‌ಪೋರ್ಟ್ ಕೊಡಿಸುವಂತೆ ಹೈಕೋರ್ಟ್ ಮೊರೆಹೋಗಿದ್ದ ಸೈಯದ್ ರಿಯಾಜ್ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಪೀಠ, ಹಲವು ಷರತ್ತುಗಳನ್ನು ವಿಧಿಸಿ ಅನುಮತಿ ನೀಡಿದೆ. .
ಸೈಯದ್ ರಿಯಾಜ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಚ್.ಬಿ. ಪ್ರಭಾಕರ್ ಶಾಸಿ ಅವರಿದ್ದ ಪೀಠ, ಈ ಹಿಂದೆ ಕೆಲವು ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿರುವ ಆರೋಪಿಗಳಿಗೆ ವಿದೇಶಕ್ಕೆ ತೆರಳಲು ಸುಪ್ರೀಂಕೋರ್ಟ್ ಅವಕಾಶ ನೀಡಿದೆ.
ಈ ಪ್ರಕರಣವನ್ನೂ ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದ್ದು,ಅರ್ಜಿದಾರ ರಿಯಾಜ್, ತಮ್ಮ ತಾಯಿಯ ಸಂಕಲ್ಪದಂತೆ ಮೆಕ್ಕಾ-ಮದೀನಾ ಯಾತ್ರೆ ಕೈಗೊಳ್ಳುವ ಸಲುವಾಗಿ ಇಂದಿನಿಂದ ಜುಲೈ 31 ರವರೆಗೆ ನಿಗದಿತ ಅವಧಿಗೆ ಪಾಸ್‌ಪೋರ್ಟ್ ನೀಡುವಂತೆ ಅಧೀನ ನ್ಯಾಯಾಲಯಕ್ಕೆ ನಿರ್ದೇಶಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Qatar: ಕತಾರ್ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್…
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.