![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Aug 5, 2024, 11:07 AM IST
ಬೆಂಗಳೂರು: ಆನೇಕಲ್ ತಾಲೂಕಿನ ಬೊಮ್ಮಸಂದ್ರ ಫ್ಲೈ ಓವರ್‌ನಲ್ಲಿ ಅತಿ ವೇಗವಾಗಿ ಬರುತ್ತಿದ್ದ ಲಾರಿಯೊಂದು ದಂಪತಿ ಪ್ರಯಾಣಿಸುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಪತಿ ಸ್ಥಳದಲ್ಲೇ ಮೃತಪಟ್ಟಿದ್ದು, ಪತ್ನಿಯ ಎರಡೂ ಕಾಲುಗಳು ತುಂಡಾಗಿವೆ ಎಂದು ತಿಳಿದು ಬಂದಿದೆ.
ಬೈಕ್‌ನಲ್ಲಿ ಮಗುವಿನೊಂದಿಗೆ ಗಂಡ-ಹೆಂಡತಿ ಪ್ರಯಾಣ ಬೆಳೆಸಿದ್ದರು. ಬೆಂಗಳೂರು ಕಡೆಯಿಂದ ಬರುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಆ ವೇಳೆ ಕೆಳಗೆ ಬಿದ್ದ ಪತಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಪತ್ನಿಯ ಎರಡೂ ಕಾಲು ತುಂಡಾಗಿವೆ ಎಂದು ತಿಳಿದು ಬಂದಿದೆ. ಮಹಿಳೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿಗೆ ಸಣ್ಣ-ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು- ಹೊಸೂರು ಹೆದ್ದಾರಿಯಲ್ಲಿ ಈ ಭೀಕರ ರಸ್ತೆ ಅಪಘಾತದಿಂದಾಗಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಆಗಿತ್ತು.
You seem to have an Ad Blocker on.
To continue reading, please turn it off or whitelist Udayavani.