ಟಿಪ್ಪರ್ ಲಾರಿ ಡಿಕ್ಕಿ: ಊಬರ್ ಬೈಕ್ನಲ್ಲಿ ತೆರಳುತ್ತಿದ್ದ ಮಹಿಳಾ ಟೆಕಿ ದುರ್ಮರಣ
Team Udayavani, Apr 3, 2024, 9:53 AM IST
ಬೆಂಗಳೂರು: ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳಾ ಟೆಕಿಯೊಬ್ಬರು ಮೃತಪಟ್ಟಿರುವ ಘಟನೆ ವರ್ತೂರು ಮುಖ್ಯರಸ್ತೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ನಗರದ ಚನ್ನಸಂದ್ರ ನಿವಾಸಿ ದೀಪಿಕಾ (27) ಮೃತ ಉದ್ಯೋಗಿ. ದಾವಣಗೆರೆ ಮೂಲದ ದೀಪಿಕಾ, ನಗರದ ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಸೋಮವಾರ ತಡರಾತ್ರಿ 11.30ರ ಸುಮಾರಿಗೆ ಕೋರಮಂಗಲದಲ್ಲಿನ ಸ್ನೇಹಿತೆಯ ಮನೆಗೆ ಹೋಗಿದ್ದ ಅವರು, ಊಬರ್ ಆ್ಯಪ್ನಲ್ಲಿ ಬೈಕ್ ಬುಕ್ ಮಾಡಿಕೊಂಡು ಚನ್ನಸಂದ್ರದ ಮನೆಗೆ ವಾಪಸ್ ಹೋಗುತ್ತಿದ್ದರು. ಅದೇ ವೇಳೆ ಹಿಂದಿನಿಂದ ಅತೀ ವೇಗವಾಗಿ ಬಂದ ಟಿಪ್ಪರ್ ಲಾರಿ ಚಾಲಕ ಊಬರ್ ಬೈಕ್ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕೆಳಗೆ ಬಿದ್ದ ದೀಪಿಕಾ ಕಾಲ ಮೇಲೆ ಲಾರಿಯ ಚಕ್ರಗಳು ಹರಿದಿವೆ. ಕೂಡಲೇ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮುಂಜಾನೆ ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಟಿಪ್ಪರ್ ಲಾರಿ ಚಾಲಕ ಕನಯ್ಯಲಾಲ್ನನ್ನು ಬಂಧಿಸಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು. ವೈಟ್ಫೀಲ್ಡ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.