Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು
Team Udayavani, Dec 27, 2024, 8:28 PM IST
ಬೆಂಗಳೂರು: ಕಾರು ಢಿಕ್ಕಿ ಹೊಡೆದ ಪರಿಣಾಮ ಪದ್ಮನಾಭನಗರ ನಿವಾಸಿ, ಸಾಫ್ಟ್ವೇರ್ ಎಂಜಿನಿಯರ್ ಮೃತಪಟ್ಟಿರುವ ಘಟನೆ ಬನಶಂಕರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಶಿವಮೊಗ್ಗ ಮೂಲದ ಗುರುದತ್ (38) ಮೃತ ಟೆಕಿ ಎಂದು ಗುರುತಿಸಲಾಗಿದೆ. ಇವರು ನಗರದ ಇಟ್ಟಮಡುವಿನಲ್ಲಿ ವಾಸವಾಗಿದ್ದರು.
ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದ ಗುರುದತ್ ಅವರು ತಮ್ಮ ಸ್ನೇಹಿತರ ಜೊತೆಗೆ ಕಾಫಿ ಕುಡಿಯಲು ರಾತ್ರಿ ಪದ್ಮನಾಭನಗರದ ಹೋಟೆಲ್ಗೆ ಬಂದಾಗ ದುರ್ಘಟನೆ ನಡೆದಿದೆ. ಗುರುದತ್ ಅವರು ಹೋಟೆಲ್ ಸಮೀಪದ ರಸ್ತೆ ಬದಿಯಲ್ಲಿ ತಮ್ಮ ದ್ವಿಚಕ್ರ ವಾಹನ ನಿಲ್ಲಿಸಿಕೊಂಡು ನಿಂತಿದ್ದರು. ಇದೇ ಸಂದರ್ಭದಲ್ಲಿ ಎದುರುಗಡೆಯಿಂದ ಅತಿ ವೇಗವಾಗಿ ಬಂದ ಕಾರು ಗುರುದತ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗುರುದತ್ ತಲೆಗೆ ತೀವ್ರ ಪೆಟ್ಟಾಗಿ ಕುಸಿದು ಬಿದ್ದಿದ್ದಾರೆ. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.
ಈ ಸಂಬಂಧ ಬನಶಂಕರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ಮುಂದುವರಿದ ಕರಡಿಗಳ ಹಾವಳಿ; ಸ್ಥಳೀಯರಲ್ಲಿ ತೀವ್ರ ಆತಂಕ
New Year:ಹೊಸ ವರುಷ-ಹೊಸ ಹರುಷ 2025:ಕಾಲಚಕ್ರ ಮತ್ತೆ ತಿರುಗಿದೆ…ಹೊಸತು ಕಾಯುತ್ತಿದೆ!
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.