Road Mishap: ಜಾಲಿರೇಡ್ಗೆ ತೆರಳಿದ್ದ ಇಬ್ಬರ ದುರ್ಮರಣ
Team Udayavani, Aug 14, 2023, 10:14 AM IST
ಬೆಂಗಳೂರು: ಜಾಲಿರೇಡ್ಗೆ ತೆರಳಿ ವಾಪಸ್ ಮನೆ ಕಡೆ ಬರು ವಾಗ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರ್ಗಳು ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಯಲಹಂಕ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮತ್ತಿಕೆರೆ ನಿವಾಸಿಗಳಾದ ಕಾರ್ತಿಕ್(23) ಮತ್ತು ಆದರ್ಶ್ (23) ಮೃತ ಎಂಜಿನಿಯರ್ಗಳು. ಅವರ ಮೂವರು ಸ್ನೇಹಿ ತರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯು ತ್ತಿದ್ದಾರೆ.
ಕಾರ್ತಿಕ್ ಮತ್ತು ಆದರ್ಶ್ ಹಾಗೂ ಇತರೆ ಮೂವರು ಸ್ನೇಹಿತರು ಶನಿವಾರ ತಡರಾತ್ರಿ ಸ್ನೇಹಿತರೊಬ್ಬರ ಕಾರಿನಲ್ಲಿ ನಂದಿ ಬೆಟ್ಟಕ್ಕೆ ಹೋಗುತ್ತಿದ್ದರು. ಆದರೆ, ಮಾರ್ಗ ಮಧ್ಯೆ ನಸುಕಿನ ಮೂರು ಗಂಟೆಗೆ ಹುಣಸಮಾರನಹಳ್ಳಿ ಕಡೆಯಿಂದ ವಾಪಸ್ ಬೆಂಗಳೂರಿನ ಕಡೆ ಬಂದಿದ್ದಾರೆ.
ಈ ವೇಳೆ ಕಾರ್ತಿಕ್ ಕಾರು ಚಾಲನೆ ಮಾಡುತ್ತಿದ್ದು, ಪಕ್ಕದಲ್ಲೇ ಆದರ್ಶ್ ಕುಳಿತಿದ್ದ. ಹಿಂಭಾಗದಲ್ಲಿ ಮೂವರು ಸ್ನೇಹಿತರು ಕುಳಿತಿದ್ದರು. ಬಳ್ಳಾರಿ ರಸ್ತೆಯ ದೇವನಹಳ್ಳಿ ಸಮೀಪದ ಪಾಲನ ಹಳ್ಳಿ ಗೇಟ್ ಬಳಿ ನಿಯಂತ್ರಣ ಕಳೆದುಕೊಂಡ ಕಾರ್ತಿಕ್, ಸರ್ವೀಸ್ ರಸ್ತೆ ವಿಭಜಕದ ಕಬ್ಬಿಣದ ಗ್ರಿಲ್ಗೆ ಡಿಕ್ಕಿ ಹೊಡೆದಿ ದ್ದಾನೆ. ಪರಿಣಾಮ ಇಬ್ಬರು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿ ದ್ದಾರೆ. ಹಿಂಭಾಗದಲ್ಲಿ ಕುಳಿತಿದ್ದ ಮೂವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು. ಯಲಹಂಕ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.