ಕೇಂದ್ರ ಭಾಗದ ರಸ್ತೆಗಳು ಶೀಘ್ರ ಸ್ಮಾರ್ಟ್!
Team Udayavani, Jul 10, 2017, 11:36 AM IST
ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಎಲ್ಲ ಪ್ರಮುಖ ರಸ್ತೆಗಳನ್ನು ಟೆಂಡರ್‌ಶ್ಯೂರ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಬಿಬಿಎಂಪಿ ಯೋಜನೆ ರೂಪಿಸಿದೆ. ಅದರ ಅಂಗವಾಗಿ ಸದ್ಯ ಪ್ರಮುಖ ಆರು ರಸ್ತೆಗಳನ್ನು ಟೆಂಡರ್‌ಶ್ಯೂರ್ ರಸ್ತೆಗಳಾಗಿ ಪರಿವರ್ತಿಸುವ ಯೋಜನೆ ಸಿದ್ಧಪಡಿಸಿದೆ.
ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಸ್ಮಾರ್ಟ್‌ಸಿಟಿ ಯೋಜನೆಗೆ ಗಾಂಧಿನಗರ, ಶಿವಾಜಿನಗರ, ಚಾಮರಾಜಪೇಟೆ ಹಾಗೂ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರಗಳ 16 ವಾರ್ಡ್‌ಗಳನ್ನು ಗುರುತಿಸಲಾಗಿದೆ. ಅದರ ಹೊರತಾಗಿರುವ ಹಲವು ರಸ್ತೆಗಳನ್ನು ಅಭಿವೃದ್ಧಿಪಡಿಸಲು ಪಾಲಿಕೆಯ ಅಧಿಕಾರಿಗಳು ಯೋಜನೆ ರೂಪಿಸಿದ್ದು, ಗಾಂಧಿನಗರ ಹಾಗೂ ಚಾಮರಾಜಪೇಟೆ ವ್ಯಾಪ್ತಿಯ ಆರು ರಸ್ತೆಗಳನ್ನು ಟೆಂಡರ್ ಶ್ಯೂರ್ ಯೋಜನೆಗೆ ಆಯ್ಕೆ ಮಾಡಿಕೊಂಡಿದ್ದಾರೆ.
ಸ್ಮಾರ್ಟ್‌ಸಿಟಿ ಯೋಜನೆಯ ಸ್ಪರ್ಧೆಗೆ ತಯಾರಿಸಿರುವ ಪ್ರಸ್ತಾವನೆಯಲ್ಲಿ ಟೆಂಡರ್‌ಶ್ಯೂರ್ ಮಾದರಿ ರಸ್ತೆಗಳ ನಿರ್ಮಾಣ ಯೋಜನೆ ಅಧಿಕಾರಿಗಳು ಉಲ್ಲೇಖೀಸಿದ್ದಾರೆ. ಅದರಂತೆ ಅತಿಹೆಚ್ಚು ಜನಸಂದಣಿಯಿರುವ ಮೆಜೆಸ್ಟಿಕ್, ಕೆ.ಆರ್.ಮಾರುಕಟ್ಟೆಯಂತಹ ಭಾಗಗಳಲ್ಲಿನ ರಸ್ತೆಗಳನ್ನೂ ಟೆಂಡರ್‌ಶ್ಯೂರ್ ರಸ್ತೆಗಳಾಗಿ ಅಭಿವೃದ್ಧಿಪಡಿಸಲು ಅಧಿಕಾರಿಗಳು ಟೆಂಡರ್ ಅಂತಿಮಗೊಳಿಸಿ, ಕಡತವನ್ನು ಸರ್ಕಾರ ಅನುಮೋದನೆಗೆ ಕಳುಹಿಸಿದ್ದಾರೆ.
ಗಾಂಧಿನಗರ ಹಾಗೂ ಚಾಮರಾಜಪೇಟೆ ವಿಧಾನ ಸಭೆ ಕ್ಷೇತ್ರದಲ್ಲಿನ ಆರು ರಸ್ತೆಗಳನ್ನು ಟೆಂಡರ್‌ಶ್ಯೂರ್ ಮಾದರಿಯಡಿಯಲ್ಲಿ ಅಭಿವೃದ್ಧಿಪಡಿಸಲು ಪಾಲಿಕೆ ತೀರ್ಮಾನಿಸಿದೆ. ಸುಮಾರು 200 ಕೋಟಿ ರೂ. ವೆಚ್ಚದಲ್ಲಿ ನಗರದ ಕೇಂದ್ರ ಭಾಗದಲ್ಲಿರುವ 10 ಕಿಲೋ ಮೀಟರ್‌ಗೂ ಹೆಚ್ಚಿನ ವ್ಯಾಪ್ತಿಯ ರಸ್ತೆಗಳನ್ನು ಟೆಂಡರ್ ಶ್ಯೂರ್ ಅಡಿಯಲ್ಲಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ.
ಐತಿಹಾಸಿಕ ಮಾರುಕಟ್ಟೆ ಮೇಲ್ದರ್ಜೆಗೆ
ನಗರದ ಅತ್ಯಂತ ಪುರಾತನವಾದ ಕೃಷ್ಣರಾಜ ಮಾರುಕಟ್ಟೆಯನ್ನು (ಕೆ.ಆರ್.ಮಾರುಕಟ್ಟೆ) ಮೇಲ್ದರ್ಜೆàರಿಸಲು ಬಿಬಿಎಂಪಿ ವತಿಯಿಂದ ಯೋಜನೆ ರೂಪಿಸಲಾಗಿದೆ. ಅದರಂತೆ ಸ್ಮಾರ್ಟ್‌ಸಿಟಿ ಯೋಜನೆಯಡಿ ಮಾರುಕಟ್ಟೆ ಅಭಿವೃದ್ಧಿಗೆ ನಗರಾಭಿವೃದ್ಧಿ ಇಲಾಖೆ ಶೀಘ್ರದಲ್ಲಿಯೇ ಟೆಂಡರ್ ಆಹ್ವಾನಿಸಲಿದೆ. ಸ್ಮಾರ್ಟ್‌ಸಿಟಿ ಯೋಜನೆ ಪ್ರಸ್ತಾವನೆಯಲ್ಲಿ ಪಾರಂಪರಿಕ ಮಾರುಕಟ್ಟೆಯ ಸೌಂದರ್ಯ ಹೆಚ್ಚಿಸುವುದರೊಂದಿಗೆ ಸುಸಜ್ಜಿತ ಮಳಿಗೆಗಳು, ವಾಹನ ನಿಲುಗಡೆ ವ್ಯವಸ್ಥೆಯಂತಹ ಸೌಲಭ್ಯಗಳನ್ನು ಕಲ್ಪಿಸುವ ವಿಚಾರವನ್ನು ಉಲ್ಲೇಖೀಸಲಾಗಿದೆ.
ಯೋಜನೆಗೆ ಆಯ್ಕೆಯಾದ ರಸ್ತೆಗಳು
-ರಸ್ತೆ ಉದ್ದ (ಕಿಲೋ ಮೀಟರ್‌ಗಳಲ್ಲಿ)
-ಸುಬೇದಾರ್ ಛತ್ರಂ ರಸ್ತೆ-0.60
-ಗುಬ್ಬಿ ತೋಟದಪ್ಪ ರಸ್ತೆ-1.68
-ಧನ್ವಂತರಿ ರಸ್ತೆ-1.05
-ಡಬ್ಲ್ಯು.ಎಚ್.ಹನುಮಂತಪ್ಪ ರಸ್ತೆ-0.68
-ಗಾಂಧಿನಗರ ಸುತ್ತಮುತ್ತಲಿನ ರಸ್ತೆಗಳು-4.60
-ಕೆ.ಆರ್.ಮಾರುಕಟ್ಟೆ ಬಳಿ ರಸ್ತೆಗಳು-2.00
-ಒಟ್ಟು-10.61
ಬಿಬಿಎಂಪಿ ವತಿಯಿಂದ ಕೇಂದ್ರ ಭಾಗದಲ್ಲಿರುವ ಆರು ರಸ್ತೆಗಳನ್ನು ಟೆಂಡರ್‌ಶ್ಯೂರ್ ಯೋಜನೆಯಡಿ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಈಗಾಗಲೇ ಟೆಂಡರ್‌ಅಂತಿಮಗೊಳಿಸಿ ಸರ್ಕಾರದ ಅನುಮೋದನೆಗಾಗಿ ಕಳುಹಿಸಲಾಗಿದೆ. ಸದ್ಯ ಯೋಜನೆ ರೂಪಿಸಿರುವ ಆರು ರಸ್ತೆಗಳು ಸ್ಮಾರ್ಟ್‌ಸಿಟಿ ಯೋಜನೆಯಡಿಯಲ್ಲಿ ಬರುವುದಿಲ್ಲ.
-ಎನ್. ಮಂಜುನಾಥ್ ಪ್ರಸಾದ್, ಬಿಬಿಎಂಪಿ ಆಯುಕ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.