ಸಹಾಯಧನಕ್ಕಾಗಿ ಬೀದಿ ವ್ಯಾಪಾರಿಗಳ ಅಲೆದಾಟ
Team Udayavani, Jul 5, 2021, 4:58 PM IST
ಬೆಂಗಳೂರು: ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳಆತ್ಮ ನಿರ್ಭರ್ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ರೂ. ಆರ್ಥಿಕಸಹಾಯ ಧನ ಘೋಷಣೆ ಮಾಡಿದೆ.
ಆದರೆ ಆಹಣವನ್ನು ಪಡೆಯಲು ಬೀದಿಬದಿ ವ್ಯಾಪಾರಿಗಳು ಬ್ಯಾಂಕ್‌ಗಳಿಗೆ ದಿನ ಪ್ರತಿ ಅಲೆದಾಟನಡೆಸುವ ಪರಿಸ್ಥಿತಿಎದುರಾಗಿದೆ.ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ನೀಡಿರುವ ಕೇಂದ್ರದಸಹಾಯಧನ ಪಡೆಯಲು ರಾಜ್ಯದಸುಮಾರು 2.4 ಲಕ್ಷ ಬೀದಿ ಬದಿ ವ್ಯಾಪಾರಿಗಳು ಅರ್ಜಿಸಲ್ಲಿಕೆ ಮಾಡಿದ್ದರು.
ಅದರಲ್ಲಿ ಸುಮಾರು 1.2 ಲಕ್ಷಫಲಾನುಭವಿಗಳಿಗೆ ಸಹಾಯಧನ ಬಿಡುಗಡೆ ಆಗಿದೆ.ಆದರೆ ಬಿಡುಗಡೆ ಆಗಿರುವ ಆ ಹಣಪಡೆಯಲು ಆಗುತ್ತಿಲ್ಲ ಎಂಬ ಅಳಲು ಬೀದಿ ಬದಿ ವ್ಯಾಪಾರಿಗಳದ್ದಾಗಿದೆ.ಆರ್ಥಿಕ ಸಂಕÐದ r ಹಿನ್ನೆಲೆಯಲ್ಲಿ ಈಗಾಗಲೇ ಕೆಲವುಬೀದಿಬದಿ ವ್ಯಾಪಾರಿಗಳು ಕೆಲವು ಬ್ಯಾಂಕ್‌ಗಳಲ್ಲಿ ಸಾಲಮಾಡಿದ್ದಾರೆ.
ಆ ಹಣದ ಸಾಲದ ಕಂತನ್ನು ಇನ್ನೂ ಸರಿಯಾಗಿ ತೀರಿಸಿಲ್ಲ. ಆ ಹಿನ್ನೆಲೆಯಲ್ಲಿಯೇ ಈಗ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ ಯೋಜನೆಯ ಸಹಾಯ ಧನನೀಡಲು ವಿಳಂಬ ಮಾಡಲಾಗುತ್ತಿದೆ ಎಂದುಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ದೂರಿದೆ.
ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ಬೀದಿ ಬದಿವ್ಯಾಪಾರಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಆರ್ಥಿಕ ಸಹಾಯ ನೀಡಿದೆ.ಆದರೆ ಈಗ ದೇವರು ಕೊಟ್ಟರು ಪೂಜಾರಿ ಕೊಡುತ್ತಿಲ್ಲಎನ್ನುವಂತಾಗಿದೆ ಬೀದಿ ಬದಿ ವ್ಯಾಪಾರಿಗಳ ಸ್ಥಿತಿ ಎಂದುಇಸ್ರೋ ಲೇಔಟ್ ನಿವಾಸಿ ಲಕ್ಷ್ಮೀ ಆರೋಪಿಸಿದರು.
ಆನ್‌ಲೈನ್‌ನಲ್ಲಿ ಯೋಜನೆ ಆಯ್ಕೆ ಆಗಿರುವುದರಬಗ್ಗೆ ಮಾಹಿತಿ ನೀಡುತ್ತದೆ.ಆದರೆಬ್ಯಾಂಕ್‌ಅಧಿಕಾರಿಗಳುಇನ್ನೂ ನಮ್ಮ ಬ್ಯಾಂಕ್‌ಗೆ ನಿಮ್ಮ ದಾಖಲಾತಿ ಬಂದಿಲ್ಲಎಂದು ಹೇಳುತ್ತಾರೆ ಎಂದು ದೂರಿದರು.
ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ: ಆತ್ಮನಿರ್ಭರ್ ನಿಧಿ ಯೋಜನೆಯಡಿ ಸಹಾಯ ಧನಕ್ಕೆಆಯ್ಕೆಯಾದ ಫಲಾನುಭವಿಗಳಿಗೆ ಹಣ ಬ್ಯಾಂಕ್‌ನಿಂದಕೈಸೇರುತ್ತಿಲ್ಲದಿರುವುದರ ಬಗ್ಗೆ ಈಗಾಗಲೇ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯಇಲಾಖೆಯ ಹಿರಿಯ ಅಧಿಕಾರಿಗಳಿಗೆ ಗಮನಕ್ಕೆ ತರಲಾಗಿದೆ ಎಂದು ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಸಿ.ಇ.ರಂಗಸ್ವಾಮಿಹೇಳಿದ್ದಾರೆ.
ಹಲವು ಬೀದಿ ಬದಿ ವ್ಯಾಪಾರಿಗಳು ಕೂಡ ತಮಗೆಆಗುತ್ತಿರುವ ಅನ್ಯಾಯದ ಬಗ್ಗೆ ಸಂಘದ ಗಮನಕ್ಕೆತಂದಿದ್ದಾರೆ.ಬ್ಯಾಂಕ್‌ಅಧಿಕಾರಿಗಳನಿರ್ಲಕ್ಷ Âಧೋರಣೆಬಗ್ಗೆ ಕೌಶಲ್ಯ ಮಿಷನ್ ಅಧಿಕಾರಿಗಳ ಗಮನಕ್ಕೆತರಲಾಗಿದೆ. ಬ್ಯಾಂಕ್ ಅಧಿಕಾರಿಗಳ ಜತೆಗೆ ಮಾತುಕತೆನಡೆಸುವುದಾಗಿ ಭರವಸೆ ನೀಡಿದ್ದಾರೆ ಎಂದುತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್ ಸಿಂಗ್
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.