ಸೇಲ್ಸ್‌ಮನ್‌ನ ಮನೆಗೆ ನುಗ್ಗಿ ದರೋಡೆ
Team Udayavani, Feb 6, 2018, 11:56 AM IST
ಬೆಂಗಳೂರು: ಮನೆಗೆ ನುಗ್ಗಿದ್ದ ದುಷ್ಕರ್ಮಿಗಳ ತಂಡವೊಂದು ಚಿನ್ನಾಭರಣ ಡೆಲವರಿ ಮಾಡುವ ಸೇಲ್ಸ್‌ಮನ್ ಕೈ-ಕಾಲು ಕಟ್ಟಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ಹಣ ದೋಚಿ ಪರಾರಿಯಾಗಿರುವ ಘಟನೆ ಹಲಸೂರು ಗೇಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಸಂಬಂಧ ಜ.24ರಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚೆನ್ನೈನ ಕೇಸರ್ ಜ್ಯುವೆಲ್ಲರಿಯಲ್ಲಿ ಸೇಲ್ಸ್‌ಮನ್ ಆಗಿರುವ ನಗರದ ಸಂತೋಷ್ ಚೆನ್ನೈನಿಂದ ಚಿನ್ನಾಭರಣಗಳನ್ನು ತಂದು ನಗರದ ವಿವಿಧ ಮಳಿಗೆಗಳಿಗೆ ಪೂರೈಸುತ್ತಾರೆ. ಜ.22ರಂದು 2 ಕೆ.ಜಿ. ಚಿನ್ನಾಭರಣ ತಂದಿದ್ದು, ಒಂದೂವರೆ ಕೆ.ಜಿ ಚಿನ್ನಾಭರಣ ಸರಬರಾಜು ಮಾಡಿ 4.95 ಲಕ್ಷ ರೂ. ತಮ್ಮ ಬಳಿ ಇಟ್ಟುಕೊಂಡಿದ್ದರು.
ಜ.24ರಂದು ಬೆಳಗ್ಗೆ 9 ಗಂಟೆಗೆ ಮಹಿಳೆಯೊಬ್ಬರು ಸುಗಂಧ ದ್ರವ್ಯ ಮಾರಾಟ ನೆಪದಲ್ಲಿ ಸಂತೋಷ್ ಮನೆ ಬಂದಿದ್ದಾರೆ. ಇದೇ ವೇಳೆ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಏಕಾಏಕಿ ಸಂತೋಷ್ ಮೇಲೆ ದಾಳಿ ನಡೆಸಿ, ಕೈ-ಕಾಲು ಕಟ್ಟಿ, ಹಣ, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಸಂತೋಷ್ ಹಲಸೂರು ಗೇಟ್ ಠಾಣೆಗೆ ದೂರು ನೀಡಿದ್ದು, ಆರೋಪಿಗಳ ಪತ್ತೆಗಾಗಿ ಸ್ಥಳೀಯ ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.