ಎರಡನೇ ಬಾರಿ ಹೈಕೋರ್ಟ್ ಮೊರೆಹೋದ ರೋಹಿಣಿ
Team Udayavani, Apr 21, 2018, 6:20 AM IST
ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡಿದ್ದ ರಾಜ್ಯಸರ್ಕಾರದ ಕ್ರಮ ಎತ್ತಿಹಿಡಿದಿರುವ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ (ಸಿಎಟಿ) ತೀರ್ಪು ಪ್ರಶ್ನಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತೂಮ್ಮೆ ಹೈಕೋರ್ಟ್ ಮೊರೆಹೋಗಿದ್ದಾರೆ.
ಜ. 22ರಂದು ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಚುನಾವಣಾ ಆಯೋಗ, ಆಯೋಗದ ಗಮನಕ್ಕೆ ತಾರದೆ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆಗೊಳಿಸಬೇಡಿ ಎಂದು ತಾಕೀತು ಮಾಡಿತ್ತು. ಹೀಗಿದ್ದರೂ ಸರ್ಕಾರ ಮಾ. 7ರಂದು ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಿದ್ದು, ಈ ಕ್ರಮವನ್ನು ಸಿಎಟಿ ಎತ್ತಿ ಹಿಡಿದಿದೆ. ಅಲ್ಲದೆ, ಐಎಎಸ್ ಅಧಿಕಾರಿ ರಣದೀಪ್ ಅವರಿಗೆ ಹಾಸನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳುವಂತೆ ಸೂಚನೆ ನೀಡಿದ್ದು, ಈ ಕ್ರಮ ಸರಿಯಲ್ಲ ಎಂದು ಆಕ್ಷೇಪಿಸಿ ರೋಹಿಣಿ ಸಿಂಧೂರಿ ಅರ್ಜಿ ಸಲ್ಲಿಸಿದ್ದಾರೆ.
ಇದು ಏ. 23ರಂದು ವಿಚಾರಣೆಗೆ ಬರುವ ಸಾಧ್ಯತೆಯಿದೆ. ಈ ಹಿಂದೆ ತಮ್ಮ ವರ್ಗಾವಣೆ ಪ್ರಶ್ನಿಸಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ, ಮುಖ್ಯಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿ ಎಂದು ಸಿಎಟಿ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಪ್ರಕರಣವನ್ನು ಸಿಎಟಿಗೆ ಹಿಂತಿರುಗಿಸಿತ್ತು. ಅದರಂತೆ ವಿಚಾರಣೆ ನಡೆಸಿದ್ದ ಸಿಇಟಿ ಸರ್ಕಾರದ ವರ್ಗಾವಣೆ ಆದೇಶ ಎತ್ತಿಹಿಡಿದು ಏ.17ರಂದು ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಸಿಂಧೂರಿ ಎರಡನೇ ಬಾರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.