ರಾಜ್ಯ ಸಂಚಾರ-ರಸ್ತೆಸುರಕ್ಷತಾ ವಿಭಾಗ:ಡಿಐಜಿಯಾಗಿ ರೂಪಾ ಅಧಿಕಾರಸ್ವೀಕಾರ
Team Udayavani, Jul 19, 2017, 6:00 AM IST
ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದ ಅಕ್ರಮಗಳನ್ನು ಬಯಲಿಗೆಳೆದು ಸರಕಾರದ ಕೆಂಗಣ್ಣಿಗೆ ಗುರಿಯಾಗಿ ವರ್ಗಾವಣೆಯಾದ ಹಿರಿಯ ಐಪಿಎಸ್ ಅಧಿಕಾರಿ ರೂಪಾ ಡಿ. ಮೌದ್ಗಿಲ್ ಮಂಗಳವಾರ ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ ಡಿಐಜಿಯಾಗಿ ಅಧಿಕಾರ ಸ್ವೀಕರಿಸಿದರು. ಅಪರಾಹ್ನ 1.30ರ ಸುಮಾರಿಗೆ ನೃಪತುಂಗ ರಸ್ತೆ ಯಲ್ಲಿರುವ ಪೊಲೀಸ್ ಪ್ರಧಾನ ಕಚೇರಿ ಆವರಣದಲ್ಲಿರುವ ಕಚೇರಿಗೆ ಆಗಮಿಸಿದ ರೂಪಾ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಆರ್.ಕೆ. ದತ್ತಾ ಅವರನ್ನು ಭೇಟಿಯಾಗಿ ಕೆಲವು ಕಾಲ ಚರ್ಚೆ ನಡೆಸಿದರು. ಬಳಿಕ ತಮ್ಮ ಕೊಠಡಿಗೆ ತೆರಳಿ ಅಧಿಕಾರ ವಹಿಸಿಕೊಂಡರು.
ಪತ್ರಕರ್ತರೊಂದಿಗೆ ಮಾತನಾಡಿದ ರೂಪಾ, ಇಲ್ಲಿ ಭಾವನೆಗಳ ಪ್ರಶ್ನೆ ಉದ್ಭವಿಸುವುದಿಲ್ಲ. ಸರಕಾರದ ಆದೇಶವನ್ನು ಪಾಲಿಸುವುದು ನಮ್ಮ ಕರ್ತವ್ಯ. ಪೊಲೀಸ್ ಇಲಾಖೆಯಲ್ಲಿ ಒಳ್ಳೆಯ ವಿಭಾಗ, ಕೆಟ್ಟ ವಿಭಾಗ ಎಂಬುದಿಲ್ಲ. ಎಲ್ಲವೂ ಒಳ್ಳೆಯ ವಿಭಾಗಗಳೇ. ಸರಕಾರ ನೀಡಿರುವ ವರ್ಗಾವಣೆಯನ್ನು ಶಿಕ್ಷೆ ಎಂದು ಪರಿಗಣಿಸುವುದಿಲ್ಲ. ಇದೊಂದು ಸಾಮಾನ್ಯ ಪ್ರಕ್ರಿಯೆ. ಅದನ್ನು ಪಾಲಿಸಿದ್ದೇನೆ ಅಷ್ಟೆ ಎಂದರು.
ಮೇಘರಿಕ್ ಅಧಿಕಾರ ಸ್ವೀಕಾರ
ಬಂಧೀಖಾನೆ ಇಲಾಖೆಯ ಎಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಎನ್.ಎಸ್. ಮೇಘರಿಕ್ ಮಂಗಳವಾರ ಮಧ್ಯಾಹ್ನ ಅಧಿಕಾರ ಸ್ವೀಕರಿಸಿದರು. ಜೈಲಿನ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ವರ್ಗಾವಣೆಗೊಂಡ ಡಿಜಿ ಎಚ್.ಎನ್. ಸತ್ಯನಾರಾಯಣ ರಾವ್ ಅವರು ಮೇಘರಿಕ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಅನಂತರ ಇಬ್ಬರು ಅಧಿಕಾರಿಗಳು ಅರ್ಧ ಗಂಟೆಗೂ ಅಧಿಕ ಕಾಲ ಸಮಾಲೋಚನೆ ನಡೆಸಿದರು.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಎನ್.ಎಸ್. ಮೇಘರಿಕ್, ಸರಕಾರದ ಆದೇಶದಂತೆ ಅಧಿಕಾರ ಸ್ವೀಕರಿಸಿದ್ದೇನೆ. ಜತೆಗೆ ಇದೇ ಪರಪ್ಪನ ಅಗ್ರಹಾರ ಕಾರಾಗೃಹದ ಹಿರಿಯ ಐಪಿಎಸ್ ಅಧಿಕಾರಿಗಳ ನೇತೃತ್ವದ ಸಮಿತಿಯ ಸದಸ್ಯನಾಗಿದ್ದೆ. ಹೀಗಾಗಿ ಕಾರಾಗೃಹ ಇಲಾಖೆಯ ಕಾರ್ಯವೈಖರಿ ಬಗ್ಗೆ ಸ್ವಲ್ಪ ಮಟ್ಟಿಗೆ ಅನುಭವ ಇದೆ. ಕಾರಾಗೃಹದಲ್ಲಿ ನಡೆದ ಅಕ್ರಮದ ಬಗ್ಗೆ ಮಾಹಿತಿ ಇದೆ. ಅಕ್ರಮದ ಬಗ್ಗೆ ಈಗಾಗಲೇ ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ತನಿಖೆ ನಡೆಸುತ್ತಿದ್ದು, ಅವರಿಗೆ ಸಹಕರಿಸುತ್ತೇನೆ ಎಂದರು.
ರೂಪಾ ಜಾಗಕ್ಕೆ ಎಚ್.ಎಸ್. ರೇವಣ್ಣ ನೇಮಕ
ರೂಪಾ ಡಿ. ಮೌದ್ಗಿಲ್ ಅವರ ಜಾಗಕ್ಕೆ ಹಿರಿಯ ಐಪಿಎಸ್ ಅಧಿಕಾರಿ ಡಿಐಜಿ ಎಚ್.ಎಸ್. ರೇವಣ್ಣ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಿಸಿದೆ. ಇದರೊಂದಿಗೆ ಪರಪ್ಪನ ಅಗ್ರಹಾರ ಕಾರಾಗೃಹದ ಮುಖ್ಯಅಧೀಕ್ಷರಾಗಿಯೂ ಹೆಚ್ಚುವರಿ ಹೊಣೆ ನೀಡಲಾಗಿದೆ. ಈ ಮಧ್ಯೆ ಜೈಲಿನ ಅಧೀಕ್ಷಕಿ ಅನಿತಾ ಮಂಗಳವಾರ ಮುಖ್ಯ ಅಧೀಕ್ಷಕರಾಗಿ ಹೆಚ್ಚುವರಿ ಅಧಿಕಾರ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.