ರೋಶಿನಿ ವಿದ್ಯಾರ್ಥಿ ಕಲಿಕಾ ಕಿಟ್ ಬಿಡುಗಡೆ
Team Udayavani, Jan 5, 2019, 6:40 AM IST
ಬೆಂಗಳೂರು: ಬಿಬಿಎಂಪಿ ರೋಶಿನಿ ಯೋಜನೆಯಡಿ ಕಲಿಕೆಗೆ ಸಂಬಂಧಿಸಿದ 300ಕ್ಕೂ ಹೆಚ್ಚಿನ ಕಾರ್ಯಕ್ರಮಗಳಿರುವ “ವಿದ್ಯಾರ್ಥಿ ಕಲಿಕಾ ಕಿಟ್’ ಅನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಶುಕ್ರವಾರ ಬಿಡುಗಡೆಗೊಳಿಸಿದರು.
ಈ ಕುರಿತು ಮಾಹಿತಿ ನೀಡಿದ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್, ಮೈಕ್ರೋಸಾಫ್ಟ್ ಹಾಗೂ ಟೆಕ್‌ಅವಾಂತ್ ಸಂಸ್ಥೆಗಳು ಪಾಲಿಕೆಯ ಎಲ್ಲ 156 ಶಾಲಾ-ಕಾಲೇಜು ಮಕ್ಕಳಿಗೆ ವಿದ್ಯಾರ್ಥಿ ಕಲಿಕಾ ಕಿಟ್ ನೀಡಲಿವೆ. ಕಿಟ್‌ನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ 300 ಕಾರ್ಯಕ್ರಮಗಳಿರುವ ಪೆನ್ ಡ್ರೈವ್ ನೀಡಲಾಗುತ್ತದೆ. ಅದರಲ್ಲಿರುವ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳನ್ನು ಹಲವಾರು ವಿಷಯಗಳನ್ನು ಸುಲಭವಾಗಿ ತಿಳಿಯಬಹುದಾಗಿದೆ ಎಂದರು.
ಪಾಲಿಕೆಯಿಂದ ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೆ ಟ್ಯಾಬ್ ನೀಡಲಾಗುತ್ತದೆ. ಆ ಹಿನ್ನೆಲೆಯಲ್ಲಿ 45 ಕೋಟಿ ರೂ. ವೆಚ್ಚದಲ್ಲಿ ವಿದ್ಯಾರ್ಥಿಗಳು ಕಲಿಕಾ ಕಿಟ್ ನೀಡಲು ಮುಂದಾಗಿದ್ದು ಕಿಟ್‌ನಲ್ಲಿರುವ ಕಾರ್ಯಕ್ರಮಗಳನ್ನು ಟ್ಯಾಬ್‌ನಲ್ಲಿ ಅಥವಾ ಮನೆಯಲ್ಲಿರುವ ಕಂಪ್ಯೂಟರ್‌ನಲ್ಲಿ ಅಳವಡಿಕೆ ಮಾಡಿಕೊಳ್ಳಬಹುದಾಗಿದೆ. ಪಾಲಿಕೆಯಿಂದ ಪ್ರಮಾಣೀಕರಿಸಿದ ವಿದ್ಯಾರ್ಥಿಗಳು ಮಾತ್ರವೇ ಆ ಕಾರ್ಯಕ್ರಮಗಳನ್ನು ಅಳವಡಿಸಿಕೊಳ್ಳಬಹುದಾಗಿದ್ದು, ಬೇರೆಯವರಿಗೆ ದೊರೆಯಲು ಸಾಧ್ಯವಿಲ್ಲ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮೇಯರ್ ಗಂಗಾಂಬಿಕೆ, ಉಪಮೇಯರ್ ಭದ್ರೇಗೌಡ, ಆಡಳಿತ ಪಕ್ಷ ನಾಯಕ ಎಂ.ಶಿವರಾಜು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.