Arrested: ರೌಡಿ ಕೊಲೆ; 20 ವರ್ಷ ಬಳಿಕ ಚಿತ್ರ ನಿರ್ದೇಶಕ ಸೆರೆ
Team Udayavani, Jul 18, 2024, 10:47 AM IST
ಬೆಂಗಳೂರು: ವಿಲ್ಸನ್‌ಗಾರ್ಡನ್ ಠಾಣೆ ವ್ಯಾಪ್ತಿ ಯಲ್ಲಿ 2004ರಲ್ಲಿ ನಡೆದಿದ್ದ ರೌಡಿಶೀಟರ್ ಕೊಲೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಸಿನಿಮಾ ನಿರ್ದೇಶಕನನ್ನು ಸಿಸಿಬಿಯ ಸಂಘಟಿತ ಅಪರಾಧ ದಳದ ಪೊಲೀಸರು 20 ವರ್ಷಗಳ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸದ್ದುಗುಂಟೆಪಾಳ್ಯ ನಿವಾಸಿ ಗಜೇಂದ್ರ ಅಲಿಯಾಸ್ ಗಜ (46) ಎಂಬಾತನನ್ನು ಬಂಧಿಸಲಾಗಿದೆ. 2004ರಲ್ಲಿ ರಾಜಕೀಯ ರ್ಯಾಲಿಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿತ್ತು. ಆಗ ಒಂದು ಗುಂಪು ರೌಡಿಶೀಟರ್ ಆಗಿದ್ದ ರವಿ ಅಲಿಯಾಸ್ ಕೊತ್ತ ರವಿ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿತ್ತು. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಚಂದ್ರಪ್ಪ ಮತ್ತು ಬಾಬು ಎಂಬುವರ ಜತೆಗೆ 8ನೇ ಆರೋಪಿಯಾಗಿದ್ದ ಗಜೇಂದ್ರನನ್ನು ಬಂಧಿಸಲಾಗಿತ್ತು. 1 ವರ್ಷದ ಬಳಿಕ ಆರೋಪಿ ಜಾಮೀನು ಪಡೆದು ಕೊಂಡು ಬಿಡುಗಡೆಯಾಗಿದ್ದ. ಆ ನಂತರ ಆರೋಪಿ ತಮಿಳುನಾಡಿನ ವೆಲ್ಲೂರಿನಲ್ಲಿ 3 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ. ಬಳಿಕ ಬೆಂಗಳೂರಿಗೆ ಬಂದು, ಕುಟುಂಬ ಸಮೇತ ಸುದ್ದಗುಂಟೆಪಾಳ್ಯದಲ್ಲಿ ವಾಸವಾಗಿದ್ದ ಎಂದು ಪೊಲೀಸರು ಹೇಳಿದರು.
ಸಿನಿಮಾ ನಿರ್ದೇಶಕ: ಬೆಂಗಳೂರಿಗೆ ಬಂದಿದ್ದ ಗಜೇಂದ್ರ, ಸಿನಿಮಾ ನಿರ್ದೇಶನದ ಬಗ್ಗೆ ಒಲವು ಬೆಳೆಸಿಕೊಂಡು ಸ್ಯಾಂಡಲ್‌ವುಡ್‌ನಲ್ಲಿ “ಪುಟಾಣಿ ಪವರ್’ ಸೇರಿ 3 ಸಿನಿಮಾಗಳನ್ನು ನಿರ್ದೇಶಿಸಿದ್ದಾನೆ. ಆದರೂ ತನ್ನ ಮೇಲಿನ ಕೊಲೆ ಕೇಸ್ ಬಗ್ಗೆ ಭಯಗೊಂಡಿದ್ದ ಗಜೇಂದ್ರ, ಪೊಲೀಸರು ಮರೆತಿ ದ್ದಾರೆ ಎಂದು ಭಾವಿಸಿ ಓಡಾಡಿಕೊಂಡಿದ್ದ. ಆದರೆ, ಕೋರ್ಟ್‌ಗೆ ಹಾಜರಾಗದೆ ನಾಪತ್ತೆ ಯಾಗಿದ್ದ ಆರೋಪಿಗಳ ಬಂಧಿಸು ವಂತೆ ಕೋರ್ಟ್ ಪೊಲೀಸರಿಗೆ ಸೂಚಿಸಿತ್ತು. ಆ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿದ್ದ ಸಿಸಿಬಿ ಪೊಲೀಸರು, ಆರೋಪಿಯ ಈ ಹಿಂದಿನ ವಿಳಾಸ ಪರಿಶೀಲಿಸಿದ್ದರು. ಆಗ ತಮಿಳುನಾಡಿನ ವೆಲ್ಲೂರಿಗೆ ಹೋಗಿದ್ದಾಗಿ ಗೊತ್ತಾಗಿದೆ. ನಂತರ ವೆಲ್ಲೂರಿಗೂ ಒಂದು ತಂಡ ಹೋದಾಗ, ಆತ ಬೆಂಗಳೂರಿನ ಸದ್ದುಗುಂಟೆ ಪಾಳ್ಯದಲ್ಲಿ ವಾಸವಾಗಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ.
ಬಳಿಕ ಆತನ ಮನೆಗೆ ದಾಳಿ ನಡೆಸಿ, ಆತನ ಆಧಾರ್ ಕಾರ್ಡ್, ಇತರೆ ದಾಖಲೆ ಪರಿಶೀಲಿಸಿದಾಗ ಈತನೇ ಗಜೇಂದ್ರ ಎಂದು ಖಚಿತ ಪಡಿಸಿಕೊಂಡು ಬಂಧಿಸಲಾಗಿದೆ. ಆರೋಪಿಯ ವಿಚಾರಣೆಯಲ್ಲಿ, ಪ್ರಕರಣದಲ್ಲಿ ತಮ್ಮ ಪರ ವಾದ ಮಂಡಿಸಿದ್ದ ವಕೀಲರಿಗೆ ಈ ಬಗ್ಗೆ ಪ್ರಶ್ನಿಸಿದಾಗ, ಕೇಸ್ ಖುಲಾಸೆಗೊಂಡಿದೆ ಎಂದು ಮಾಹಿತಿ ನೀಡಿದ್ದರು. ಹೀಗಾಗಿ ಸುಮ್ಮನಾಗಿದ್ದಾಗಿ ಆರೋಪಿ ಹೇಳಿಕೆ ನೀಡಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru; ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು
ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್ ನಕಾರ
Arrested: ರಾಜಸ್ಥಾನದಿಂದ ಫ್ಲೈಟ್‌ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ
Bengaluru: ಅತಿ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ: ಫುಡ್ ಡೆಲಿವರಿ ಬಾಯ್ ಸಾವು
Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.