ಗೂಂಡಾ ಕಾಯ್ದೆ ಅಡಿ ರೌಡಿಶೀಟರ್ ಬಂಧನ
Team Udayavani, Jan 23, 2018, 11:58 AM IST
ಬೆಂಗಳೂರು: ಸಾಕಷ್ಟು ಬಾರಿ ಜೈಲಿಗೆ ಹೋಗಿ ಬಂದಿದ್ದರೂ ಪುನಃ ತನ್ನ ಕೃತ್ಯವನ್ನು ಮುಂದುವರಿಸಿದ್ದ ರೌಡಿಶೀಟರ್ನನ್ನು ನಂದಿನಿ ಲೇಔಟ್ ಪೊಲೀಸರು ಗೂಂಡಾಕಾಯ್ದೆ ಅಡಿ ಬಂಧಿಸಿದ್ದಾರೆ. ಚಂದನ್(20) ಬಂಧಿತ .ಈತನ ವಿರುದ್ಧ 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಈ ಹಿಂದೆ ನಂದಿನಿ ಲೇಔಟ್ನ ಜೈಮಾರುತಿನಗರದಲ್ಲಿ ನೆಲೆಸಿರುವ ಈತನನ್ನು ಬಂಧಿಸಿ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಕಳುಹಿಸಲಾಗಿತ್ತು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದು ಮತ್ತೆ ತನ್ನ ಕೃತ್ಯ ಮುಂದುವರೆಸುತ್ತಿದ್ದ. ಹೀಗಾಗಿ ಈತನ ವಿರುದ್ಧ ನಂದಿನಿ ಲೇಔಟ್ ಇನ್ಸ್ಪೆಕ್ಟರ್ ಗೂಂಡಾ ಕಾಯ್ದೆ ಅಡಿ ಬಂಧಿಸಲು ನಗರ ಪೊಲೀಸರಿಗೆ ಮನವಿ ಮಾಡಿದ್ದರು. ಇದಕ್ಕೆ ಆಯುಕ್ತರು ಕೂಡ ಒಪ್ಪಿಗೆ ಸೂಚಿಸಿದ್ದರು.
ಆರೋಪಿ ಮನೆ ಮುಂದೆ ನಿಂತಿದ್ದ, ರಸ್ತೆ ಬದಿ ವಾಹನಗಳ ಗಾಜು ಹೊಡೆದು ಬೆಂಕಿ ಹಚ್ಚುವುದು, ಸಾರ್ವಜನಿಕರನ್ನು ಬೆದರಿಸಿ ಸುಲಿಗೆ ಮಾಡುವುದು, ದರೋಡೆ ಸೇರಿದಂತೆ ನಾನಾ ರೀತಿಯ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದ ಎಂದು ನಂದಿನಿ ಲೇಔಟ್ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.