ಕಣ್ಣೀರ ಮೇಲೆ ರಾಜಕಾರಣದ ಅಗತ್ಯವಿಲ್ಲ: ಮುನಿರತ್ನ


Team Udayavani, Oct 30, 2020, 12:32 PM IST

ಕಣ್ಣೀರ ಮೇಲೆ ರಾಜಕಾರಣದ ಅಗತ್ಯವಿಲ್ಲ: ಮುನಿರತ್ನ

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಉಪಚುನಾವಣೆ ಪ್ರಚಾರ ಭರಾಟೆ ರಂಗೇರಿದೆ. ಮೂರು ಪಕ್ಷಗಳಿಂದಲೂ ಆರೋಪ- ಪ್ರತ್ಯಾರೋಪಗಳು ನಡೆದಿವೆ. ಕಾಂಗ್ರೆಸ್‌ -ಬಿಜೆಪಿ ಅಭ್ಯರ್ಥಿಗಳು ಜನರ ಮುಂದೆ ಭಾವುಕರಾದ ಪ್ರಸಂಗಗಳೂ ನಡೆದಿದೆ. ಭಾವುಕತೆಯನ್ನೂ ಪಕ್ಷಗಳ ನಾಯಕರು ಟೀಕಿಸಿದ್ದೂ ಆಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಟೀಕೆಗಳಿಗೆ ಪ್ರಸ್ತುತ ಉದಯವಾಣಿ ಸಂದರ್ಶನದಲ್ಲಿ ಉತ್ತರ ನೀಡಿದ್ದಾರೆ.

ಬೆಂಗಳೂರು: ಕಳೆದುಕೊಂಡ ತಾಯಿಯನ್ನು ನೆನೆದು ಕಣ್ಣೀರು ಹಾಕಿದ್ದೇನೆಯೇ ಹೊರತು ಅದು ರಾಜಕೀಯದ ಓಟಿನ ಕಣ್ಣೀರಲ್ಲ. ಕಣ್ಣೀರ ಮೇಲೆ ರಾಜಕಾರಣ ಮಾಡುವ ಅಗತ್ಯ ನನಗಿಲ್ಲ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದು, ಅದರ ಆಧಾರದ ಮೇಲೆ ಮತ ಕೇಳುತ್ತಿದ್ದೇನೆ. ಇದು ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಮಾತು. ಉಪಚುನಾವಣೆ ಬಗ್ಗೆ ಮುನಿರತ್ನ “ಉದಯವಾಣಿ’ಗೆ ಸಂದರ್ಶನ ನೀಡಿದ್ದು ವಿವರ ಹೀಗಿದೆ.

  • ನೀವು ಕಣ್ಣೀರು ಹಾಕಿದ್ದಕ್ಕೆ ಸಿನಿಮಾದವರಾದ ಮುನಿರತ್ನ ಅವರಿಗೆ ಕಟ್‌ ಆ್ಯಂಡ್‌ ಪೇಸ್ಟ್‌ ಎಲ್ಲಾ ಗೊತ್ತಿದೆ ಎಂದು ಕಾಂಗ್ರೆಸ್‌ ನಾಯಕರು ವ್ಯಂಗ್ಯವಾಡಿರುವುದಕ್ಕೆ ಏನು ಹೇಳುವಿರಿ?

ಅಂದು ದೆಹಲಿಯಲ್ಲಿ ಅವರು ಕಣ್ಣೀರು ಹಾಕಿದಾಗ ನಾನು ನಾಟಕ ಎಂದು ಹೇಳಿದ್ದೇನೆಯೇ. ಆ ಸಂದರ್ಭದಲ್ಲಿ ನಾನು ಕರುಣೆ ತೋರಿದ್ದೇನೆ. ಅವರು ಕಣ್ಣೀರು ಹಾಕಿದಾಗ ನನಗೆ ಕರುಳು ಹಿಂಡಿದಂತಾಗಿ, ಅಯ್ಯೋ ಪಾಪ ಎನಿಸಿತು. ಆದರೆ ನನ್ನ ಕಣ್ಣೀರು ಅವರಿಗೆ ಸಿನಿಮಾ ತರ ಕಾಣುತ್ತಿದೆ. ದೆಹಲಿಯಲ್ಲಿ ಅವರು ಕಣ್ಣೀರು ಹಾಕಲಿಲ್ಲವೇ? ಅವರ ತಾಯಿ ಕಣ್ಣೀರಿಡಲಿಲ್ಲವೇ? ಆ ಕಣ್ಣೀರ ಬಗ್ಗೆ ನಾನು ಮಾತನಾಡಿದ್ದೇನೆಯೇ? ಕಣ್ಣೀರು ಕಣ್ಣೀರಷ್ಟೆ. ಇದು ಕುಟುಂಬದ ಭಾವನೆಯ ಕಣ್ಣೀರೇ ಹೊರತು ರಾಜಕೀಯದ ಓಟಿನ ಕಣ್ಣೀರಲ್ಲ. ಕಳೆದುಕೊಂಡ ತಾಯಿಯ ಜ್ಞಾಪಕದ ಕಣ್ಣೀರು ಅಷ್ಟೇ. ನಾನು ಕಣ್ಣೀರ ಮೇಲೆ ರಾಜಕಾರಣಮಾಡುವುದಿಲ್ಲ. ನನ್ನ ಕೆಲಸದ ಮೇಲೆ ಮತ ಕೇಳುತ್ತಿದ್ದೇನೆ. ಮಾಸಾಂತ್ಯಕ್ಕೆ ಅವರದ್ದೇ ಹೊಸ ಸೆಂಟಿಮೆಂಟ್‌ ಸಿನಿಮಾ ಬಿಡುಗಡೆಯಾಗಲಿದೆ ಕಾದು ನೋಡಿ.

  • ಕ್ಷೇತ್ರದಲ್ಲಿ ನಿಮಗೆ ಪ್ರತಿಸ್ಪರ್ಧಿ ಯಾರು?

ಉಪಚುನಾವಣೆಯಲ್ಲಿ ನನಗೆ ಜೆಡಿಎಸ್‌ ಪಕ್ಷವೇ ಪ್ರತಿಸ್ಪರ್ಧಿ. ಕ್ಷೇತ್ರದಲ್ಲಿ ಜೆಡಿಎಸ್‌, ಮಾಜಿ ಪ್ರಧಾನಿ ಎಚ್‌ .ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್‌ .ಡಿ.ಕುಮಾರಸ್ವಾಮಿಯವರ ವರ್ಚಸ್ಸು ಜಾಸ್ತಿ ಇದೆ. 2013ರ ಚುನಾವಣೆಯಲ್ಲಿ ಜೆಡಿಎಸ್‌ ಎರಡನೇ ಸ್ಥಾನದಲ್ಲಿತ್ತು. 2018ರ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ 60,000 ಮತ ಪಡೆದಿದ್ದರು. ಇನ್ನು 20,000 ಮತ ಗಳಿಸಿದ್ದರೆ ಅವರೇ ಗೆಲ್ಲುತ್ತಿದ್ದರು. ಹಾಗಾಗಿ ನನಗೆ ಜೆಡಿಎಸ್‌ ಮಾತ್ರ ಪ್ರತಿಸ್ಪರ್ಧಿ. ಕಾಂಗ್ರೆಸ್‌ನಲ್ಲಿ ಯಾರೂ ಇಲ್ಲ.

  • ಹಣ ಪಡೆದು ಬಿಜೆಪಿ ಸೇರಿದ್ದಾರೆ ಎಂದು ನಾನಾ ಆರೋಪ ಮಾಡುತ್ತಿದ್ದಾರಲ್ಲಾ?

ನಮ್ಮ ಪಕ್ಷದ ನಾಯಕರು 100ಕ್ಕೆ 100 ನನ್ನ ಪರವಾಗಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಪಕ್ಷದ ಘಟಾನುಘಟಿ ನಾಯಕರು ನನ್ನ ಪರ ಪ್ರಚಾರ ನಡೆಸಿ ಮತ ಯಾಚಿಸುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಒಬ್ಬರೂ ಬರುವುದಿಲ್ಲ. “ಬಿ- ಫಾರಂ’ ಕೊಟ್ಟರೆ ಮುಗಿಯಿತು. ಅಷ್ಟೇ ಅವರ ಕತೆ.ನಾಯಕರೆಲ್ಲಾ ನಿಮ್ಮ ಪರವಾಗಿದ್ದಾರೆ ಎನ್ನುತ್ತೀರಿ, ತುಳಸಿ ಮುನಿರಾಜುಗೌಡ ಅವರು ಪ್ರಚಾರದಲ್ಲೆಲ್ಲೂ ಕಂಡಿಲ್ಲವಲ್ಲ? ತುಳಸಿ ಮುನಿರಾಜುಗೌಡ ಅವರು ಪಕ್ಷದ ಹಿರಿಯ ಮುಖಂಡರು. ಅವರು ತುಸು ಸಂಘಟನೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

  • ಉಪಚುನಾವಣೆಯಲ್ಲಿ ಅಭ್ಯರ್ಥಿಗಿಂತ ಪಕ್ಷಕ್ಕೆ ಮತ ಹಾಕಿ ಎನ್ನಲಾಗುತ್ತಿದೆಯಲ್ಲಾ?

ವ್ಯಕ್ತಿಗಿಂತ ಪಕ್ಷಕ್ಕೆ ಮತ ಹಾಕಿ ಎನ್ನುವುದು ಸರಿಯಾಗಿಯೇ ಇದೆ. ಅದರಲ್ಲಿ ತಪ್ಪೇನೂ ಇಲ್ಲ. ಆದರೆ ಎಲ್ಲ ನಾಯಕರು  ಪ್ರಚಾರದ ವೇಳೆ ಮುನಿರತ್ನ ಅವರಿಗೆ ಮತ ಹಾಕಿ. ಮುನಿರನ್ನ ಅವರನ್ನು ಗೆಲ್ಲಿಸಿ. ಮುನಿರತ್ನನನ್ನು ಬೆಂಬಲಿಸಿ ಎಂದು ಮನವಿ ಮಾಡುತ್ತಿದ್ದಾರೆ. ಉಪಮುಖ್ಯಮಂತ್ರಿಗಳು, ಹಲವು ಸಚಿವರು, ಪ್ರಮುಖರು ನಿರಂತರವಾಗಿ ಪ್ರಚಾರ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳು ಒಂದು ದಿನವಿಡೀ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.

  • ಯಾವ ವಿಚಾರಗಳ ಮೇಲೆ ಮತ ಯಾಚಿಸುತ್ತಿದ್ದೀರಿ?

2013ರಿಂದ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು, ಸದ್ಯ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮತದಾರಿಗೆ ತಿಳಿದಿದೆ. ಮುಂದೆ ಕೈಗೊಳ್ಳಲಿರುವ ಅಭಿವೃದ್ಧಿ ವಿಚಾರಗಳನ್ನು ತಿಳಿಸಿ ಮತ ಯಾಚಿಸುತ್ತಿದ್ದೇನೆ. ಕ್ಷೇತ್ರದ ಅಭಿವೃದ್ಧಿಗಾಗಿ ಮತ ಕೇಳುತ್ತಿದ್ದೇನೆ. ಕಾಂಗ್ರೆಸ್‌ನವರಿಗೆ ಉಪ ಚುನಾವಣೆಗೆ ವಿಚಾರವಿಲ್ಲದ ಕಾರಣ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಆದರೆ ಮತದಾರರಿಗೆ ವಾಸ್ತವದ ಅರಿವಿದೆ.

 

ಎಂ.ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶೆಯೇ ಇಲ್ಲ: ಕುಸುಮಾ

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶ್ನೆಯೇ ಇಲ್ಲ: ಕುಸುಮಾ

bng-tdy-1

ಮುನಿರತ್ನ ಮಾತು : ಸದಾ ಕ್ಷೇತ್ರದ ಜನರೊಂದಿಗೆ ಇರುವೆ

bng-tdy-5

ಜಾತಿ, ಅನುಕಂಪ ಮೀರಿ ಅಭಿವೃದ್ಧಿಗೆ ಜನ ಮತ

ಬೇರು ಭದ್ರಪಡಿಸುವ ಸವಾಲು

ಬೇರು ಭದ್ರಪಡಿಸುವ ಸವಾಲು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.