ನಗರದ ಸಮಗ್ರ ಅಭಿವೃದ್ಧಿಗೆ 1 ಲಕ್ಷ ಕೋಟಿ ರೂ. ಮೀಸಲು
Team Udayavani, Feb 26, 2019, 6:28 AM IST
ಬೆಂಗಳೂರು: ನಗರದ ಸಮಗ್ರ ಅಭಿವೃದ್ಧಿಗಾಗಿ 1 ಲಕ್ಷ ಕೋಟಿ ರೂ.ಅನುದಾನ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಮಹಾಲಕ್ಷ್ಮೀ ಬಡಾವಣೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸುಮಾರು 16 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ, ಹಿಂದಿನ ಸರ್ಕಾರ ಬಡ ವರ್ಗದವರಿಗೆ ಒಂದು ಲಕ್ಷ ಮನೆ ನಿರ್ಮಿಸುವ ಯೋಜನೆಗೆ ಚಾಲನೆ ನೀಡಿದ್ದು, ಶೀಘ್ರವೇ ಆ ಮನೆಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ತಿಳಿಸಿದರು.
ಸಬ್‌ಅರ್ಬನ್ ರೈಲು ಯೋಜನೆಗೆ 23 ಸಾವಿರ ಕೋಟಿ ರೂ. ವ್ಯಯವಾಗುವ ಸಾಧ್ಯತೆಯಿದ್ದು, ಯೋಜನೆ ಜಾರಿ ಸಂಬಂಧ ರೈಲ್ವೆ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದೆ. ಜತೆಗೆ 17 ಸಾವಿರ ಕೋಟಿ ರೂ.ವೆಚ್ಚದಲ್ಲಿ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ ಕಾರ್ಯಕ್ಕೂ ಶೀಘ್ರದಲ್ಲಿಯೇ ಚಾಲನೆ ನೀಡಲಾಗುವುದು ಎಂದು ಹೇಳಿದರು.
ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಬಿಬಿಎಂಪಿಗೆ 8,015 ಕೋಟಿ ರೂ ಮೀಸಲಿಡಲಾಗಿದೆ. ಜತಗೆ 5ನೇ ಹಂತದ ಕಾವೇರಿ ಯೋಜನೆಗೆ 5 ಸಾವಿರ ಕೋಟಿ ರೂ. ನೀಡಲಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲಕ್ಕಾಗಿ ಶೇಷಾದ್ರಿ ರಸ್ತೆಯ ಮಹಾರಾಣಿ ಕಾಲೇಜು ಆವರಣದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ತೆರಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮೇಯರ್ ಗಂಗಾಂಬಿಕೆ , ಶಾಸಕ ಗೋಪಾಲಯ್ಯ, ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್, ಉಪಮೇಯರ್ ಭದ್ರೇಗೌಡ ಉಪಸ್ಥಿತರಿದ್ದರು.
ಮೂರು ವರ್ಷದಲ್ಲಿ ಮೆಟ್ರೋ ಪೂರ್ಣ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಾತನಾಡಿ, ಮೆಟ್ರೋ ರೈಲು ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಮುಂದಿನ ಮೂರು ವರ್ಷದ ಅವಧಿಯಲ್ಲಿ ಮೇಟ್ರೊ ರೈಲು ಯೋಜನೆಯ ಉಳಿದ ಕಾಮಗಾರಿಯನ್ನು ಪೂರ್ಣಗೊಳ್ಳಲಿವೆ ಎಂದು ಭರವಸೆ ನೀಡಿದರು.
ಮುಂದಿನ ಮೂರ್‍ನಾಲ್ಕು ತಿಂಗಳೊಳಗೆ ನಗರದಾದ್ಯಂತ ವೈ-ಫೈ ಸಂಪರ್ಕ ಕಲ್ಪಿಸಲಾಗವುದು. ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲೂ ಗ್ರಂಥಾಲಯದ ಜತೆಗೆ ಸ್ಪರ್ಧಾತ್ಮಕ ಕೇಂದ್ರಗಳನ್ನು ನಿರ್ಮಿಸುವ ಚಿಂತನೆಯಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.