10 ಕೋಟಿ ರೂ. ಬೆಲೆಯ ಭೂಮಿ ಅಕ್ರಮ ಮಂಜೂರು


Team Udayavani, Oct 31, 2017, 12:09 PM IST

vs-ugrappa.jpg

ಬೆಂಗಳೂರು: ಬಿಜೆಪಿ ಮುಖಂಡ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ್‌. ಅಶೋಕ್‌ ಬಗರ್‌ ಹುಕುಂ ಸಮಿತಿಯಲ್ಲಿ 10 ಸಾವಿರ ಕೋಟಿ ರೂ. ಬೆಲೆ ಬಾಳುವ ಭೂಮಿಯನ್ನು ಕಾನೂನು ಬಾಹಿರವಾಗಿ ಮಂಜೂರು ಮಾಡಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ವಿ.ಎಸ್‌. ಉಗ್ರಪ್ಪ ಆರೋಪಿಸಿದ್ದಾರೆ. 

ಎಸಿಬಿ ಅಶೋಕ್‌ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸಬೇಕು. ರಾಜ್ಯ ಸರ್ಕಾರ ಅಕ್ರಮವಾಗಿ ಮಂಜೂರು ಮಾಡಿದ ಜಮೀನು ವಶ ಪಡಿಸಿಕೊಂಡು ಅಶೋಕ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ದಾಖಲೆ ಬಿಡುಗಡೆ ಮಾಡಿದ ಅವರು, ಬೆಂಗಳೂರು ದಕ್ಷಿಣ ತಾಲೂಕಿನ ಹಳ್ಳಿಗಳಲ್ಲಿ ಸುಮಾರು 245.17 ಎಕರೆ ಜಮೀನನ್ನು ಕಾನೂನು ಬಾಹಿರವಾಗಿ ಸಂಬಂಧಿಕರು ಹಾಗೂ ಅರ್ಹತೆ ಇಲ್ಲದವರಿಗೆ ಅಶೋಕ್‌ ಅಧ್ಯಕ್ಷತೆಯ ಬಗರ್‌ ಹುಕುಂ ಸಮಿತಿ ಮಂಜೂರು ಮಾಡಿದೆ ಎಂದು ಆರೋಪಿಸಿದರು.

ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ ಆರ್‌.ಅಶೋಕ್‌ ಅಧ್ಯಕ್ಷರಾಗಿದ್ದ ಬಗರ್‌ ಹುಕುಂ ಸಮಿತಿಯಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ ಅನ್ವಯ ಅನಧಿಕೃತವಾಗಿ 16 ಗ್ರಾಮಗಳಲ್ಲಿ ಮಾಜಿ ಕಾರ್ಪೊರೇಟರ್ ಮತ್ತು ಅವರ ಕುಟುಂಬಸ್ಥರು, ಕಬಡ್ಡಿ ಬಾಬು ಕುಟುಂಬಸ್ಥರು, ವಕೀಲ ಎ.ಪಿ. ರಂಗನಾಥ ಹಾಗೂ ಕುಟುಂಬ, ಜಿಪಂ ಮಾಜಿ ಸದಸ್ಯರು, ಉದ್ಯಮಿ ಆದಿಕೇಶವಲು ಸಂಬಂಧಿಕರು ಮತ್ತು ಬಿಜಿಎಸ್‌ ಮಠಕ್ಕೆ ಜಮೀನು ಮಂಜೂರು ಮಾಡಿದ್ದಲ್ಲದೇ ಗ್ರಾಮದಲ್ಲಿ ವಾಸವಿರದ ಆರ್ಥಿಕ ಸದೃಢರಿಗೂ 162 ಎಕರೆ ಜಮೀನು ಕಾನೂನು ಬಾಹಿರವಾಗಿ ಮಂಜೂರು ಮಾಡಿದ್ದಾರೆ ಎಂದು ಉಗ್ರಪ್ಪ ಆರೋಪಿಸಿದರು.

ಆರ್‌. ಅಶೋಕ್‌ ಮತ್ತು ಎಂ. ಶ್ರೀನಿವಾಸ್‌ ಅಧ್ಯಕ್ಷತೆಯಲ್ಲಿ 1992-93 ರಿಂದ 2005-06 ರ ವರೆಗೆ ನಿಯಮ ಬಾಹಿರವಾಗಿ 88 ಫ‌ಲಾನುಭವಿಗಳಿಗೆ ಮಂಜೂರು ಮಾಡಿದ್ದು, 254 ಎಕರೆ 17 ಗುಂಟೆ ಜಮೀನನ್ನು ಮಂಜೂರಾತಿ ರದ್ದು ಪಡಿಸಿ ಬೆಂಗಳೂರು ದಕ್ಷಿಣ ಉಪ ವಿಭಾಗಾಧಿಕಾರಿ ಆದೇಶ ಹೊರಡಿಸಿದ್ದು, ಸರ್ಕಾರ ಎಸಿ ಆದೇಶದಂತೆ ಅಕ್ರಮವಾಗಿ ಮಂಜೂರು ಮಾಡಿದ್ದ ಜಮೀನು ವಾಪಸ್‌ ಪಡೆದು ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.  ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್‌ ಸದಸ್ಯರಾದ ಮೋಹನ್‌ ಕೊಂಡಜ್ಜಿ ಹಾಗೂ ಪಿ.ಆರ್‌. ರಮೇಶ್‌ ಹಾಜರಿದ್ದರು. 

ಐಟಿ ತನಿಖೆಯಲ್ಲಿ ಪ್ರಧಾನಿ ಹಸ್ತಕ್ಷೇಪ
ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕಿದೆ ಎಂದು ಪ್ರಧಾನಿ ಹೇಳಿರುವುದನ್ನು ನೋಡಿದರೆ, ಐಟಿ ಇಲಾಖೆಯ ಬಗ್ಗೆ ಅವರಿಗೆ ಮಾಹಿತಿ ನೀಡಿದವರು ಯಾರು, ಪ್ರಧಾನಿ ಆದಾಯ ತೆರಿಗೆ ಇಲಾಖೆಯ ತನಿಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಉಗ್ರಪ್ಪ ಆರೋಪಿಸಿದರು.

ರಾಜ್ಯದಲ್ಲಿ 165 ತಾಲೂಕುಗಳಲ್ಲಿ ಬರ ಇದ್ದರೂ ಪ್ರಧಾನಿ ಅರ್ಧ ದಿನ ಬರ ಪ್ರದೇಶಗಳ ಪ್ರವಾಸ ಮಾಡಿ ಪರಿಹಾರ ನೀಡುವ ಬಗ್ಗೆ ಯೋಚನೆ ಮಾಡದೇ ಅನಗತ್ಯ ಆರೋಪ ಮಾಡುತ್ತಿದ್ದಾರೆ ಎಂದು ಉಗ್ರಪ್ಪ ಆರೋಪಿಸಿದರು.

ಟಾಪ್ ನ್ಯೂಸ್

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

aane

Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.