ವಿಮೆ ಇಲ್ಲದ ರಾಸು ಸತ್ತರೆ 10 ಸಾವಿರ ರೂ. ಪರಿಹಾರ
Team Udayavani, Sep 8, 2017, 7:10 AM IST
ಬೆಂಗಳೂರು: ವಿಮೆ ಮಾಡದ ರಾಸುಗಳು ಆಕಸ್ಮಿಕ ಸಾವನ್ನಪ್ಪಿ ಆರ್ಥಿಕ ಸಂಕಷ್ಟ ಅನುಭವಿಸುವ ರೈತರ ಪ್ರತಿ ರಾಸಿಗೆ 10 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಆಯುಕ್ತರು ತಿಳಿಸಿದ್ದಾರೆ.
ರೈತರು ಹಾಲು ಹಿಂಡುವ ರಾಸುಗಳನ್ನು ಮಾತ್ರ ಜಾನುವಾರು ವಿಮೆಗೆ ಒಳಪಡಿಸುತ್ತಾರೆ. ವಿಮೆ ಮಾಡದ ಎತ್ತು, ಹಸುಗಳ ಆಕಸ್ಮಿಕ ಮರಣದಿಂದ ಆಗುವ ನಷ್ಟವನ್ನು ಪರಿಹರಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ. 2017-18 ಸಾಲಿಗೆ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆ ಅನುದಾನದಿಂದ ಅನುಷ್ಠಾನಗೊಳ್ಳುತ್ತಿದ್ದು, 7 ಕೋಟಿ ರೂ.ಅನುದಾನ ನಿಗದಿಪಡಿಸಲಾಗಿದೆ.
ಏನೇನು ನಿಬಂಧನೆ?: ಮರಣೋತ್ತರ ಪರೀಕ್ಷೆ ಮಾಡುತ್ತಿರುವ ರಾಸಿನ ಕಳೆಬರದೊಂದಿಗೆ ಪರೀಕ್ಷೆ ಮಾಡುತ್ತಿರುವ ಪಶುವೈದ್ಯರ ಕಲರ್ ಫೋಟೋ, ಮರಣೋತ್ತರ ವರದಿ, ಅಪಘಾತ ಸಂದರ್ಭದಲ್ಲಿ ಪ್ರಾಥಮಿಕ ತನಿಖಾ ವರದಿ, ಪ್ರಾಣಿಯ ಮರಣ ಕಾಡು ಪ್ರಾಣಿಗಳಿಂದ ಸಂಭವಿಸಿದ್ದಲ್ಲಿ ಅರಣ್ಯ ಇಲಾಖೆಯಿಂದ ಪರಿಹಾರ ಪಡೆಯದಿಲ್ಲದಿರುವ ಬಗ್ಗೆ ದೃಢೀಕರಣ ಹಾಗೂ ಅಗತ್ಯ ದಾಖಲಾತಿ ಸಲ್ಲಿಸಬೇಕು. ಯೋಜನೆ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಪಶುವೈದ್ಯಾಧಿಕಾರಿಗಳನ್ನು ಭೇಟಿ ಮಾಡುವಂತೆ ಇಲಾಖೆ ಕೋರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.