1.97 ಕೋಟಿ ರೂ. ಐಟಿ ವಶಕ್ಕೆ ಹೈಕೋರ್ಟ್‌ ಆದೇಶ


Team Udayavani, Dec 7, 2017, 12:21 PM IST

highcourt3.jpg

ಬೆಂಗಳೂರು: ವಿಧಾನಸೌಧ ಆವರಣದಲ್ಲಿ ವಕೀಲ ಎಚ್‌.ಎಂ.ಸಿದ್ದಾರ್ಥ ಅವರ ಕಾರಿನಲ್ಲಿ 1.97 ಕೋಟಿ ರೂ. ಪತ್ತೆಯಾದ ಪ್ರಕರಣ ಹೊಸ ತಿರುವು ಪಡೆದಿದ್ದು, ಆ ಹಣವನ್ನು ಆದಾಯ ತೆರಿಗೆ ಇಲಾಖೆ ವಶಕ್ಕೆ ಒಪ್ಪಿಸುವಂತೆ ಹೈಕೋರ್ಟ್‌ ಬುಧವಾರ ಪೊಲೀಸರಿಗೆ ನಿರ್ದೇಶನ ನೀಡಿದೆ.

ಆದಾಯ ತೆರಿಗೆ ಇಲಾಖೆಯ ತನಿಖಾ ವಿಭಾಗದ ಉಪ ನಿರ್ದೇಶಕ ಎಸ್‌.ಜನಾರ್ಧನ್‌, “ಕಾರಿನಲ್ಲಿ ಸಿಕ್ಕಿದ್ದ ಹಣದ ಮೂಲದ ಕುರಿತು ತನಿಖೆ ನಡೆಸುತ್ತೇವೆ. ಆ ಹಣಕ್ಕೆ ಸೂಕ್ತ ದಾಖಲೆಗಳಿಲ್ಲ. ಅಲ್ಲದೇ ಅಷ್ಟು ದೊಡ್ಡ ಮೊತ್ತಕ್ಕೆ ಆದಾಯ ತೆರಿಗೆ ಪಾವತಿಸಿದ್ದಾರೆಯೇ? ಇಲ್ಲವೇ ಎಂಬ ಕುರಿತು ಪರಿಶೀಲನೆ ನಡೆಸಬೇಕಿದ್ದು, ಹಣವನ್ನು ತಮ್ಮ ವಶಕ್ಕೆ ನೀಡಬೇಕು’ ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. 

ಬುಧವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಕೆ.ಎನ್‌.ಫ‌ಣೀಂದ್ರ ಅವರಿದ್ದ ಏಕಸದಸ್ಯ ಪೀಠ, ಸಿದ್ಧಾರ್ಥ ಕಾರಿನಲ್ಲಿ ದೊರೆತಿರುವ 1.97 ಕೋಟಿ ರು.ವನ್ನು ಐಟಿ ಇಲಾಖೆ ವಶಕ್ಕೆ ಒಪ್ಪಿಸಬೇಕು ಎಂದು ವಿಧಾನಸೌಧ ಠಾಣೆ ಪೊಲೀಸರಿಗೆ ನಿರ್ದೇಶಿಸಿತು. ಇದಕ್ಕೂ ಮುನ್ನ  ಸಿದ್ಧಾರ್ಥ ಪರ ವಕೀಲರು ಸಹ ಹಣವನ್ನು ಐಟಿ ಇಲಾಖೆಯ ವಶಕ್ಕೆ ನೀಡಲು ಒಪ್ಪಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ಧಾರ್ಥ ವಿರುದ್ಧ ದಾಖಲಿಸಿರುವ ಆರೋಪಗಳನ್ನು ಸಾಬೀತಪಡಿಸುವಲ್ಲಿ ವಿಧಾನಸೌಧ ಠಾಣಾ ಪೊಲೀಸರು ಸಫ‌ಲವಾದರೆ, ಐಟಿ ಇಲಾಖೆಯು ಕಾರಿನಲ್ಲಿ ಸಿಕ್ಕಿದ 1.97 ಕೋಟಿ ರೂ.ಗಳನ್ನು ಪೊಲೀಸರಿಗೆ ಬಡ್ಡಿ ಸಮೇತ ನೀಡಬೇಕು. ಈ ಕುರಿತು ಪೊಲೀಸರು ಹಾಗೂ ಐಟಿ ಇಲಾಖೆ ಒಪ್ಪಂದ (ಇಂಡೆಮೆನಿಟಿ ಬಾಂಡ್‌) ಮಾಡಿಕೊಳ್ಳಬೇಕು ಎಂದು ನ್ಯಾಯಪೀಠ ಇದೇ ವೇಳೆ ಸೂಚಿಸಿತು. 

ಪ್ರಕರಣವೇನು?: 2016ರ ಅ.21ರಂದು ವಿಧಾನಸೌಧದ ಪಶ್ಚಿಮ ದ್ವಾರದ ಮೂಲಕ ವೋಕ್ಸ್‌ ವ್ಯಾಗನ್‌ ಕಾರಿನಲ್ಲಿ ಒಳಪ್ರವೇಶಿಸುವ ವೇಳೆ ಸ್ಥಳದಲ್ಲಿದ್ದ ಭದ್ರತಾ ಪೊಲೀಸರು ತಪಾಸಣೆಗೊಳಪಡಿಸಿದ್ದರು. ಈ ಸಂದರ್ಭದಲ್ಲಿ ಕಾರಿನ ಡಿಕ್ಕಿಯಲ್ಲಿ ಸುಮಾರು 1.97 ಕೋಟಿ ನಗದು ಪತ್ತೆಯಾಗಿತ್ತು. ಈ ಸಂಬಂಧ ವಿಧಾನಸೌಧ ಠಾಣಾ ಪೊಲೀಸರು ಕಾರು ಹಾಗೂ ಹಣ ಜಪ್ತಿ ಮಾಡಿ ತನಿಖೆ ಕೈಗೊಂಡಿದ್ದರು.

ಹಣದ ಮೂಲ ಪತ್ತೆ ಮಾಡುವ ಉದ್ದೇಶದಿಂದ ಸಿದ್ದಾರ್ಥ ಅಗತ್ಯ ದಾಖಲೆ ನೀಡಿದರೂ, ಹಣ ಹಿಂದಿರುಗಿಸದಂತೆ ಐಟಿ ಇಲಾಖೆ, ನಗರದ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಅದನ್ನು ಎಸಿಎಂಎಂ ನ್ಯಾಯಾಲಯ ವಜಾಗೊಳಿಸಿದ್ದರಿಂದ ಐಟಿ ಇಲಾಖೆ ಹೈಕೋರ್ಟ್‌ ಮೆಟ್ಟಿಲೇರಿತ್ತು.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.