ಎಸ್‌ಡಿಆರ್‌ಎಫ್ ನಿಂದ 31 ಕೋಟಿ ರೂ. ಬಿಡುಗಡೆ
Team Udayavani, Sep 27, 2018, 6:00 AM IST
ಬೆಂಗಳೂರು:ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ (ಎಸ್‌ಡಿಆರ್‌ಎಫ್) ಪರಿಹಾರ ಕಾರ್ಯಗಳಿಗಾಗಿ 31 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಪ್ರಕೃತಿ ವಿಕೋಪ ತುರ್ತು ಪರಿಹಾರ ಕಾರ್ಯಗಳಿಗಾಗಿ ಪ್ರತಿ ಜಿಲ್ಲಾಧಿಕಾರಿ ಪಿಡಿ ಖಾತೆಯಲ್ಲಿ ಐದು ಕೋಟಿ ರೂ. ಲಭ್ಯ ಇರುವಂತೆ ನೋಡಿಕೊಳ್ಳಲು ಮತ್ತು ಕೆಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರ ತಲೆದೋರಿದ್ದು ಆ ಜಿಲ್ಲೆಗಳ ಬೇಡಿಕೆ ಆಧರಿಸಿ ಹಣ ಬಿಡಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.
31 ಕೋಟಿ ರೂ. ರೂ. ಹಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ 5 ಕೋಟಿ ರೂ. ಬಾಗಲಕೋಟೆ ಜಿಲ್ಲೆಗೆ 4 ಕೋಟಿರೂ., ಬೆಳಗಾವಿ, ವಿಜಯಪುರ, ದಾವಣಗೆರೆ ಮತ್ತು ಉನ್ನರ ಕನ್ನಡ ಜಿಲ್ಲೆಗಳಿಗೆ ತಲಾ 3 ಕೋಟಿ ರೂ., ಬಳ್ಳಾರಿ, ಧಾರವಾಢ, ರಾಯಚೂರು, ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳಿಗೆ ತಲಾ 2 ಕೋಟಿ ರೂ. ಸಿಗಲಿದೆ ಎಂದು ತಿಳಿಸಿದ್ದಾರೆ.
ಈ ವರ್ಷದ ಮುಂಗಾರಿನಲ್ಲಿ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳು ಅತಿವಷ್ಟಿಯಿಂದ ತತ್ತರಿಸಿದ್ದಾರೆ. ಉಳಿದ ಜಿಲ್ಲೆಗಳು ಬರಗಾಲಕ್ಕೆ ತುತ್ತಾಗಿವೆ. ಈಗಾಗಲೇ 23 ಜಿಲ್ಲೆಗಳ 89 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.