ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ಉಪಕರಣ ಖರೀದಿಗೆ 5 ಲಕ್ಷ ರೂಗಳ ಸಹಾಯಧನ
Team Udayavani, Jun 18, 2022, 3:56 PM IST
ಬೆಂಗಳೂರು: ಅಲ್ಪಸಂಖ್ಯಾತ ಮಹಿಳೆಯರು ಹಾಗೂ ಬಡರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ರಿಜಿಡ್ ನೆಪ್ರೋಸ್ಕೋಪ್ ಖರೀದಿಸಲು ಕರ್ನಾಟಕ ಸ್ಟೇಟ್ ವಕ್ಫ್ ಫೌಂಡೇಷನ್ ಫಾರ್ ವುಮೆನ್ ಡೆವಲಪ್‌ಮೆಂಟ್ ವತಿಯಿಂದ 5 ಲಕ್ಷ ರೂಪಾಯಿಗಳ ಸಹಾಯಧನದ ಚೆಕ್ ನ್ನು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹಸ್ತಾಂತರಿಸಿದರು.
ಇಂದು ವಿಕಾಸಸೌಧದಲ್ಲಿ ಚೆಕ್ ಅನ್ನು ಹಸ್ತಾಂತರಿಸಿ ಮಾತನಾಡಿದ ಸಚಿವರು, ಕರ್ನಾಟಕ ಸ್ಟೇಟ್ ವಕ್ಫ್ ಫೌಂಡೇಷನ್ ಫಾರ್ ವುಮೆನ್ ಡೆವಲಪ್‌ಮೆಂಟ್ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರ ಚಿಕಿತ್ಸೆಗಾಗುವ ಖರ್ಚನ್ನು ಭರಿಸಲಾಗುತ್ತಿದೆ. ಶಿವಾಜಿನಗರದಲ್ಲಿರುವ ಸರ್ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ಮತ್ತು ರಿಸರ್ಚ್ ಇನ್ಸಿಟ್ಯೂಟ್ ಸಂಸ್ಥೆಯ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರು ಮತ್ತು ಬಡರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಾರೆ. ಈ ಸಂಸ್ಥೆಯ ಮನವಿಯಂತೆ ರಿಜಿಡ್ ನೆಪ್ರೋಸ್ಕೋಪ್ ಉಪಕರಣ ಖರೀದಿಸಲು 5 ಲಕ್ಷ ರೂಪಾಯಿಗಳ ಸಹಾಯಧನವನ್ನು ನೀಡಲಾಗಿದೆ. ಎಲ್ಲರಿಗೂ ಉತ್ತಮ ಚಿಕಿತ್ಸೆ ದೊರೆಯಲಿ ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದರು.
ಬೌರಿಂಗ್ ಆಸ್ಪತ್ರೆಯ ವೈದ್ಯರಾದ ಡಾ. ಶ್ರೀಕಾಂತ್, ಡಾ. ಅಭಿಜಿತ್, ಡಾ. ಜಹೀರ್ ಮತ್ತು ಆಹಾರ ತಜ್ಞರಾದ ಮೇಘಾ ಅವರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಹೊಸ ಸೇರ್ಪಡೆ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Childhood Days: ಮರಳಿ ಬಾರದ ಬಾಲ್ಯ ಜೀವನ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
UV Fusion: ಅಂದು ಇಂದು- ಮಕ್ಕಳೆಲ್ಲ ಈಗ ಮಾಡ್ರನೈಸ್ಡ್
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.