ಮಳೆ ಹಾನಿ ತಡೆಗೆ ಬೇಕು 800 ಕೋಟಿ


Team Udayavani, Sep 13, 2017, 11:25 AM IST

rain-800crore.jpg

ಬೆಂಗಳೂರು: ಬೆಂಗಳೂರಿನಲ್ಲಿ ನಿರಂತರ ಮಳೆಯಿಂದ ಬಡಾವಣೆಗಳು ಕೆರೆಗಳಂತಾಗುವುದನ್ನು ತಪ್ಪಿಸಲು ಪ್ರತಿ ವರ್ಷ ರಾಜ್ಯ ಸರ್ಕಾರ ಸುಮಾರು 800 ಕೋಟಿ ರೂ. ನೀಡಬೇಕು. ಅದೇ ರೀತಿ ಇನ್ನೂ ಎರಡು ಮೂರು ವರ್ಷ ಹಣ ನೀಡಿದರೆ ಸಮಸ್ಯೆಗೆ ಪೂರ್ಣ ಮಟ್ಟದ ಪರಿಹಾರ ದೊರೆಯಲಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ.

ನಗರದಲ್ಲಿ ಜೋರಾಗಿ ಮಳೆ ಸುರಿದರೆ ನೀರು ಹರಿದು ಹೋಗಲು ರಾಜಕಾಲುವೆಗಳಲ್ಲಿ ಸರಿಯಾದ ಮಾರ್ಗ ಇಲ್ಲದಿರುವುದರಿಂದ ನೀರು ಸುಗಮವಾಗಿ ಹರಿದು ಹೋಗಲು ಮಾರ್ಗ ಬದಲಾವಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಮಳೆ ವೇಳೆ ಮುಳುಗಡೆಯಾಗುವ ಪ್ರದೇಶಗಳಾದ ಕೋರಮಂಗಲ, ಜೆ.ಸಿ.ರಸ್ತೆ, ಶಾಂತಿನಗರ ಬಸ್‌ ನಿಲ್ದಾಣ, ಎಚ್‌ಎಸ್‌ಆರ್‌ ಲೇಔಟ್‌ಗಳ ರಾಜಕಾಲುವೆಗಳ ಮಾರ್ಗ ಬದಲಾವಣೆ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಈ ಕಾರ್ಯಕ್ಕಾಗಿ ಕಳೆದ ಎರಡು ವರ್ಷಗಳಲ್ಲಿ 800 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

ಸಂಪೂರ್ಣ ಮಳೆ ನೀರು ಗಾಲುವೆಗಳನ್ನು ಅಭಿವೃದ್ಧಿ ಪಡಿಸಲು ಮುಂದಿನ 2 ವರ್ಷ ಸರ್ಕಾರ ಹಣ ನೀಡಬೇಕಾಗುತ್ತದೆ ಎಂದು ಹೇಳಿದರು. ಈಗಾಗಲೇ 2006 ರಿಂದ 13 ವರೆಗೆ 664.21 ಕೋಟಿ ರೂಪಾಯಿ ವೆಚ್ಚ ಮಾಡಲಾಗಿತ್ತು. 2013 ರಿಂದ 17 ರ ವರೆಗೆ 991 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದ್ದು, ಸುಮಾರು 204 ಕಿ.ಮೀ ನೀರು ಹರಿದು ಹೋಗುವ ಕಾಲುವೆ ದುರಸ್ಥಿಗೊಳಿಸಲಾಗಿದೆ ಎಂದು ಹೇಳಿದರು.

4 ತಿಂಗಳಲ್ಲಿ ಕಸದ ಸಮಸ್ಯೆ ಪರಿಹಾರ: ರಾಜಧಾನಿಯಲ್ಲಿ ಕಸದ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಯೋಜನೆ ರೂಪಿಸುತ್ತಿದೆ. ಕಸದಿಂದ ವಿದ್ಯುತ್‌ ಉತ್ಪಾದನೆ ಮಾಡುವ ಕುರಿತು ಈಗಾಗಲೇ ನಾಲ್ಕೈದು ಕಂಪನಿಗಳ ಜೊತೆ ಮಾತುಕತೆ ನಡೆಸಲಾಗಿದೆ. ಶೀಘ್ರವೇ ಕಂಪನಿ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಮಾರ್ಚ್‌ 2018 ರ ಹೊತ್ತಿಗೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಜಾರ್ಜ್‌ ಹೇಳಿದ್ದಾರೆ.

ಟಾಪ್ ನ್ಯೂಸ್

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.