ಕೆಐಒಸಿಎಲ್‌ಗೆ 81.48 ಕೋಟಿ ರೂ. ನಿವ್ವಳ ಲಾಭ
Team Udayavani, Sep 3, 2018, 12:14 PM IST
ಬೆಂಗಳೂರು: ಸಾರ್ವಜನಿಕ ಕ್ಷೇತ್ರದ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿ., (ಕೆಐಒಸಿಎಲ್) 2017-18ನೇ ಸಾಲಿನ ಹಣಕಾಸು ವರ್ಷದಲ್ಲಿ 1605.41 ಕೋಟಿ ರೂ. ಕಾರ್ಯಾಚರಣೆ ವಹಿವಾಟು ನಡೆಸಿ, 81.48 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಪ್ರಸಕ್ತ ಸಾಲಿನ ಆರ್ಥಿಕ ವರ್ಷದ ಮೊದಲ ತ್ತೈಮಾಸಿಕದಲ್ಲಿ ಕೆಐಒಸಿಎಲ್ 4.41 ಮಿಲಿಯನ್ ಟನ್ ಪೆಲೆಟ್ ಉತ್ಪಾದಿಸಿ ದಾಖಲಿಸಿ ನಿರ್ಮಿಸಿದೆ.
ಉತ್ಪಾದನೆಗೆ ತಕ್ಕಂತೆ ಮಾರಾಟ ಪ್ರಮಾಣವೂ ಹೆಚ್ಚಳವಾಗಿದ್ದು 2017-18ನೇ ಸಾಲಿನ ವಿತ್ತ ವರ್ಷದಲ್ಲಿ 2.301 ದಶಲಕ್ಷ ಟನ್ ಪೆಲೆಟ್ ಮಾರಾಟವಾಗಿದೆ. ಹಿಂದಿನ ವರ್ಷಕ್ಕೆ ಹೋಲಿಸಿದ್ದಲ್ಲಿ ಉತ್ಪಾದನೆ ಶೇ.59ರಷ್ಟು ಹಾಗೂ ಮಾರಾಟ ಶೇ.66ರಷ್ಟು ಹೆಚ್ಚಳವಾಗಿದೆ. ಆ ಮೂಲಕ ಕೆಐಒಸಿಎಲ್ 1605.40 ಕೋಟಿ ರೂ. ಆದಾಯ ಗಳಿಸಿದೆ ಎಂದು ಇತ್ತೀಚೆಗೆ ನಡೆದ 42ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ವ್ಯವಸ್ಥಾಪಕ ನಿರ್ದೇಶಕ ಎಂ.ವಿ.ಸುಬ್ಬರಾವ್ ತಿಳಿಸಿದ್ದಾರೆ.
ವರ್ಷದಿಂದ ವರ್ಷಕ್ಕೆ ಕಂಪನಿ ಅಭಿವೃದ್ಧಿಯತ್ತ ಸಾಗುತ್ತಿದೆ. ಮೇಕ್ ಇನ್ ಇಂಡಿಯಾ ಯೋಜನೆಯ ಪರಿಣಾಮಕಾರಿ ಅಳವಡಿಕೆಯಿಂದಾಗಿ ಪೆಲೆಟ್ ಉತ್ಪಾದನೆಯಲ್ಲಿ ಗಮನಾರ್ಹ ಸಾಧನೆ ಮಾಡಲು ಸಾಧ್ಯವಾಗಿದೆ. ಅಲ್ಲದೆ, ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಕಂಪನಿಯ ಲಾಭದ ಪ್ರಮಾಣ ಹೆಚ್ಚಿಸಿಕೊಳ್ಳಲಾಗಿದೆ. ಈ ಸಾಧನೆಯಲ್ಲಿ ಸಿಬ್ಬಂದಿಯ ಕಾರ್ಯದಕ್ಷತೆ ಅಡಗಿದೆ ಎಂದು ಶ್ಲಾಘಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕರುಗಳು ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Tennis: ಏಷ್ಯಾಡ್ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್ ನಿವೃತ್ತಿ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.