ಆರ್‌ಟಿಒ ಕಚೇರಿಗಳಲ್ಲಿ ತಂತ್ರಜ್ಞಾನಕ್ಕೆ ಆದ್ಯತೆ
Team Udayavani, Aug 20, 2017, 11:18 AM IST
ಬೆಂಗಳೂರು: “ಸಾರಿಗೆಗೆ ಸಂಬಂಧಿಸಿದ ಸೇವೆಗಳನ್ನು ಜನರಿಗೆ ಸುಲಭವಾಗಿ ಕಲ್ಪಿಸಲು ಆರ್‌ಟಿಒ ಕಚೇರಿಗಳಲ್ಲಿ ತಂತ್ರಜ್ಞಾನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಇಂದಿರಾ ನಗರದಿಂದ ಎನ್‌ಜಿಇಎಫ್ ಪೂರ್ವದ ಕಸ್ತೂರಿ ನಗರಕ್ಕೆ ಸ್ಥಳಾಂತರಗೊಂಡ ಪ್ರಾದೇಶಿಕ ಸಾರಿಗೆ ಕಚೇರಿಯ (ಪೂರ್ವ) ನೂತನ ಕಟ್ಟಡವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ)ಗಳನ್ನು ಸಾಧ್ಯವಾದಷ್ಟು ಜನಸ್ನೇಹಿಯಾಗಿಸುವುದರ ಜತೆಗೆ ಕಾರ್ಯದಕ್ಷತೆ ಹೆಚ್ಚಿಸುವುದು ನಮ್ಮ ಮೊದಲ ಆದ್ಯತೆ. ಈ ನಿಟ್ಟಿನಲ್ಲಿ ಆರ್‌ಟಿಒಗಳಲ್ಲಿ ತಂತ್ರಜ್ಞಾನಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. “ಇ-ಸಾರಥಿ’, “ಇ-ವಾಹನ’ದಂತಹ ಹಲವು ಸುಧಾರಣೆಗಳನ್ನು ತರಲಾಗುತ್ತಿದೆ’ ಎಂದು ಹೇಳಿದರು. ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡ ಆರ್‌ಟಿಒ ಕಚೇರಿ ಬಳಿ ಅತ್ಯಾಧುನಿಕ ಡ್ರೈವಿಂಗ್ ಲೈಸೆನ್ಸ್ ಟ್ರ್ಯಾಕ್ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ.
ಈಗಾಗಲೇ ಬಿಡಿಎ ಈ ಜಾಗವನ್ನು ನೀಡಲು ಒಪ್ಪಿದ್ದು, ಶೀಘ್ರ ನೋಂದಣಿ ಪ್ರಕ್ರಿಯೆ ಮುಗಿಯಲಿದೆ. ಇನ್ನು ಈ ಪ್ರದೇಶದಲ್ಲಿರುವ ಐಟಿಐ ಕಾರ್ಖಾನೆಗೆ ಸೇರಿದ ಸುಮಾರು 4 ಎಕರೆ ಜಾಗದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಲು ಉದ್ದೇಶಿಸಲಾಗಿದೆ. ಐಟಿಐ ಆಡಳಿತ ಮಂಡಳಿಯು ಭೋಗ್ಯಕ್ಕೆ ಜಾಗ ನೀಡಲು ಒಪ್ಪಿಗೆ ಸೂಚಿಸಿದೆ. ಈ ಬಸ್ ನಿಲ್ದಾಣ ನಿರ್ಮಿಸುವುದರಿಂದ ಈ ಭಾಗದ ಜನರಿಗೆ ತುಂಬಾ ಅನುಕೂಲವಾಗಲಿದೆ ಎಂದು ತಿಳಿಸಿದರು.
ಈ ಮೊದಲು ಪ್ರಾದೇಶಿಕ ಸಾರಿಗೆ ಕಚೇರಿ (ಪೂರ್ವ)ಯು ಇಂದಿರಾನಗರದ ಬಿಡಿಎ ಸಂಕೀರ್ಣದಲ್ಲಿ ಬಾಡಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿತ್ತು. ಈಗ 9.93 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ. ಇದರಿಂದ ಸಾರ್ವಜನಿಕರು ರಸ್ತೆ ಹಾಗೂ ಮೆಟ್ರೋ ಸಾರಿಗೆ ಮೂಲಕ ಸುಲಭವಾಗಿ ಈ ಕಚೇರಿ ತಲುಪಬಹುದು ಎಂದರು.
ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಮಾತನಾಡಿ, ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನಲ್ಲಿ ಪ್ರಸ್ತುತ 69 ಲಕ್ಷ ವಾಹನಗಳಿದ್ದು, ಸಂಚಾರ ಸಮಸ್ಯೆ ದೊಡ್ಡ ಸವಾಲಾಗಿದೆ. ಕಳೆದ 10 ವರ್ಷಗಳಲ್ಲಿ ರಸ್ತೆ ವಿಸ್ತರಣೆ, ಮೇಲ್ಸೇತುವೆಗಳು ನಿರ್ಮಾಣವಾಗುತ್ತಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ಮೆಟ್ರೋ ಮೊದಲ ಹಂತದ ಆರಂಭಗೊಂಡಿದೆ.
ಎರಡನೇ ಹಂತವೂ ಶೀಘ್ರದಲ್ಲೇ ಸೇವೆಗೆ ಲಭ್ಯವಾಗಲಿದೆ. ಇನ್ನು ಬೈಯಪ್ಪನಹಳ್ಳಿ ಮತ್ತು ವೈಟ್‌ಫೀಲ್ಡ್ ನಡುವೆ ಸಬ್‌ಅರ್ಬನ್ ರೈಲು ಸಂಚಾರವೂ ಆರಂಭಗೊಂಡಿದೆ. ಇದರಿಂದ ಸಾವಿರಾರು ಜನರಿಗೆ ಅನುಕೂಲವಾಗಿದೆ ಎಂದು ಹೇಳಿದರು. ನಗರದ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಒಟ್ಟಾಗಿ ಪ್ರಯತ್ನಿಸುತ್ತಿವೆ.
ಅದರಲ್ಲೂ ಕೇಂದ್ರ ಸರ್ಕಾರ ಬೆಂಗಳೂರು ಸೇರಿದಂತೆ ದೇಶದ 100 ನಗರಗಳ ಸರ್ವತೋಮುಖ ಅಭಿವೃದ್ಧಿಗೆ ಯೋಜನೆ ರೂಪಿಸಿದೆ. ಮುಂದಿನ ದಿನಗಳಲ್ಲಿ ಈ ಅಭಿವೃದ್ಧಿ ಯೋಜನೆಗಳು ಹಂತ ಹಂತವಾಗಿ ಜಾರಿಯಾಗಲಿವೆ ಎಂದು ಅವರು ತಿಳಿಸಿದರು. ಶಾಸಕ ಬಿ.ಎ.ಬಸವರಾಜು, ಸಾರಿಗೆ ಇಲಾಖೆ ಆಯುಕ್ತ ಬಿ. ದಯಾನಂದ, ನಗರ ಜಂಟಿ ಸಾರಿಗೆ ಆಯುಕ್ತ ಜೆ. ಜ್ಞಾನೇಂದ್ರಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್ ಆಯುಕ್ತ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shri Krishna Matha; ವಿಶ್ವಮಟ್ಟದಲ್ಲಿ ಭಗವದ್ಗೀತೆ ಜಾಗೃತಿ: ಪುತ್ತಿಗೆ ಶ್ರೀ
ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್ ಸಿಂಗ್, ಸ್ಮೃತಿ ಮಂಧನಾ ನಾಮ ನಿರ್ದೇಶ
Padubidri: ಮೊಬೈಲ್ ಕೊಡಿಸದ ತಾಯಿ; ಸಾಯಲು ಹೆದ್ದಾರಿಗೋಡಿದ ಮಗ; ಲಾರಿ ಡಿಕ್ಕಿ
Bengaluru: ಕೀಪರ್ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ
Cricket: ಜಿಂಬಾಬ್ವೆ ವಿರುದ್ಧ ಅಫ್ಘಾನಿಸ್ಥಾನ ಅಮೋಘ ಬ್ಯಾಟಿಂಗ್: ರಹಮತ್ ಶಾ ದ್ವಿಶತಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.