ರುದ್ರೇಶ್ ಹತ್ಯೆ ಆರೋಪಿಗಳ ಮೇಲ್ಮನವಿ ವಜಾ
Team Udayavani, Mar 9, 2018, 11:52 AM IST
ಬೆಂಗಳೂರು: ಆರ್‌ಎಸ್‌ಎಸ್ ಮುಖಂಡ ರುದ್ರೇಶ್ ಹತ್ಯೆ ಪ್ರಕರಣದಲ್ಲಿ ಹೊರಿಸಲಾದ ಆರೋಪಗಳನ್ನು ಕೈಬಿಡಲು ನಿರಾಕರಿಸಿದ್ದ ಅಧೀನ ನ್ಯಾಯಾಲಯದ ಆದೇಶ ಪ್ರಶ್ನಿಸಿದ್ದ ಐವರು ಆರೋಪಿಗಳ ಕ್ರಿಮಿನಲ್ ಮೇಲ್ಮನವಿ ಅರ್ಜಿಗಳನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.
ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹಾಗೂ ಕೆ.ಎಸ್.ಮುದ್ಗಲ್ ಅವರಿದ್ದ ವಿಭಾಗೀಯ ಪೀಠ, ಎನ್‌ಐಎ ಕಾಯಿದೆ ಕಲಂ 21ರ ಅನ್ವಯ ವಿಶೇಷ ನ್ಯಾಯಾಲಯದ ಮಧ್ಯಂತರ ಆದೇಶಗಳನ್ನು ಪ್ರಶ್ನಿಸಲು ಅವಕಾಶವಿಲ್ಲ. ಹೀಗಾಗಿ ಅರ್ಜಿದಾರ ಆರೋಪಿಗಳ ಕ್ರಿಮಿನಲ್ ಮೇಲ್ಮನವಿ ಅರ್ಜಿಗಳು ಊರ್ಜಿತಗೊಳ್ಳುವುದಿಲ್ಲ ಎಂದು ಅಭಿಪ್ರಾಯಪಟ್ಟು, ಆರೋಪಿಗಳು ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳನ್ನು ವಜಾಗೊಳಿಸಿತು. ಎನ್‌ಐಎ ವಿಶೇಷ ಅಭಿಯೋಜಕರಾಗಿ ಪಿ. ಪ್ರಸನ್ನಕುಮಾರ್ ವಾದ ಮಂಡಿಸಿದ್ದರು.
ರುದ್ರೇಶ್ ಹತ್ಯೆ ಆರೋಪಗಳಿಂದ ಮುಕ್ತಗೊಳಿಸಲು ನಿರಾಕರಿಸಿ ಎನ್‌ಐಎ ವಿಶೇಷ ನ್ಯಾಯಾಲಯ, ಜ.2ರಂದು ನೀಡಿದ್ದ ಆದೇಶ ಪ್ರಶ್ನಿಸಿ ಆರೋಪಿಗಳಾದ ಆಸೀಂ ಷರೀಫ್, ಇರ್ಫಾನ್ ಪಾಷ, ವಾಸೀಂ ಅಹಮದ್, ಮೊಹಮದ್ ಸಾದಿಕ್, ಮೊಹಮದ್ ಮುಜೀಬುಲ್ಲಾ ಹೈಕೋರ್ಟ್ ಮೊರೆಹೋಗಿದ್ದರು. ಕಮರ್ಷಿಯಲ್ ಸ್ಟ್ರೀಟ್‌ನ ಶಿವಾಜಿ ಸರ್ಕಲ್‌ನಲ್ಲಿ 2016 ಅಕ್ಟೋಬರ್ 16ರಂದು ನಡೆದ ಆರ್‌ಎಸ್‌ಎಸ್ ಮುಖಂಡ ರುದ್ರೇಶ್ ಭೀಕರ ಹತ್ಯೆ ನಡೆದಿತ್ತು.
ಈ ಸಂಬಂಧ ತನಿಖೆ ಪೂರ್ಣಗೊಳಿಸಿದ ಎನ್‌ಐಎ ಪಿಎಫ್ಐ ಸಂಘಟನೆಯ ಸದಸ್ಯರಾದ ಇರ್ಫಾನ್ ಪಾಶಾ, ವಾಸೀಂ ಅಹಮದ್, ಮೊಹಮದ್ ಸಾದಿಕ್, ಮೊಹಮದ್ ಮುಜೀಬುಲ್ಲಾ ಹಾಗೂ ಆಸೀಂ ಷರೀಪ್ ವಿರುದ್ಧ ಐಪಿಸಿ ಕಲಂ 302,120 ಬಿ, ಹಾಗೂ ಕಾನೂನು ಬಾಹಿರ ಚಟುವಟಿಕೆಗಳ ಪ್ರತಿಬಂಧಕ ಕಾಯಿದೆ ಕಲಂ 16(ಎ) 18,20 ಅನ್ವಯ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.