ಕಮಿಷನರ್ ನಿವಾಸಕ್ಕೆ ಹಗ್ಗಜಗ್ಗಾಟ
Team Udayavani, Aug 30, 2019, 3:00 AM IST
ಬೆಂಗಳೂರು: ನಗರ ಪೊಲೀಸ್ ಆಯುಕ್ತರಿಗೆ ನೀಡಲಾಗುವ ಸರ್ಕಾರಿ ನಿವಾಸಕ್ಕೆ ಹಾಲಿ ಆಯುಕ್ತ ಭಾಸ್ಕರ್ ರಾವ್ ಹಾಗೂ ನಿರ್ಗಮಿತ ಆಯುಕ್ತ ಅಲೋಕ್ ಕುಮಾರ್ ನಡುವೆ ಹಗ್ಗಜಗ್ಗಾಟ ಮುಂದುವರಿದಿದೆ. ಇನ್‌ಫೆಂಟ್ರಿ ರಸ್ತೆಯಲ್ಲಿರುವ ನಗರ ಪೊಲೀಸ್ ಆಯುಕ್ತರ ನಿವಾಸದಲ್ಲಿ ಈ ಹಿಂದಿನ ಆಯುಕ್ತ ಅಲೋಕ್ ಕುಮಾರ್ ವಾಸವಿದ್ದರು. ಆಗಸ್ಟ್ 2ರಂದು ಅವರನ್ನು ಕೆಎಸ್‌ಆರ್‌ಪಿ ಎಡಿಜಿಪಿ ಹುದ್ದೆಗೆ ವರ್ಗಾವಣೆಗೊಂಡರು.
ಇದಾದ ಬಳಿಕ ಅಲೋಕ್ ಕುಮಾರ್ ನಿವಾಸ ತೆರವುಗೊಳಿಸಿದರೂ ಅವರಿಗೆ ಸೇರಿದ ಅರ್ಧದಷ್ಟು ವಸ್ತುಗಳು ಅದೇ ನಿವಾಸದಲ್ಲಿವೆ. ನಿವಾಸಕ್ಕೆ ಅಲೋಕ್ ಕುಮಾರ್ ಬೀಗ ಹಾಕಿಕೊಂಡು ಹೋಗಿದ್ದಾರೆ. ಹೀಗಾಗಿ, ಹಾಲಿ ಆಯುಕ್ತ ಭಾಸ್ಕರ್ ರಾವ್ ಅವರಿಗೆ ನಿವಾಸ ದೊರೆತಿಲ್ಲ.
ಈ ನಿಟ್ಟಿನಲ್ಲಿ ಅಧಿಕೃತ ನಿವಾಸ ತೆರವುಗೊಳಿಸಿಕೊಡುವಂತೆ ಆಯುಕ್ತ ಭಾಸ್ಕರ್ ರಾವ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ನಿರಾಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.