23ರಂದು “ಆಯುಷ್ಮಾನ್ ಭಾರತ’ಕ್ಕೆ ಚಾಲನೆ
Team Udayavani, Sep 15, 2018, 6:15 AM IST
ಬೆಂಗಳೂರು: ದೇಶದಲ್ಲಿ ಜನರ ಜೀವಿತಾವಧಿ ಪ್ರಮಾಣ ಏರಿಕೆ ಆಗುತ್ತಿದೆ. ಆದರೆ, ಬೆನ್ನಲ್ಲೇ ಕಾಯಿಲೆಗಳ ಪ್ರಮಾಣ ಕೂಡ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜಗತ್ ಪ್ರಕಾಶ್ ನಡ್ಡಾ ಹೇಳಿದ್ದಾರೆ.
ನಗರದ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಯ ಜೆ.ಎನ್.ಟಾಟಾ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಬುದ್ಧಿಮಾಂದ್ಯತೆ ಕುರಿತ ಮೂರು ದಿನಗಳ ಅಂತಾರಾಷ್ಟ್ರೀಯ ಕಾರ್ಯಾಗಾರಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು. ದೇಶದ ಜೀವಿತಾವಧಿ ಪ್ರಮಾಣ ಹೆಚ್ಚುತ್ತಿದೆ. 1960ರಲ್ಲಿ 60 ವರ್ಷ ಮೇಲ್ಪಟ್ಟವರ ಜೀವಿತಾವಧಿ ಪ್ರಮಾಣ ಶೇ. 5.7ರಷ್ಟಿದ್ದರೆ, 2011ರಲ್ಲಿ ಶೇ. 10ಕ್ಕೆ ಏರಿಕೆಯಾಗಿ ಪ್ರಸ್ತುತ ಶೇ. 20ರಷ್ಟಾಗಿದೆ. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ, ಜತೆಗೆ ಕಾಯಿಲೆಗಳ ಹೊರೆಯೂ ಹೆಚ್ಚುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ರೋಗ ತಡೆಗಟ್ಟುವುದು ಮತ್ತು ಆರೋಗ್ಯ ರಕ್ಷಣೆಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಶ್ವದ ಅತಿದೊಡ್ಡ ಆರೋಗ್ಯ ವಿಮಾ ಯೋಜನೆ “ಆಯುಷ್ಮಾನ್ ಭಾರತ್’ ಘೋಷಿಸಿದ್ದು, ಸೆ. 23ರಂದು ಇದಕ್ಕೆ ಚಾಲನೆ ದೊರೆಯಲಿದೆ ಎಂದರು.
ದೇಶದ 10.74 ಕೋಟಿ ಕುಟುಂಬಗಳು ಅಂದರೆ 55 ಕೋಟಿ ಜನ “ಆಯುಷ್ಮಾನ್ ಭಾರತ್’ ಆರೋಗ್ಯ ವಿಮಾ ಯೋಜನೆ ವ್ಯಾಪ್ತಿಗೆ ಬರಲಿದ್ದಾರೆ. ಇದು ಅಮೆರಿಕ, ಕೆನಡಾ ಮತ್ತು ಮೆಕ್ಸಿಕೊ ದೇಶಗಳ ಒಟ್ಟಾರೆ ಜನಸಂಖ್ಯೆಗೆ ಸಮವಾಗಿದೆ. ಈ ಮಹತ್ವಾಕಾಂಕ್ಷಿ ಯೋಜನೆ ಸೆ. 23ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳಲಿದೆ ಎಂದು ಹೇಳಿದರು.
ಹೆಚ್ಚುತ್ತಿರುವ ಕಾಯಿಲೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಕಾಯಿಲೆ ಬರುವುದರ ಮುಂದೂಡುವಿಕೆಯಲ್ಲಿ ಕುಟುಂಬಗಳು ಕೂಡ ಬಹುಮುಖ್ಯ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಇಸ್ರೋ ಮಾಜಿ ಅಧ್ಯಕ್ಷ ಪ್ರೊ.ಕಸ್ತೂರಿ ರಂಗನ್ ಮಾತನಾಡಿ, ಪ್ರತಿ 20 ವರ್ಷಗಳಿಗೊಮ್ಮೆ ಬುದ್ಧಿಮಾಂದ್ಯತೆಯಿಂದ ಬಳಲುತ್ತಿರುವವ ಪ್ರಮಾಣ ದುಪ್ಪಟ್ಟು ಆಗುತ್ತಿದೆ. ದೇಶದಲ್ಲಿ 4.4 ದಶಲಕ್ಷ ಜನ ಇದರಿಂದ ಬಳಲುತ್ತಿದ್ದಾರೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಈ ನಿಟ್ಟಿನಲ್ಲಿ ಸಂಶೋಧನೆ ಮತ್ತು ಅನ್ವೇಷಣೆಗಳ ಅವಶ್ಯಕತೆ ಇದೆ. ಪೂರಕ ಆರೋಗ್ಯ ನೀತಿಗಳನ್ನು ರಚಿಸುವ ಅವಶ್ಯಕತೆ ಇದೆ ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ, ವಿಶ್ವ ಆರೋಗ್ಯ ಸಂಸ್ಥೆಯ ಡಾ.ಆತ್ರೇಯಿ ಗಂಗೂಲಿ, ಅಲಿlàಮರ್ ಆಂಡ್ ರಿಲೇಟೆಡ್ ಡಿಸ್‌ಆರ್ಡರ್ ಸೊಸೈಟಿ ಆಫ್ ಇಂಡಿಯಾ (ಎಆರ್‌ಡಿಎಸ್‌ಐ) ಉಪಾಧ್ಯಕ್ಷೆ ಡಾ.ರಾಧಾ ಎಸ್. ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.
ದೇಶದ 1.50 ಲಕ್ಷ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಕ್ಷೇಮಾಭಿವೃದ್ಧಿ ಕೇಂದ್ರಗಳನ್ನಾಗಿ ಪರಿವರ್ತಿಸಲಾಗುವುದು ಎಂದು ಸಚಿವ ಜಗತ್ ಪ್ರಕಾಶ್ ನಡ್ಡಾ ತಿಳಿಸಿದರು.
ಪ್ರಸ್ತುತ ಈ ಆರೋಗ್ಯ ಕೇಂದ್ರಗಳು ತಾಯಿ ಮತ್ತು ಮಗುವಿನ ಆರೈಕೆಗೆ ಸೀಮಿತವಾಗಿವೆ. ಮುಂದಿನ ದಿನಗಳಲ್ಲಿ ಬುದ್ಧಿಮಾಂದ್ಯತೆ, ವೃದ್ಧಾಪ್ಯ ಸಂಬಂಧಿ ಕಾಯಿಲೆಗಳಿಗೆ ಉಚಿತ ಔಷಧ ವಿತರಣೆ ಮತ್ತು ಪರೀಕ್ಷೆ ಒಳಗೊಂಡಂತೆ ಒಟ್ಟಾರೆ ಕ್ಷೇಮಾಭಿವೃದ್ಧಿ ಕೇಂದ್ರಗಳನ್ನಾಗಿ ಪರಿವರ್ತಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.