ಪ್ಲಾಸ್ಟಿಕ್ ಬಳಸಿ ರನ್‌ವೇ ನಿರ್ಮಾಣ
Team Udayavani, Aug 8, 2019, 3:09 AM IST
ಬೆಂಗಳೂರು: ನಗರದಲ್ಲಿ ಯಾರಿಗೂ ಬೇಡವಾಗಿರುವ ನಿಷೇಧಿತ ಪ್ಲಾಸ್ಟಿಕ್‌ನಿಂದ ಲೋಹದ ಹಕ್ಕಿಗಳ ಹಾರಾಟಕ್ಕೆ ಪಥ ನಿರ್ಮಾಣವಾಗಲಿದೆ! ಆ ಮೂಲಕ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೂ ಸಹಕಾರಿಯಾಗಲಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಗಮ (ಬಿಐಎಎಲ್)ವು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ಹಾಗೂ ವಿಮಾನ ನಿಲ್ದಾಣದ ವಿವಿಧ ರಸ್ತೆಗಳ ಕಾಮಗಾರಿಗಳಲ್ಲಿ ನಿಷೇಧಿತ ಮತ್ತು ಕಡಿಮೆ ಗುಣಮಟ್ಟದ ಪ್ಲಾಸ್ಟಿಕ್ ಬಳಸಿಕೊಳ್ಳಲು ನಿರ್ಧರಿಸಿದೆ. ಇದಕ್ಕೆ ಬಿಬಿಎಂಪಿಯ ಒಣತ್ಯಾಜ್ಯ ಸಂಗ್ರಹ ಕೇಂದ್ರಗಳಲ್ಲಿ ಸಂಗ್ರಹವಾದ ಕಡಿಮೆ ಗುಣಮಟ್ಟದ ಪ್ಲಾಸ್ಟಿಕ್ ಮತ್ತು ಇಷ್ಟು ದಿನ ನಗರದ ವಿವಿಧೆಡೆ ಬಿಬಿಎಂಪಿ ವಶಪಡಿಸಿಕೊಂಡಿರುವ ನಿಷೇಧಿತ ಪ್ಲಾಸ್ಟಿಕ್ ಬಳಕೆಯಾಗಲಿದೆ.
ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಇದಕ್ಕೆ ಅನುಗುಣವಾಗಿ ಬಿಐಎಎಲ್ ಸಂಸ್ಥೆಯು ರಸ್ತೆಗಳ ಅಭಿವೃದ್ಧಿಗೆ ಮುಂದಾಗಿದೆ. ಈ ಎಲ್ಲಾ ರಸ್ತೆಗಳನ್ನು ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ನಿರ್ಮಾಣ ಮಾಡಲು ಮುಂದಾಗಿದೆ. ಇದಕ್ಕೆ 50 ಸಾವಿರ ಕೆ.ಜಿ (50 ಟನ್) ಪ್ಲಾಸ್ಟಿಕ್ ಅಗತ್ಯವಿದ್ದು, ಬಿಬಿಎಂಪಿ ಸಹಕಾರ ನೀಡಬೇಕು ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಗಮದ ಉಪಾಧ್ಯಕ್ಷ ವೆಂಕಟರಾಮನ್ ಅವರು ಬಿಬಿಎಂಪಿಗೆ ಪತ್ರ ಬರೆದಿದ್ದಾರೆ.
ಈಗಾಗಲೇ ಬಿಬಿಎಂಪಿಯ 166 ವಾರ್ಡ್‌ಗಳಲ್ಲಿ ಒಣ ತ್ಯಾಜ್ಯ ಸಂಗ್ರಹ ಕೇಂದ್ರಗಳಿವೆ. ಇಲ್ಲಿ ಸಂಗ್ರಹವಾದ ಒಣ ತ್ಯಾಜ್ಯವನ್ನು ಪುನರ್ ಬಳಕೆ ಮಾಡುವುದಕ್ಕೆ ಬಿಬಿಎಂಪಿ ಚಿಂತನೆ ನಡೆಸಿತ್ತು. ಅದೇ ರೀತಿಯಲ್ಲಿ ಬಿಬಿಎಂಪಿ ನಿಷೇಧಿತ ಪ್ಲಾಸ್ಟಿಕ್ ಆಂದೋಲನದ ಅಂಗವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ 2015ರಿಂದ ಇಲ್ಲಿಯವರೆಗೆ 23 ಸಾವಿರಕ್ಕೂ ಹೆಚ್ಚು ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದ್ದು, ಇದರ ಸಂಗ್ರಹ ಬಿಬಿಎಂಪಿಗೂ ತಲೆನೋವಾಗಿತ್ತು.
ಇತ್ತೀಚಿನ ದಿನಗಳಲ್ಲಿ ನಡೆದ ಬೃಹತ್ ಪ್ರಮಾಣದ ನಿಷೇಧಿತ ಪ್ಲಾಸ್ಟಿಕ್ ವಶ ಕಾರ್ಯಾಚರಣೆಯಿಂದ ಸಂಗ್ರಹವಾದ ಪ್ಲಾಸ್ಟಿಕ್ ಅನ್ನು ಪರಿಸರಕ್ಕೆ ಹಾನಿಯಾಗದಂತೆ ವಿಲೇವಾರಿ ಮಾಡುವ ಜವಾಬ್ದಾರಿಯೂ ಬಿಬಿಎಂಪಿಯ ಮೇಲಿತ್ತು. ಈಗ ಬಿಐಎಎಲ್ ರಸ್ತೆಗಳಿಗೆ ತ್ಯಾಜ್ಯ ಪ್ಲಾಸ್ಟಿಕ್ ಬಳಕೆ ಮಾಡಲು ಮುಂದೆ ಬಂದಿರುವುದು ಅದಕ್ಕೂ ಪರಿಹಾರ ಸಿಗಲಿದೆ. ಇಂಡಿಯನ್ ರೋಡ್ ಕಾಂಗ್ರೆಸ್ ನಿಯಮಗಳನ್ವಯ ಪ್ಲಾಸ್ಟಿಕ್ ತ್ಯಾಜ್ಯವನ್ನು ರಸ್ತೆಗಳ ನಿರ್ಮಾಣಕ್ಕೆ ಬಳಸಬಹುದಾಗಿದೆ. ಪಾಲಿಕೆಯಲ್ಲಿ ಸಂಗ್ರಹವಾಗುತ್ತಿರುವ ಪ್ಲಾಸ್ಟಿಕ್ ಸಿಮೆಂಟ್ ಕಾರ್ಖಾನೆಗಳ ಇಂಧನಕ್ಕೆ ಬಳಸಿಕೊಳ್ಳಲಾಗುತ್ತಿದೆ.
ಬಿಬಿಎಂಪಿ ವಿವಿಧ ಒಣತ್ಯಾಜ್ಯ ಸಂಗ್ರಹ ಕೇಂದ್ರಗಳಲ್ಲಿ ಸಂಗ್ರಹವಾಗಿರುವ ಮತ್ತು ನಿಷೇಧಿತ ಪ್ಲಾಸ್ಟಿಕ್ ಮುಟ್ಟುಗೋಲು ಕಾರ್ಯಾಚರಣೆಯಲ್ಲಿ ಸಂಗ್ರಹವಾಗಿರುವ ಪ್ಲಾಸ್ಟಿಕ್ ಅನ್ನು ಬಿಐಎಎಲ್ ರಸ್ತೆ ನಿರ್ಮಾಣಕ್ಕೆ ಬಳಸಿಕೊಳ್ಳಲು ಬೇಕಾದ ಸಿದ್ಧತೆಗಳನ್ನು ಬಿಬಿಎಂಪಿಯ ಅಧಿಕಾರಿಗಳು ಮಾಡಿಕೊಳ್ಳುತ್ತಿದ್ದಾರೆ. ಬಿಐಎಎಲ್ ಸಹ ರಸ್ತೆಗಳ ನಿರ್ಮಾಣಕ್ಕೆ ತ್ಯಾಜ್ಯ ಪ್ಲಾಸ್ಟಿಕ್ ಬಳಸುವುದಕ್ಕೆ ಅಗತ್ಯವಿರುವ ಪರೀಕ್ಷೆಗಳನ್ನು ಮಾಡಿಕೊಳ್ಳುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಬಿಐಎಎಲ್‌ನ ಟರ್ಮಿನಲ್-2 ಸೇರಿದಂತೆ ವಿವಿಧ ರಸ್ತೆಗಳು ತ್ಯಾಜ್ಯ ಪ್ಲಾಸ್ಟಿಕ್‌ನಿಂದ ನಿರ್ಮಾಣವಾಗಲಿವೆ.
* ಹಿತೇಶ್ ವೈ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.