ಗ್ರಾಮೀಣ ವೈದ್ಯಕೀಯ ಸೇವೆ ಕಡ್ಡಾಯ ವಿಧೇಯಕ ಪಾಸ್
Team Udayavani, Jun 21, 2017, 2:12 PM IST
ವಿಧಾನಸಭೆ: ರಾಜ್ಯದಲ್ಲಿ ವೈದ್ಯಕೀಯ ಸೇವೆ ಆರಂಭಿಸಲು ಸರ್ಕಾರಿ ವೈದ್ಯ ಕಾಲೇಜು ಅಭ್ಯರ್ಥಿಗಳು ಮತ್ತು ಸರ್ಕಾರಿ
ಕೋಟಾದಡಿ ಸೀಟು ಪಡೆದವರು ಒಂದು ವರ್ಷ ಗ್ರಾಮೀಣ ಸೇವೆ ಮಾಡುವುದನ್ನು ಕಡ್ಡಾಯ ಮಾಡುವ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ನೀಡಲಾಯಿತು.
ವಿಧೇಯಕ ಮಂಡಿಸಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ್, ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಒಂದು ವರ್ಷ ಗ್ರಾಮೀಣ ಸೇವೆ ಪಡೆಯುವುದನ್ನುಕಡ್ಡಾಯಗೊಳಿಸಲಾಗಿದೆ. ಈ ಹಿಂದೆ ವೈದ್ಯಕೀಯ ಕೋರ್ಸ್ ಮಾಡಿದ ಎಲ್ಲರಿಗೂ ಕಡ್ಡಾಯ ತರಬೇತಿ ಎಂದು ಸೂಚಿಸಲಾಗಿತ್ತು. ಅದು ಸಾಕಷ್ಟು ಗೊಂದಲ ಉಂಟಾಗಿ ಕೋರ್ಟ್ನಲ್ಲಿ ಪ್ರಶ್ನೆ ಮಾಡಿರುವುದರಿಂದ ಅದನ್ನು ಸರಿಪಡಿಸಲು, ರಾಜ್ಯದಲ್ಲಿ ಸೇವೆ ಸಲ್ಲಿಸಲು ಬಯಸುವ ಎಲ್ಲ ಅಭ್ಯರ್ಥಿಗಳಿಗೂ ಕಡ್ಡಾಯ ಗ್ರಾಮೀಣ ಸೇವೆ ಮಾಡಲು ತಿದ್ದುಪಡಿ ತರಲಾಗಿದೆ. ಅಲ್ಲದೇ, ಗ್ರಾಮೀಣ ಸೇವೆ ತಪ್ಪಿಸಿಕೊಳ್ಳುವುದನ್ನು ತಡೆಯಲು ದಂಡ ವಿಧಿಸಲು ತೀರ್ಮಾನಿಸಲಾಗಿದೆ. ಪ್ರತಿ ವರ್ಷ 8 ರಿಂದ 9 ಸಾವಿರ ವಿದ್ಯಾರ್ಥಿಗಳು ವೈದ್ಯ ಕೋರ್ಸ್ ಮುಗಿಸಿ ಹೊರ ಬರುತ್ತಾರೆ. ಆದರೆ, ಸರ್ಕಾರ ತಿದ್ದುಪಡಿ ತರುವುದರಿಂದ ಕನಿಷ್ಠ 3 ಸಾವಿರ ಪದವೀಧರರು ಗ್ರಾಮೀಣ ಸೇವೆಗೆ ಲಭ್ಯವಾಗಲಿದ್ದಾರೆ ಎಂದು
ಹೇಳಿದರು.
ಹೊರ ರಾಜ್ಯದಲ್ಲಿ ಪದವಿ ಪಡೆದು ಬಂದರೂ, ರಾಜ್ಯದಲ್ಲಿ ವೈದ್ಯಕೀಯ ಸೇವೆ ಆರಂಭಿಸಲು ಬಯಸುವ ವೈದ್ಯರು
ಕಡ್ಡಾಯವಾಗಿ ಒಂದು ವರ್ಷ ಗ್ರಾಮೀಣ ಸೇವೆ ಸಲ್ಲಿಸಬೇಕು. ರಾಜ್ಯದಲ್ಲಿ ಅಧ್ಯಯನ ನಡೆಸಿ ಬೇರೆ ರಾಜ್ಯಗಳಿಗೆ ತೆರಳಿದರೆ, ಅಂತವರಿಗೆ ಗ್ರಾಮೀಣ ಸೇವೆ ಕಡ್ಡಾಯವಿಲ್ಲ ಎಂದು ಸ್ಪಷ್ಟಪಡಿಸಿದರು. ಬಳಿಕ, ವಿಧೇಯಕವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.
ಶಿಕ್ಷಣ ಪರಿಷತ್ ವಿಧೇಯಕ ಅಂಗೀಕಾರ: ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷರ ಅವಧಿಯನ್ನು 70 ವರ್ಷಕ್ಕೆ ಹೆಚ್ಚಳ ಮಾಡುವ ಕುರಿತ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPS ಹೆಚ್ಚುವರಿ ಎಲ್ಕೆಜಿ, 1ನೇ ತರಗತಿ ತೆರೆಯಲು ಅವಕಾಶ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.