ನಿಯೋಗದ ಜತೆ ಆರ್.ವಿ.ದೇಶಪಾಂಡೆ ಚರ್ಚೆ
Team Udayavani, Dec 1, 2018, 6:05 AM IST
ಬೆಂಗಳೂರು: ಕರ್ನಾಟಕ ಮತ್ತು ಅಮೆರಿಕ ನಡುವಿನ ವಾಣಿಜ್ಯ ಸಂಬಂಧ ಬಲವರ್ಧನೆ ಹಾಗೂ ಕೌಶಲ್ಯ ಮರುಪೂರಣೆ ಕುರಿತು ಇಂಡೋ ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ ನಿಯೋಗದ ಜತೆ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಸಚಿವ ಆರ್.ವಿ.ದೇಶಪಾಂಡೆ ಶುಕ್ರವಾರ ಸಮಾಲೋಚನೆ ನಡೆಸಿದರು.
ವಿಧಾನಸೌಧ ಸಮಿತಿ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ರಾಜ್ಯದ ದ್ವಿತೀಯ ಹಾಗೂ ತೃತೀಯ ಸ್ತರದ ನಗರಗಳಲ್ಲಿ ಜಾಗತಿಕ ವಾಣಿಜ್ಯ ಪರಿಸ್ಥಿತಿ ಪರಿಗಣಿಸಿ ಕೌಶಲ್ಯ ಅಭಿವೃದಿಟಛಿ ಕಾರ್ಯಕ್ರಮಗಳನ್ನು ಹೇಗೆ ರೂಪಿಸಬೇಕು ಎನ್ನುವ ಅಂಶದ ಬಗ್ಗೆ ಚರ್ಚಿಸಲಾಯಿತು. ಮರು ಕೌಶಲ್ಯ, ವೃತ್ತಿ ಜೀವನದ ಮಧ್ಯ ಭಾಗದಲ್ಲಿ ಕೊಡಬೇಕಾದ ತರಬೇತಿ ಮತ್ತು ಸಮುದಾಯ ಆಧಾರಿತ ಕೌಶಲ್ಯ ಡಿಪ್ಲೊಮಾ ಇವುಗಳಿಗೆ ಸಂಬಂಧಿಸಿದಂತೆ ಅಮೆರಿಕದ ಜತೆ ಹೊಂದಬಹುದಾದ ಸಹಕಾರ ಮತ್ತು ಆ ದೇಶದ ಕಾಲೇಜುಗಳ ಜತೆ ಸಹಭಾಗಿತ್ವ ಸ್ಥಾಪಿಸಿಕೊಳ್ಳುವ ಕುರಿತು ವಿಚಾರ ವಿನಿಮಯ ನಡೆಸಲಾಯಿತು. ಬಳಿಕ ಮಾತನಾಡಿದ ಸಚಿವ ಆರ್.ವಿ.ದೇಶಪಾಂಡೆ, ಕರ್ನಾಟಕದಲ್ಲಿ ಉದ್ಯಮಶೀಲನೆ ಮತ್ತು ನವೋದ್ಯಮ ಸ್ಥಾಪನೆಗೆ ತಕ್ಕದಾದ ವಾತಾವರಣವಿದ್ದು ಅದನ್ನು ಮತ್ತಷ್ಟು ಸುಧಾರಿಸಲಾಗುವುದು ಎಂದು ಹೇಳಿದರು. ಸಭೆಯಲ್ಲಿ ಸರ್ಕಾರದ ಕಾರ್ಯದರ್ಶಿ ಎ.ಎ.ಬಿಸ್ವಾಸ್, ಡಾ.ಗುರುಚರಣ್ ಮತ್ತಿತರರಿದ್ದರು.
ಅಮೆರಿಕ ಚೇಂಬರ್ ಆಫ್ ಕಾಮರ್ಸ್ ಜತೆ ಮಾಡಿಕೊಳ್ಳಬೇಕಾದ ಒಪ್ಪಂದಗಳ ಕುರಿತು ತಂಡವು ನೀಲನಕ್ಷೆ ರೂಪಿಸಲಿದೆ. ಅಮೆರಿಕದಲ್ಲಿ ಉನ್ನತ ಶಿಕ್ಷಣ ಪಡೆಯಲು ನಮ್ಮ ವಿದ್ಯಾರ್ಥಿಗಳಿಗೆ ಅಗತ್ಯವಾದ ಕೌಶಲ್ಯಗಳನ್ನು ಒದಗಿಸಬೇಕಾಗಿದೆ. ಯುವ ಜನರು ವಿದೇಶಗಳಲ್ಲಿ ಉದ್ಯೋಗ ಪಡೆಯಲು ಹಾಗೂ ಉದ್ಯಮ ನಡೆಸಲು ಸೌಲಭ್ಯ ಸಿಗುವಂತಾಗಲು ಕ್ರಮ ಕೈಗೊಳ್ಳಬೇಕಾಗಿದೆ.
– ಆರ್.ವಿ.ದೇಶಪಾಂಡೆ, ಕಂದಾಯ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.