ಸದಾಶಿವ ಆಯೋಗದ ವರದಿ: ಮೂಡದ ಒಮ್ಮತ
Team Udayavani, Feb 16, 2018, 6:35 AM IST
ಬೆಂಗಳೂರು: ದಲಿತ ಸಮುದಾಯದಲ್ಲಿ ಒಳ ಮೀಸಲಾತಿ ಸೌಲಭ್ಯ ಕಲ್ಪಿಸಲು ನ್ಯಾ.ಎ.ಜೆ.ಸದಾಶಿವ ಆಯೋಗ ನೀಡಿರುವ ವರದಿ ಜಾರಿ ಕುರಿತಂತೆ ಸಂಪುಟದಲ್ಲಿ ಪರ ಮತ್ತು ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದ್ದು, ಒಮ್ಮತಕ್ಕೆ ಬರಲು ಸಂಪುಟ ಸಭೆ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಆಯೋಗದ ವರದಿಯ ಸಾಧಕ ಬಾಧಕ ಕುರಿತು ಪರಿಶೀಲನೆ ನಡೆಸಲು ಸಂಪುಟ ಉಪ ಸಮಿತಿ ರಚಿಸಲು ಗುರುವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ನ್ಯಾ. ಸದಾಶಿವ ಆಯೋಗದ ವರದಿ ಒಪ್ಪಿಕೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಸಮಾಜ ಕಲ್ಯಾಣ ಸಚಿವ
ಎಚ್. ಆಂಜನೇಯ ಹಾಗೂ ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ಸಂಪುಟದಲ್ಲಿ ಪ್ರಸ್ತಾಪ ಮಾಡಿದರು ಎಂದು ತಿಳಿದು ಬಂದಿದೆ.
ಅವರ ಪ್ರಸ್ತಾಪಕ್ಕೆ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಆಕ್ಷೇಪ ವ್ಯಕ್ತಪಡಿಸಿ ನ್ಯಾ. ಸದಾಶಿವ ಆಯೋಗದ ವರದಿಯಲ್ಲಿ ಏನಿದೆ
ಎನ್ನುವುದು ಸಂಪುಟದಲ್ಲಿರುವವರಿಗೆ ಸರಿಯಾಗಿ ಮಾಹಿತಿಯಿಲ್ಲ. ಈ ಬಗ್ಗೆ ವಸ್ತು ಸ್ಥಿತಿ ತಿಳಿದುಕೊಳ್ಳದೇ ಕೇಂದ್ರಕ್ಕೆ ಶಿಫಾರಸು
ಮಾಡುವುದು ಸರಿಯಲ್ಲ. ಈಗಾಗಲೇ ತೆಲಂಗಾಣ ಸರ್ಕಾರ ಒಳ ಮೀಸಲಾತಿ ಜಾರಿ ಮಾಡಿದ್ದನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ಅನಗತ್ಯ ಗೊಂದಲ ಸೃಷ್ಠಿಸುವ ಬದಲು ವರದಿಯ ಸಾಧಕ ಬಾಧಕ ಕುರಿತು ಮುಕ್ತ ಚರ್ಚೆಯಾಗಲಿ, ಈ ಬಗ್ಗೆ ಸಂಪುಟ ಉಪ ಸಮಿತಿ ರಚಿಸುವಂತೆ ಮನವಿ ಮಾಡಿದರು ಎನ್ನಲಾಗಿದೆ.
ಸಿಎಂ ಸಿದ್ದರಾಮಯ್ಯ ವರದಿ ಜಾರಿ ಕುರಿತಂತೆ ಪ್ರತಿಯೊಬ್ಬ ಸಚಿವರನ್ನೂ ವೈಯಕ್ತಿಕವಾಗಿ ಅಭಿಪ್ರಾಯ ಕೇಳಿದ್ದಾರೆ ಎನ್ನಲಾಗಿದ್ದು, ಬಹುತೇಕ ಸಚಿವರು ಆ ವರದಿಯಲ್ಲಿನ ಅಂಶಗಳ ಬಗ್ಗೆ ಮಾಹಿತಿ ಇಲ್ಲದಿರುವುದರಿಂದ ಸಂಪುಟ ಉಪ ಸಮಿತಿ ರಚನೆ ಮಾಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಆಂಜನೇಯ ಮತ್ತು ತಿಮ್ಮಾಪುರ ಅವರನ್ನು ಹೊರತು ಪಡಿಸಿ ಎಲ್ಲ ಸಚಿವರೂ ಸಂಪುಟ ಉಪ ಸಮಿತಿ ರಚನೆ ಸೂಕ್ತ ಎಂಬ
ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ ಸಿಎಂ ಸಿದ್ದರಾಮಯ್ಯ ಸಂಪುಟ ಉಪ ಸಮಿತಿ ರಚಿಸಲು ಸೂಚಿಸಿದರು ಎಂದು ತಿಳಿದು ಬಂದಿದೆ.
ಬಿಗಿ ಬಂದೋಬಸ್ತ್ ಗೆ ಸೂಚನೆ: ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತು ಸುಪ್ರೀಂಕೋರ್ಟ್ ಶುಕ್ರವಾರದಂದು ಅಂತಿಮ
ತೀರ್ಪು ಪ್ರಕಟಿಸುವ ಕುರಿತು ರಾಜ್ಯ ಸಚಿವ ಸಂಪುಟ ಸಭೆಯಲ್ಲಿಯೂ ಗಂಭೀರ ಚರ್ಚೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.