ಬೆಂಗಳೂರು ಸುರಕ್ಷಿತ ನಗರ: ಸಚಿವ ಆರ್.ವಿ. ದೇಶಪಾಂಡೆ
Team Udayavani, Jan 7, 2017, 11:20 AM IST
ಬೆಂಗಳೂರು: ಹವಾನಿಯಂತ್ರಿತರ ನಗರಿ ಎಂದೇ ಪ್ರಸಿದ್ಧಿ ಪಡೆದಿರುವ ಬೆಂಗಳೂರು ನಗರ ಶಿಕ್ಷಣ, ಆರೋಗ್ಯ, ಐಟಿ-ಬಿಟಿ ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದು, ಕಾನೂನು ಸುವ್ಯವಸ್ಥೆಯೂ ಉತ್ತಮವಾಗಿರುವ ಸುರಕ್ಷಿತ ನಗರ ಎಂದು ಹೆಸರು ಪಡೆದಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.
ನಗರದಲ್ಲಿ ಶುಕ್ರವಾರ ನಡೆದ ಪೈಂಟ್ ಅಸೋಸಿಯೇಷನ್ ಆಫ್ ಇಂಡಿಯಾ (ಪಿಐಎ) 28ನೇ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿ ಉದ್ಯಮಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಅಲ್ಲದೇ ದೇಶ-ವಿದೇಶಗಳಿಂದ ಆಗಮಿಸಿದ್ದ ಉದ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ “ಬೆಂಗಳೂರು ನಿಮಗೆ ಹೇಗೆ ಫೀಲ್ ಆಗುತ್ತಿದೆ. ಮೊದಲು ಏರ್ಪೋರ್ಟ್ನಲ್ಲಿ ಇಳಿದಾಗ ಯಾವ ಭಾವನೆ ಬಂತು?’ ಎಂದು ಪ್ರಶ್ನಿಸಿದರು.
ಈ ವೇಳೆ ಎಲ್ಲಾ ಉದ್ಯಮಿಗಳು “ಫೆಂಟಾಸ್ಟಿಕ್’ ಎಂದು ಉದ^ರಿಸಿದರು. ಹೌದು ಇಲ್ಲಿನ ಕಾನೂನು ಸುವ್ಯವಸ್ಥೆಯ ಜತೆಗೆ ಹವಾನಿಯಂತ್ರಿತ ವಾತಾವರಣ, ವಿಫುಲ ಅವಕಾಶಗಳು, ಶಿಕ್ಷಣ, ಐಟಿ-ಬಿಟಿ ಎಲ್ಲದರಲ್ಲೂ ಭಾರತದಲ್ಲೇ ಬೆಂಗಳೂರು ಮುಂಚೂಣಿಯಲ್ಲಿದೆ. ಆದರೆ, ” ಇಲ್ಲಿರುವವರಿಗೆ (ಬೆಂಗಳೂರು) ನ್ಯೂಯಾರ್ಕ್ ಚೆನ್ನಾಗಿದೆ ಎನಿಸುತ್ತದೆ. ಆದರೆ ಅಲ್ಲಿರುವವರಿಗೆಲ್ಲಾ ಬೆಂಗಳೂರು ಚೆನ್ನಾಗಿದೆ ಎನಿಸುತ್ತದೆ’ ಇದು ಸಾಮಾನ್ಯ ಎಂದು ಮಾರ್ಮಿಕವಾಗಿ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Out of Syllabus Review; ಪ್ರೇಮಿಗಳಿಗೆ ಹೊಸ ಸಿಲೆಬಸ್
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.