ಸಕಾಲದಡಿ ಎಲ್ಲ ಸೇವೆ ಮುಂದುವರಿಕೆ


Team Udayavani, Aug 9, 2018, 6:00 AM IST

sakala-0909.jpg

ಬೆಂಗಳೂರು: “ಸಕಾಲ’ದಡಿ ಸರ್ಕಾರಿ ನೌಕರರು, ಸಿಬ್ಬಂದಿಗೆ ಸಂಬಂಧಪಟ್ಟ 18 ಸೇವೆಗಳನ್ನು ಕೈಬಿಡುವ ಪ್ರಸ್ತಾವಕ್ಕೆ ನೌಕರರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ “ಸಕಾಲ’ದಡಿ ಸದ್ಯ ಜಾರಿಯಲ್ಲಿರುವ ಎಲ್ಲಾ ಸೇವೆಗಳನ್ನು ಮುಂದುವರಿಸಲು ಸರ್ಕಾರ ಮುಂದಾಗಿದೆ.

ಈ ನಡುವೆ ರಾಜ್ಯ ಸರ್ಕಾರಿ ನೌಕರರ ಸಂಘದ ನಿಯೋಗವು ಬುಧವಾರ ಸಂಜೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್‌ ಅವರನ್ನು ಭೇಟಿ ಮಾಡಿ “ಸಕಾಲ’ದಡಿ ಸದ್ಯ ಸರ್ಕಾರಿ ನೌಕರರಿಗೆ ಕಲ್ಪಿಸಿರುವ ಸೇವೆಗಳನ್ನು ಮುಂದುವರಿಸುವಂತೆ ಮನವಿ ಮಾಡಿದೆ. ಇದಕ್ಕೆ ಮುಖ್ಯ ಕಾರ್ಯದರ್ಶಿಗಳು ಸಕಾರಾತ್ಮಕವಾಗಿ ಸ್ಪಂದಿಸಿರುವುದು ಸಂಘಕ್ಕೆ ಸಮಾಧಾನ ತಂದಿದೆ.

ಹಾಗಾಗಿ ವೇತನ ವಿತರಣೆ, ವಾರ್ಷಿಕ ಬಡ್ತಿ ಮಂಜೂರಾತಿ, ಪ್ರವಾಸ ಭತ್ಯೆ, ವೈದ್ಯಕೀಯ ವೆಚ್ಚ ಮರುಪಾವತಿ, ಬಾಕಿ ವೇತನ ಮಂಜೂರಾತಿ, ಪ್ರಭಾರ ಭತ್ಯೆ ಮಂಜೂರಾತಿ ಸೇರಿದಂತೆ ಸಕಾಲದಿಂದ ಹೊರಗಿಡಲು ಚಿಂತಿಸಲಾಗಿದ್ದ 18 ಸೇವೆಗಳು ಸಕಾಲದಲ್ಲೇ ಉಳಿಯುವ ಆಶಾಭಾವನೆ ನೌಕರರಲ್ಲಿ ಮೂಡಿದೆ.

ನೌಕರರು ಬಯಸಿದರೆ ಸೇವೆ ಮುಂದುವರಿಕೆ
ಸರ್ಕಾರಿ ನೌಕರರಿಗೆ ಸಂಬಂಧಪಟ್ಟಂತೆ “ಸಕಾಲ’ದಡಿ ಕಲ್ಪಿಸಿರುವ ಸೇವೆಗಳ ಪೈಕಿ ಆಯ್ದ ಸೇವೆಗಳನ್ನು ಕೈಬಿಡುವ ಬಗ್ಗೆ ನೌಕರರ ಸಂಘಗಳೊಂದಿಗೆ ಚರ್ಚಿಸಿ ಒಪ್ಪಿದರಷ್ಟೇ ಈ ಬಗ್ಗೆ ಸರ್ಕಾರ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ. ಆಯ್ದ ಸೇವೆಗಳು ಅಗತ್ಯವಿದ್ದು, ಮುಂದುವರಿಸುವಂತೆ ನೌಕರರ ಸಂಘಗಳು ಕೋರಿದರೆ ಮುಂದುವರಿಸಲಾಗುವುದು. ನೌಕರರ ಸಂಘಗಳು ಒಪ್ಪದೆ ಯಾವ ಸೇವೆಯನ್ನೂ ಕೈಬಿಡುವುದಿಲ್ಲ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್‌ “ಉದಯವಾಣಿ’ಗೆ ತಿಳಿಸಿದರು.

ಸಂಘದಿಂದ ಮನವಿ
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್‌.ಕೆ.ರಾಮು, ಸರ್ಕಾರಿ ನೂತನ ಪಿಂಚಣಿ ಯೋಜನೆ ಅಡಿಯ ನೌಕರರ ಸಂಘದ ಅಧ್ಯಕ್ಷ ರಮೇಶ್‌ ಸಂಗ ಸೇರಿದಂತೆ ಇತರೆ ಪದಾಧಿಕಾರಿಗಳು ಮುಖ್ಯ ಕಾರ್ಯದರ್ಶಿಗಳನ್ನು ಭೇಟಿಯಾಗಿ “ಸಕಾಲ’ದಲ್ಲಿರುವ ಸೇವೆಗಳನ್ನು ಮುಂದುವರಿಸುವಂತೆ ಮನವಿ ಮಾಡಿದರು.

ಸರ್ಕಾರಿ ನೌಕರರಿಗೆ ಸಂಬಂಧಪಟ್ಟಂತೆ “ಸಕಾಲ’ದಡಿ ಕಲ್ಪಿಸಿರುವ ಸೇವೆಗಳನ್ನು ಮುಂದುವರಿಸುವಂತೆ ಕೋರಿ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಲಾಯಿತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯ ಕಾರ್ಯದರ್ಶಿಗಳು ಸದ್ಯದಲ್ಲೇ ಸಂಘದ ಪ್ರಮುಖರ ಸಭೆ ಕರೆದು ಚರ್ಚಿಸುವುದಾಗಿ ಭರವಸೆ ನಿಡಿದ್ದಾರೆ ಎಂದು ಎಚ್‌.ಕೆ.ರಾಮು ಹೇಳಿದರು.
ರಾಜ್ಯ ಸರ್ಕಾರಿ ನೌಕರರು, ಸಿಬ್ಬಂದಿಗೆ ಸಂಬಂಧಪಟ್ಟಂತೆ 21 ಸೇವೆಗಳನ್ನು “ಸಕಾಲ’ ವ್ಯಾಪ್ತಿಗೆ 2011ರಲ್ಲೇ ಅಳವಡಿಸಲಾಗಿತ್ತು. 

ಈ ಪೈಕಿ ಆಯ್ದ 18 ಸೇವೆಗಳನ್ನು “ಸಕಾಲ’ದಿಂದ ಕೈಬಿಡುವ ಪ್ರಯತ್ನ ನಡೆದಿತ್ತು. ಈ ಕುರಿತು “ಉದಯವಾಣಿ’ ಆ.6ರಂದು “ಸರ್ಕಾರಿ ಸಿಬ್ಬಂದಿ ಸಕಾಲಕ್ಕೆ ಸಂಚಕಾರ’ ತಲೆಬರಹದಡಿ ವಿಶೇಷ ವರದಿ ಪ್ರಕಟಿಸಿತ್ತು. ಇದು ಸರ್ಕಾರಿ ನೌಕರರ ವರ್ಗದಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿತ್ತು.

ಟಾಪ್ ನ್ಯೂಸ್

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.