ಗಾಂಜಾ ಮಾರಾಟ: ಬಂಧನ
Team Udayavani, Nov 8, 2017, 11:34 AM IST
ಬೆಂಗಳೂರು: ಹೊರ ರಾಜ್ಯದಿಂದ ನಗರಕ್ಕೆ ಬಂದು ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ವಿಜಯನ್ ವಿಕ್ರಮನ್ ನಾಯರ್ (32) ಬಂಧಿತ. ಮುಂಬೈ ಮೂಲದ ಆರೋಪಿ ಕೆಲ ತಿಂಗಳ ಹಿಂದೆ ನಗರಕ್ಕೆ ಬಂದು ನೆಲೆಸಿದ್ದು, ಎಚ್ಎಎಲ್ 2ನೇ ಹಂತದಲ್ಲಿ ಗಾಂಜಾ ಮಾರಾಟ ಮಾಡುತಿದ್ದ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ.
ಈತನಿಂದ 90 ಸಾವಿರ ರೂ. ಮೌಲ್ಯದ 1.2 ಕೆ.ಜಿ ಗಾಂಜಾ, ಮೊಬೈಲ್ ಮತ್ತು 1 ದ್ವಿಚಕ್ರವಾಹನವನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈತನಿಗೆ ಸಹಕರಿಸುತ್ತಿದ್ದ ಮತ್ತೂಬ್ಬ ವ್ಯಕ್ತಿ ಪರಾರಿಯಾಗಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಮತ್ತೂಂದು ಪ್ರಕರಣದಲ್ಲಿ ಆಶೋಕನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಚೌಧರಿ ಎಂಬಾತನನ್ನು ಬಂಧಿಸಿದ್ದು, ಬಂಧಿತನಿಂದ 500 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿ ನೀಲಸಂದ್ರ ನಿವಾಸಿಯಾಗಿದ್ದು, ಮಸೀದಿಯ ಸುತ್ತಮುತ್ತ ಓಡಾಡುವವರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಎಂದು ಆಶೋಕ ನಗರ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.