ಗಾಂಜಾ ಮಾರಾಟ: ಆರೋಪಿಗಳ ಬಂಧನ

Team Udayavani, Sep 9, 2018, 12:08 PM IST

ganja-marata.jpg

ಬೆಂಗಳೂರು: ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಐವರು ಆರೋಪಿಗಳನ್ನು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶ್ರೇಯಸ್‌, ಆಂಧ್ರ ಮೂಲದ ಮಣಿಕಂಠ, ಲಕ್ಷ್ಮಣ್‌, ನಗರದ ಶಿವಪ್ರಸಾದ್‌ ಹಾಗೂ ಜುಬೇರ್‌ ಬಂಧಿತರು.

ನಾಲ್ಕು ದಿನಗಳ ಹಿಂದೆ ಜ್ಯೋತಿನಿವಾಸ ಕಾಲೇಜು ಸಮೀಪ ಗಾಂಜಾ ಖರೀದಿಸಲು ಬಂದ ವ್ಯಕ್ತಿಯನ್ನು ವಶಕ್ಕೆ ಪಡೆದಾಗ ಆತ ನೀಡಿದ ಮಾಹಿತಿ ಆಧರಿಸಿ ಆರೋಪಿಗಳ ಬೆನ್ನಟ್ಟಿದ ಪೊಲೀಸರು, ನಗರಕ್ಕೆ ಗಾಂಜಾ ಪೂರೈಕೆಯಾಗುತ್ತಿದ್ದ ವಿಶಾಖಪಟ್ಟಣ ಸಮೀಪದ ಅರಕು ಕಣಿವೆ ಮೂಲ ಪತ್ತೆಹಚ್ಚಿದ್ದು, ಅಲ್ಲಿಂದಲೇ ಲಕ್ಷ್ಮಣ್‌ ಹಾಗೂ ಮಣಿಕಂಠನನ್ನು ಬಂಧಿಸಿ ಕರೆತಂದಿದ್ದಾರೆ. 

ಇಬ್ಬರೂ ಆರೋಪಿಗಳು ರಾಜಧಾನಿಯಲ್ಲಿ ಸಕ್ರಿಯವಾಗಿರುವ ಮಾದಕ ವಸ್ತು ಮಾರಾಟ ಜಾಲಕ್ಕೆ ಗಾಂಜಾ ಪೂರೈಕೆ ಮಾಡುತ್ತಿದ್ದರು. ಆರೋಪಿಗಳಿಂದ 3.5 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಂಜಾ ಚಟದಿಂದ ಜಾಲ ಸೇರಿದ: ಪ್ರತಿಷ್ಠಿತ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್‌ ಆಂಡ್‌ ಕಮ್ಯುನಿಕೇಶನ್ಸ್‌ ಇಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿದ್ದ ಶ್ರೇಯಸ್‌, ಆರಂಭದಲ್ಲಿ ಶಿವಪ್ರಸಾದ್‌ನಿಂದ ಗಾಂಜಾ ಖರೀದಿಸಿ ಸೇವಿಸುತ್ತಿದ್ದ. ಕ್ರಮೇಣ ಚಟಕ್ಕೆ ಬಿದ್ದು 2016ರಲ್ಲಿ ವಿಧ್ಯಾಭ್ಯಾಸ ಮೊಟಕುಗೊಳಿಸಿದ್ದ. ನಂತರ ಖರ್ಚಿಗೆ ಹಣ ಹೊಂದಿಸಲು ಶಿವಪ್ರಸಾದ್‌ನಿಂದ ಗಾಂಜಾ ಖರೀದಿಸಿ, ಸ್ನೇಹಿತರಿಗೆ ಮಾರಾಟ ಮಾಡಲು ಆರಂಭಿಸಿ, ಬಳಿಕ ಜಾಲದಲ್ಲಿ  ಸಕ್ರಿಯನಾಗಿದ್ದ.

ನಗರದ ಹಲವು ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿದ್ದ. ಈ ನಡುವೆ ಬಿಬಿಎ ಪದವಿಗೆ ಸೇರಿಕೊಂಡಿದ್ದು, ಅದನ್ನೂ ಪೂರ್ಣಗೊಳಿಸಿಲ್ಲ. ಮತ್ತೋರ್ವ ಆರೋಪಿ ಜುಬೇರ್‌ ಎಚ್‌ಎಎಲ್‌, ಮಾರತ್‌ಹಳ್ಳಿ ಪ್ರದೇಶಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದು, ಶಿವಪ್ರಸಾದ್‌ ಬಸವೇಶ್ವರನಗರ, ಮಾಗಡಿ ರಸ್ತೆ, ಸೇರಿ ಪಶ್ಚಿಮ ವಿಭಾಗದಲ್ಲಿ ಈ ದಂಧೆ ನಡೆಸುತ್ತಿದ್ದ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

Supreme Court: ತೀರ್ಪಿನಲ್ಲಿ ಲವ್‌ ಜೆಹಾದ್‌ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್‌ ನಕಾರ

Supreme Court: ತೀರ್ಪಿನಲ್ಲಿ ಲವ್‌ ಜೆಹಾದ್‌ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್‌ ನಕಾರ

Kumbh Mela: ನೇಪಾಲ, ಉತ್ತರಾಖಂಡದಿಂದ ಪೂಜಾ ಸಾಮಗ್ರಿ ಖರೀದಿ

Kumbh Mela: ನೇಪಾಲ, ಉತ್ತರಾಖಂಡದಿಂದ ಪೂಜಾ ಸಾಮಗ್ರಿ ಖರೀದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

Namma Metro: ನಮ ಮೆಟ್ರೋದಲ್ಲಿ ಒಂದೇ ದಿನ 8.6 ಲಕ್ಷ ಜನ  

Namma Metro: ನಮ ಮೆಟ್ರೋದಲ್ಲಿ ಒಂದೇ ದಿನ 8.6 ಲಕ್ಷ ಜನ  

Fraud Case: ಐಶ್ವರ್ಯಗೌಡ ಮನೆಯಲ್ಲಿ 29 ಕೆಜಿ ಬೆಳ್ಳಿ ಜಪ್ತಿ

Fraud Case: ಐಶ್ವರ್ಯಗೌಡ ಮನೆಯಲ್ಲಿ 29 ಕೆಜಿ ಬೆಳ್ಳಿ ಜಪ್ತಿ

Atul Subhash: ಟೆಕಿ ಅತುಲ್‌ ಪತ್ನಿ ಬೇಲ್‌ ಅರ್ಜಿ ನಾಡಿದ್ದು ಇತ್ಯರ್ಥಪಡಿಸಿ: ಕೋರ್ಟ್ ‌

Atul Subhash: ಟೆಕಿ ಅತುಲ್‌ ಪತ್ನಿ ಬೇಲ್‌ ಅರ್ಜಿ ನಾಡಿದ್ದು ಇತ್ಯರ್ಥಪಡಿಸಿ: ಕೋರ್ಟ್ ‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

puttige-4

Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.