ಚಿತ್ರನಟ ದುನಿಯಾ ವಿಜಯ್ ಗೆ ನ್ಯಾಯಾಂಗ ಬಂಧನ

Team Udayavani, Sep 23, 2018, 9:23 PM IST

vijay-duniya-600.jpg

ಬೆಂಗಳೂರು: ಹಲ್ಲೆ ಮತ್ತು ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನ ಖ್ಯಾತ ನಟ ಬ್ಲ್ಯಾಕ್ ಕೋಬ್ರಾ ದುನಿಯಾ ವಿಜಯ್ ಮತ್ತು ಅವರ ಮೂವರು ಸ್ನೇಹಿತರಿಗೆ ಇಲ್ಲಿನ 8ನೇ ACMG ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದೆ.

ಹಲ್ಲೆ ಮತ್ತು ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆ ಹೈಗ್ರೌಂಡ್ಸ್‌ ಪೊಲೀಸ್ ಠಾಣೆಯಲ್ಲಿ ದುನಿಯಾ ವಿಜಯ್ ಮತ್ತು ಅವರ ಸ್ನೇಹಿತರ ವಿರುದ್ಧ ಪ್ರಕರಣವೊಂದು ದಾಖಲಾಗಿತ್ತು. ಭಾನುವಾರ ಕೋರ್ಟಿಗೆ ರಜೆಯಿದ್ದ ಕಾರಣ ಕೋರಮಂಗಲ NGVನಲ್ಲಿರುವ ನ್ಯಾಯಮೂರ್ತಿ ಮಹೇಶ್ ಬಾಬು ಅವರ ಎದುರು ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಈ ಸಂದರ್ಭದಲ್ಲಿ ನ್ಯಾಯಾಧೀಶರು ವಿಜಯ್ ಮತ್ತು ಇನ್ನಿತರ ಮೂವರು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿ ಆದೇಶ ನೀಡಿದರು.

ನ್ಯಾಯಾಧೀಶರು ನ್ಯಾಯಾಂಗ ಬಂಧನವನ್ನು ವಿಧಿಸುತ್ತಿದ್ದತೆಯೇ ಪೊಲೀಸರು ಆರೋಪಿಗಳನ್ನು ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರಕ್ಕೆ ಕರೆದೊಯ್ಯಲಾಯಿತು.

ಪ್ರಕರಣದ ಹಿನ್ನಲೆ
ಬೆಂಗಳೂರು: ನಗರದ ಅಂಬೇಡ್ಕರ್‌ ಭವನದಲ್ಲಿ  ಶನಿವಾರ ರಾತ್ರಿ ನಡೆದ ಜಗಳವೊಂದು ಘರ್ಷಣೆಗೆ ತಿರುಗಿ ಖ್ಯಾತ ನಟ ದುನಿಯಾ ವಿಜಯ್‌ ಮತ್ತು ಬೆಂಬಲಿಗರ ಬಂಧನಕ್ಕೆ ಕಾರಣವಾಗಿದೆ. ಜಿಮ್‌ ಟ್ರೈನರ್‌ ಆಗಿರುವ ಪಾನಿಪುರಿ ಕಿಟ್ಟಿ ಅವರ ತಮ್ಮನ ಮಗ ಮಾರುತಿ ಗೌಡ ಎನ್ನುವ ಯುವಕನನ್ನು ದುನಿಯಾ ವಿಜಿ ಮತ್ತು ಮೂವರು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಲಾಗಿದೆ.

ಅಂಬೇಡ್ಕರ್‌ ಭವನದಲ್ಲಿ ಬಾಡಿ ಬಿಲ್ಡಿಂಗ್‌ ಸ್ಪರ್ಧೆ ನಡೆಯುತ್ತಿದ್ದ ವೇಳೆ ಜಗಳ ಆರಂಭವಾಗಿದ್ದು ಆ ಬಳಿಕ ಮಾರುತಿಗೆ ದುನಿಯಾ ವಿಜಿ ಅವಾಚ್ಯ ಶಬ್ಧಗಳಿಂದ ಬೈದು ಕಾರಿನಲ್ಲಿ ಅಪಹರಿಸಿ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಲಾಗಿದೆ. ತಕ್ಷಣ ಪೊಲೀಸರಿಗೆ ದೂರು ನೀಡಲಾಗಿದ್ದು, ಹೈಗ್ರೌಂಡ್ಸ್‌ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ದುನಿಯಾ ವಿಜಯ್‌ ಸೇರಿ ಮೂವರನ್ನು ಬಂಧಿಸಿದ್ದಾರೆ. 

ಎಸಿಪಿ ರವಿಶಂಕರ್‌ ಅವರು ದುನಿಯಾ ವಿಜಯ್‌ ಅವರಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಪ್ರಸಾದ್‌ ಎನ್ನುವ ವ್ಯಕ್ತಿ ಜಗಳಕ್ಕೆ ಕಾರಣ ಎಂದು ಪಾನಿಪುರಿ ಕಿಟ್ಟಿ ಹೇಳಿಕೆ ನೀಡಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಹಿನ್ನಲೆಯಲ್ಲಿ ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಲಾಗಿತ್ತು. 

ಗಂಭೀರವಾಗಿ ಹಲ್ಲೆಗೊಳಗಾದ ಮಾರುತಿ ಗೌಡ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ತುಟಿಗಳು ಒಡೆದಿದ್ದು, ಕಣ್ಣಿಗೂ ಗಂಭೀರ ಸ್ವರೂಪದ ಗಾಯಗಳಾಗಿವೆ. ಆಸ್ಪತ್ರೆಗೆ ಸಿಸಿಬಿ ಪೊಲೀಸರು ಆಗಮಿಸಿ ಹೇಳಿಕೆ ಪಡೆದುಕೊಂಡಿದ್ದಾರೆ. 

ದುನಿಯಾ ವಿಜಯ್‌ ಅವರನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಹಲ್ಲೆ ನಡೆಸಿದ್ದು ನಾನೇ ಎಂದು ವಿಜಯ್‌ ತಪ್ಪೊಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.  ಸಂಜೆ ವಿಜಯ್‌ ಮತ್ತು ಇತರ ಆರೋಪಿಗಳನ್ನು ಜಡ್ಜ್ ನಿವಾಸದಲ್ಲಿ ಜಾಮೀನಿಗಾಗಿ ಹಾಜರುಪಡಿಸುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

“40 ಪರ್ಸೆಂಟ್‌ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ

Congress: “40 ಪರ್ಸೆಂಟ್‌ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.