ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಸ್ಯಾನಿಟೈಸರ್‌ ಸಿಂಪಡಣೆ

Team Udayavani, Mar 18, 2020, 3:06 AM IST

bbmp2

ಬೆಂಗಳೂರು: ಕೊರೊನಾ ಮುಂಜಾಗ್ರತಾ ಕ್ರಮವಹಿಸುವ ಉದ್ದೇಶದಿಂದ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಪ್ರಾಯೋಗಿ ಕವಾಗಿ ಸ್ಯಾನಿಟೈಸರ್‌ ಸಿಂಪಡಣೆ ಮಾಡಲಾಯಿತು. ಪಾಲಿಕೆಯ ಕೇಂದ್ರ ಕಚೇರಿಯ ಎಲ್ಲ ವಿಭಾಗ ಗಳ ಕಚೇರಿ, ಕಾರಿಡಾರ್‌, ಮೆಟ್ಟಿಲುಗಳು ಹಾಗೂ ಸಾರ್ವಜನಿಕರು ಹೆಚ್ಚು ಸ್ಪರ್ಶಿಸುವ ಮೆಟ್ಟಿಲಿನ ಹಿಡಿಕೆ, ಗೇಟ್‌,ಬಾಗಿಲು ಹಾಗೂ ಶೌಚಾಲಯದ ಭಾಗದಲ್ಲೂ ಸ್ಯಾನಿಟೈಸರ್‌ ಸಿಂಪಡಣೆ ಮಾಡಲಾಗಿದೆ.

ಬುಧವಾರದಿಂದ ಪಾಲಿಕೆ ವ್ಯಾಪ್ತಿಯ ಎಲ್ಲ ಕಚೇರಿಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಸ್ಯಾನಿಟೈಸರ್‌ ಸಿಂಪಡಣೆ ಮಾಡಲು ಬಿಬಿಎಂಪಿ ಆಯುಕ್ತರಾದ ಬಿ.ಎಚ್‌.ಅನಿಲ್‌ಕುಮಾರ್‌ ಸೂಚನೆ ನೀಡಿ ದ್ದಾರೆ ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.

ಥರ್ಮಲ್‌ ಸ್ಕ್ರೀನ್‌ ಅಳವಡಿಸಲು ಮನವಿ: ಪಾಲಿಕೆಯ ಕೇಂದ್ರ ಕಚೇರಿಗೆ ನಿತ್ಯ ಸಾವಿರಾರು ಜನ ಬರುವುದರಿಂದ ಕೊರೊನಾ ಮುಂಜಾಗ್ರತಾ ಕ್ರಮವಾಗಿ ಥರ್ಮಲ್‌ ಸ್ಕ್ರೀನಿಂಗ್‌ ಅಳವಡಿಸುವಂತೆ ಪಾಲಿಕೆಯ ಪ್ರತಿಪಕ್ಷ ನಾಯಕ ಅಬ್ದುಲ್‌ವಾಜಿದ್‌ ಮನವಿ ಮಾಡಿದ್ದಾರೆ.

ಈ ಸಂಬಂಧ ಬಿಬಿಎಂಪಿ ಆಯುಕ್ತರಾದ ಬಿ.ಎಚ್‌.ಅನಿಲ್‌ಕುಮಾರ್‌ ಅವರಿಗೆ ಪತ್ರ ಬರೆದಿದ್ದು, ಪಾಲಿಕೆಯ ಕೇಂದ್ರ ಕಚೇರಿಗೆ ನಿತ್ಯ ಸಾವಿರಾರು ಜನ ಬರುತ್ತಾರೆ. ಹೀಗಾಗಿ, ಕೊರೊನಾ ಹಬ್ಬುವ ಸಾಧ್ಯತೆ ಹೆಚ್ಚಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಥರ್ಮಲ್‌ ಸ್ಕ್ರೀನ್‌ ಅಳವಡಿಸುವ ಮೂಲಕ ಸೋಂಕು ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಪಾಲಿಕೆ ಕಚೇರಿಯಲ್ಲಿ ನಿರ್ದಿಷ್ಟ ವೇಳೆಯಲ್ಲಿ ಜನರಿಗೆ ಅವಕಾಶ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಪಾಲಿಕೆಯ ಕೇಂದ್ರ ಕಚೇರಿಗೆ ಅನ್ವಯವಾಗುವಂತೆ ಮಧ್ಯಾಹ್ನ 3ರಿಂದ ಸಂಜೆ 5ಗಂಟೆಯ ವರೆಗೆ ನಿಗದಿತ ವೇಳೆಯಲ್ಲಿ ಜನರಿಗೆ ಅವಕಾಶ ನೀಡಲಾಗುವುದು ಎಂದು ಬಿಬಿಎಂಪಿ ಆಯುಕ್ತರಾದ ಬಿ.ಎಚ್‌.ಅನಿಲ್‌ಕುಮಾರ್‌ ತಿಳಿಸಿದ್ದಾರೆ. ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ. ಉಳಿದ ಸಮಯ ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಹೆಚ್ಚು ಜನ ಸೇರುವ ಮದುವೆಗಳು ಸೇರಿದಂತೆ ಸಾರ್ವಜನಿಕ ಸಭೆ, ಸಮಾರಂಭಗಳನ್ನು ನಿಷೇಧಿಸಿ ತಾವೇ ಹೊರಡಿಸಿರುವ ಅಧಿಸೂಚನೆಯನ್ನು ಉಲ್ಲಂ ಸಿ ಮಾ.15ರಂದು ಬೆಳಗಾವಿಯಲ್ಲಿ ವಿಧಾನಪರಿಷತ್‌ ಸದಸ್ಯ ಮಹಾಂತೇಶ ಕವಟಗಿಮಠ ಅವರ ಮಗಳ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದಕ್ಕೆ ಮುಖ್ಯಮಂತ್ರಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ. ನರಸಿಂಹಮೂರ್ತಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಸರ್ಕಾರದ ಅಧಿಸೂಚನೆ ಉಲ್ಲಂ ಸಿ ಮುಖ್ಯಮಂತ್ರಿಯವರು ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇವರ ಜೊತೆಗೆ ಕೆಲವು ಶಾಸಕರು, ಸಚಿವರು, ಕೇಂದ್ರದ ಮಂತ್ರಿಗಳು ಇದ್ದರು. ಆದ್ದರಿಂದ ಈ ನಿಟ್ಟಿನಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

ಶಂಕಿತರು ಎಸ್ಕೇಪ್‌ ಆದ್ರೆ ಕ್ರಮ: ಕೊರೊನಾ ಶಂಕಿತರು ಚಿಕಿತ್ಸೆ ಪಡೆಯದೆ ಪರಾರಿಯಾದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ತಿಳಿಸಿದ್ದಾರೆ. ಮಂಗಳವಾರ ಮಾಧ್ಯಮ ಪತ್ರಿನಿಧಿಗಳ ಜತೆ ಮಾತನಾಡಿದ ಅವರು, ಕೊರೊನಾ ಶಂಕಿತರು ಮುನ್ನೆಚ್ಚರಿಕೆ ವಹಿಸಬೇಕು.

ಸಾಮಾಜಿಕ ಜವಾಬ್ದಾರಿ ಅರಿತು ಚಿಕಿತ್ಸೆ ಪಡೆದುಕೊಳ್ಳಬೇಕೇ ವಿನ: ಪರಾರಿ ಆಗಬಾರದು. ಒಂದು ವೇಳೆ ಪರಾರಿಯಾಗುವುದು ಗೊತ್ತಾದರೆ ಕಾನೂನು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ. ಡಿಸಿಪಿ ಇಶಾ ಪಂಥ್‌ ಅವರನ್ನು ನೋಡಲ್‌ ಅಧಿಕಾರಿಯನ್ನಾಗಿ ನೇಮಿಸಿದ್ದು, ಆರೋಗ್ಯ ಇಲಾಖೆ ಸೂಚನೆಯಂತೆ ಕಾರ್ಯನಿರ್ವಹಿಸಲಿದ್ದಾರೆ ಎಂದೂ ಹೇಳಿದ್ದಾರೆ.

ಟಾಪ್ ನ್ಯೂಸ್

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

Delhi Election 2025:  ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

6

Karkala: ಇಳಿಜಾರಿನಲ್ಲಿ ಯು-ಟರ್ನ್; ಅತ್ತೂರು ರಸ್ತೆಯಲ್ಲಿ ಅಪಾಯ

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

7

Kundapura: ಚೋರಾಡಿ; ಕರೆ ಬಂದರೆ ಬೆಟ್ಟ ಹತ್ತಬೇಕು!

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.