ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಉಪಗ್ರಹ ಅಭಿವೃದ್ಧಿ ಯೋಜನೆಗೆ ಚಾಲನೆ


Team Udayavani, Feb 28, 2022, 1:16 PM IST

cn-ashwath-narayana

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರಕಾರಿ ಶಾಲೆಗಳ ಮಕ್ಕಳೇ ಉಪಗ್ರಹ ಅಭಿವೃದ್ಧಿ ಮಾಡಲಿದ್ದು, ಇದಕ್ಕೆ ದಿವಂಗತ ನಟ ಪುನೀತ್ ರಾಜಕುಮಾರ್ ಗೌರವಾರ್ಥವಾಗಿ ಅವರ ಹೆಸರನ್ನೇ ಇಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಮಲ್ಲೇಶ್ವರಂನ 18ನೇ ಅಡ್ಡರಸ್ತೆಯಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಈ ಘೋಷಣೆ ಮಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್) ಮತ್ತು ಭಾರತೀಯ ತಂತ್ರಜ್ಞಾನ ಸಮಾವೇಶ ಒಕ್ಕೂಟ (ಐಟಿಸಿಎ) ಮಾಡಿಕೊಂಡ ಒಡಂಬಡಿಕೆಯನ್ನು ವಿನಿಮಯ ಮಾಡಿಕೊಳ್ಳಲಾಯಿತು.

ಸಮಾರಂಭದಲ್ಲಿ ಮಾತನಾಡಿದ ಸಚಿವರು, “ಸ್ವಾತಂತ್ರ್ಯದ 75ನೇ ವರ್ಷಾಚರಣೆ ಅಂಗವಾಗಿ ಐಟಿಸಿಎ 75 ಉಪಗ್ರಹಗಳನ್ನು ಉಡಾಯಿಸುತ್ತಿದೆ. ಈ ಪೈಕಿ ಒಂದು ಉಪಗ್ರಹವನ್ನು ರಾಜ್ಯ ಸರಕಾರದ ಸಹಕಾರದಲ್ಲಿ ಸರಕಾರಿ ಶಾಲೆಗಳ ಮಕ್ಕಳು ನಿರ್ಮಿಸುತ್ತಿದ್ದು, ಇದಕ್ಕೆ 1.90 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ” ಎಂದರು.

ಉದ್ದೇಶಿತ ಉಪಗ್ರಹವು 1.50 ಕೆ.ಜಿ. ತೂಕವಿರಲಿದ್ದು, ಯೋಜನೆಯ ಗ್ರೌಂಡ್ ಸ್ಟೇಷನ್ ಕೂಡ ಮಲ್ಲೇಶ್ವರದ ಇದೇ ಕಾಲೇಜಿನ ಆವರಣದಲ್ಲಿ ಇರಲಿದೆ. ಎಲ್ಲ ನಿರ್ವಹಣೆಯೂ ಇಲ್ಲಿಂದಲೇ ಆಗಲಿದೆ. ಯೋಜನೆಗೆ 20 ಸರಕಾರಿ ಶಾಲೆಗಳ 100 ಪ್ರತಿಭಾವಂತ ಮಕ್ಕಳನ್ನು ನಾನಾ ಸ್ಪರ್ಧೆ ಮತ್ತು ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಈ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಆನ್-ಲೈನ್, ಆಫ್-ಲೈನ್, ಹ್ಯಾಂಡ್ಸ್-ಆನ್ ಮತ್ತು ಟ್ಯುಟೋರಿಯಲ್ ಮಾದರಿಗಳಲ್ಲಿ ಪರಿಚಯಾತ್ಮಕ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಜತೆಗೆ, ಎರಡೂ ಭಾಷೆಗಳಲ್ಲಿ ಅಗತ್ಯ ಪಠ್ಯಗಳ ವೆಬ್-ಲಿಂಕ್ ಒದಗಿಸಲಾಗುವುದು. ಈ ಸಂಬಂಧದ ತರಗತಿಗಳು ಏಪ್ರಿಲ್ 22ರಿಂದ ಆರಂಭವಾಗಲಿವೆ ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ:ಆಪರೇಷನ್ ಗಂಗಾ : ಭಾರತೀಯರನ್ನು ಹೊತ್ತ 6 ನೇ ವಿಮಾನ ದೆಹಲಿಯತ್ತ

ಈ ತರಬೇತಿಯಲ್ಲಿ ಉಪಗ್ರಹ ಪೇಲೋಡ್ ತಿಳಿವಳಿಕೆ, ನ್ಯಾನೋ ಉಪಗ್ರಹಗಳ ಪರಿಚಯ, ಬೆಂಗಳೂರಿನಲ್ಲಿರುವ ವೈಜ್ಞಾನಿಕ ಸಂಸ್ಥೆಗಳಿಗೆ ಭೇಟಿ, ಉಡಾವಣೆ ಸಮಯದಲ್ಲಿ ಶ್ರೀಹರಿಕೋಟಾಗೆ ಭೇಟಿ, ವಿಜ್ಞಾನಿಗಳೊಂದಿಗೆ ಸಂವಾದ, ಗ್ರೌಂಡ್ ಸ್ಟೇಷನ್ ನಲ್ಲಿ ತರಬೇತಿ, ಅಗತ್ಯ ಪುಸ್ತಕಗಳ ಪ್ರಕಟಣೆ ಮುಂತಾದ ಚಟುವಟಿಕೆಗಳು ಇರಲಿವೆ ಎಂದು ಅಶ್ವತ್ಥನಾರಾಯಣ ತಿಳಿಸಿದರು.

ವಿಜ್ಞಾನ ಪ್ರದರ್ಶನದ ಆಕರ್ಷಣೆ: ಮಲ್ಲೇಶ್ವರದ ಪಿಯು ಕಾಲೇಜು ಮೈದಾನದಲ್ಲಿ ವಿಜ್ಞಾನ ಪ್ರದರ್ಶನ ಏರ್ಪಡಿಸಲಾಗಿತ್ತು. ಮಳಿಗೆಗಳಿಗೆ ಭೇಟಿ ನೀಡಿದ ಸಚಿವರು, ಸಂಸದರು ಮತ್ತು ವಿಜ್ಞಾನಿಗಳು, ಅಲ್ಲಿ ಪ್ರದರ್ಶನಕ್ಕಿಟ್ಟಿದ್ದ ವೈಜ್ಞಾನಿಕ ಸಾಧನಗಳು ಮತ್ತು ಉಪಕರಣಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಪ್ರದರ್ಶನಕ್ಕೆ ಸಾವಿರಾರು ವಿಜ್ಞಾನಾಸಕ್ತರು ಕೂಡ ಭೇಟಿ ನೀಡಿದ್ದು, ಗಮನಾರ್ಹವಾಗಿತ್ತು.

ಕಾರ್ಯಕ್ರಮದಲ್ಲಿ ಉಪಗ್ರಹಗಳ ಬಗ್ಗೆ ಸಮಗ್ರ ಮಾಹಿತಿ ನೀಡುವ ಕೈಪಿಡಿಯನ್ನೂ ಬಿಡುಗಡೆ ಮಾಡಲಾಯಿತು. ಜೊತೆಗೆ, ಎರಡು ಸರಕಾರಿ ಶಾಲೆಗಳಿಗೆ ಸಾಂಕೇತಿಕವಾಗಿ ವಿಜ್ಞಾನದ ಪ್ರಯೋಗ ಕಿಟ್ ವಿತರಿಸಲಾಯಿತು. ಉಳಿದ ಶಾಲೆಗಳಿಗೆ ಬಿಇಒಗಳ ಮೂಲಕ ಈ ಕಿಟ್ ತಲುಪಿಸಲಾಗುವುದು ಎಂದು ಸಚಿವರು ತಿಳಿಸಿದರು.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.