ಸತ್ಯನಾರಾಯಣ ರಾವ್ ಪ್ರಕರಣ ಮಧ್ಯಪ್ರವೇಶ ಸಲ್ಲ: ಹೈಕೋರ್ಟ್
Team Udayavani, Mar 20, 2018, 12:09 PM IST
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಶಶಿಕಲಾ ವಿ. ನಟರಾಜನ್ಗೆ ಐಷಾರಾಮಿ ಸೌಲಭ್ಯ ನೀಡಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆ ಪ್ರಾಥಮಿಕ ಹಂತದಲ್ಲಿರುವಾಗ ನ್ಯಾಯಾಲಯ ಮಧ್ಯಪ್ರವೇಶಿಸುವುದು ಸಮಂಜಸವಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.
ಪ್ರಕರಣದ ಸಂಬಂಧ ತನಿಖೆ ನಡೆಸಲು ಸರ್ಕಾರ ನೀಡಿದ್ದ ಆದೇಶ ರದ್ದು ಪಡಿಸುವಂತೆ ಕೋರಿ ರಾಜ್ಯ ಬಂಧೀಖಾನೆ ಇಲಾಖೆ ನಿವೃತ್ತ ಡಿಜಿಪಿ ಸತ್ಯನಾರಾಯಣರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ರಾಘವೇಂದ್ರ ಎಸ್.ಚೌಹಾಣ್ ಅವರಿದ್ದ ನ್ಯಾಯಪೀಠ, ಪ್ರಕರಣದ ತನಿಖೆ ಪ್ರಾಥಮಿಕ ಹಂತದಲ್ಲಿರುವಾಗ ನ್ಯಾಯಾಲಯ ಮಧ್ಯಪ್ರವೇಶಿಸುವುದು ಸೂಕ್ತವಲ್ಲ ಎಂದು ಮೌಖೀಕ ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರಕರಣ ಸಂಬಂಧ ತನಿಖೆಗೆ ರಾಜ್ಯ ಸರ್ಕಾರ ನೀಡಿರುವ ಆದೇಶಕ್ಕೆ ತಡೆ ನೀಡಬೇಕು ಎಂದು ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಆದರೆ, ಇದಕ್ಕೆ ಆಕ್ಷೇಪಿಸಿದ ನ್ಯಾಯಪೀಠ, ಈಗಾಗಲೇ ತನಿಖೆ ಆರಂಭವಾಗಿದೆ. ವಿಚಾರಣೆ ಪ್ರಾಥಮಿಕ ಹಂತದಲ್ಲಿರುವಾಗ ನ್ಯಾಯಾಲಯದ ಮಧ್ಯಪ್ರವೇಶ ಸರಿಯಲ್ಲ. ತನಿಖೆ ನಡೆಯಲಿ, ತಪ್ಪು ಮಾಡಿರುವ ದಾಖಲೆ ಲಭ್ಯವಾದರೆ ಚಾರ್ಚ್ ಶೀಟ್ ಸಲ್ಲಿಸಲಿ ಎಂದಿತು.
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಶಶಿಕಲಾಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಐಷಾರಾಮಿ ಸೌಲಭ್ಯ ಒದಗಿಸಲು ಸತ್ಯನಾರಾಯಣ ರಾವ್ 2 ಕೋಟಿ ಲಂಚ ಪಡೆದಿದ್ದಾರೆ ಎಂದು ಬಂಧೀಖಾನೆ ಇಲಾಖೆ ಡಿಐಜಿಯಾಗಿದ್ದ ಡಾ.ಡಿ.ರೂಪ ಆರೋಪಿಸಿದ್ದರು. ಈ ಸಂಬಂಧ ಎಸಿಬಿ ಪೊಲೀಸರು ಎಫ್ಐಆರ್ ಮಾ.3ರಂದು ಎಫ್ಐಆರ್ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
MUST WATCH
ಹೊಸ ಸೇರ್ಪಡೆ
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.