ಸೌದಿಗೆ ಯುವತಿಯರ ಕಳ್ಳಸಾಗಣೆ: ನಾಲ್ವರ ಬಂಧನ
Team Udayavani, Dec 13, 2018, 12:36 PM IST
ಬೆಂಗಳೂರು: ನೇಪಾಳ ಯುವತಿಯರನ್ನು ಮಾನವ ಕಳ್ಳಸಾಗಾಣಿಕೆ ಮೂಲಕ ಕುವೈತ್, ಸೌದಿ ಅರೇಬಿಯಾ ರಾಷ್ಟ್ರಗಳಿಗೆ ಕಳುಹಿಸಿಕೊಡುತ್ತಿದ್ದ ಜಾಲವನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಭೇದಿಸಿದ್ದು, 35 ಯುವತಿಯರನ್ನು ರಕ್ಷಿಸಿದ್ದಾರೆ.
ಮಾನವ ಕಳ್ಳಸಾಗಣೆ ಜಾಲದಲ್ಲಿ ತೊಡಗಿಸಿಕೊಂಡಿದ್ದ ನೇಪಾಳ ಮೂಲದ ಕಿಶನ್ ಗಾಲೆ, ರಾಕೇಶ್ ಶರ್ಮಾ, ಲಕ್ಷ್ಮಣ್ ಗಾಲೆ ತಾಗ್ ಬಹೂದ್ದೂರ್ ಎಂಬುವವರನ್ನು ಬಂಧಿಸಲಾಗಿದೆ. ಜಾಲದ ಪ್ರಮುಖ ಕಿಂಗ್ ಪಿನ್‌ಗಳಾದ ಆಂಧ್ರ ಮೂಲದ ವೆಂಕಟೇಶ್ವರ ರಾವ್, ನೇಪಾಳದ ನವರಾಜ್ ಬಂಧನಕ್ಕೆ ಸಿಸಿಬಿ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಗಳಿಂದ ಕೇಂದ್ರ ವಲಸೆ ವಿಭಾಗ (ಇಮಿಗ್ರೇಶನ್) ಹಾಗೂ ಪೊಲೀಸ್ ಇಲಾಖೆ ಹೆಸರಿನ ಆರು ನಕಲಿ ಸೀಲುಗಳು, 2 ಲ್ಯಾಪ್‌ಟಾಪ್, 1 ಪ್ರಿಂಟರ್, 6 ಫೋನ್ ಜಪ್ತಿ ಮಾಡಿಕೊಂಡಿದ್ದು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಷ್ಟದಲ್ಲಿರುವ ಹೆಣ್ಣುಮಕ್ಕಳು ಟಾರ್ಗೆಟ್: ಕಿಂಗ್ ಪಿನ್‌ಗಳಾದ ವೆಂಕಟೇಶ್ವರ ರಾವ್ ಹಾಗೂ ನವಿರಾಜ್ ಹಲವು ವರ್ಷಗಳಿಂದ ಮಾನವ ಕಳ್ಳಸಾಗಣೆ ದಂಧೆಯಲ್ಲಿ ಭಾಗಿಯಾಗಿದ್ದು, ಉಳಿದ ಆರೋಪಿಗಳು ಅವರಿಗೆ ಸಹಕಾರ ನೀಡುತ್ತಿದ್ದರು. ನೇಪಾಳದ ಬಡ ಹೆಣ್ಣುಮಕ್ಕಳು, ಗಂಡನಿಂದ
ಪರಿತ್ಯಕ್ತ ಮಹಿಳೆಯರನ್ನು ಗುರುತಿಸಿ ಆರೋಪಿಗಳು, ಬಂಧಿತರಿಗೆ ಮಾಹಿತಿ ನೀಡುತ್ತಿದ್ದರು. ಬಳಿಕ ಹೆಣ್ಣುಮಕ್ಕಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ದುಬೈ, ಕುವೈತ್ ಹಾಗೂ ಸೌದಿ ಅರೆಬಿಯಾ ರಾಷ್ಟ್ರಗಳಲ್ಲಿ ಹೆಚ್ಚು ವೇತನ ನೀಡುವ ಕೆಲಸಕ್ಕೆ ಕಳುಹಿಸಿಕೊಡುತ್ತೇವೆ ಎಂದು ನಂಬಿಸಿ ಅವರನ್ನು ಬೆಂಗಳೂರಿಗೆ ಕರೆತರುತ್ತಿದ್ದರು. ಕಾಟನ್ ಪೇಟೆ ಮುಖ್ಯ ರಸ್ತೆಯ ಸಮೀಪ ಕಟ್ಟಡವೊಂದನ್ನು ಬಾಡಿಗೆಗೆ ಪಡೆದುಕೊಂಡು ಮೂರು ನಾಲ್ಕು ದಿನಗಳ ಕಾಲ ಕೂಡಿ ಹಾಕಿ, ಅವರು ವಿದೇಶಗಳಿಗೆ ತೆರಳಲು ಬೇಕಾದ ವ್ಯವಸ್ಥೆ ಮಾಡುತ್ತಿದ್ದರು.
ನಕಲಿ ದಾಖಲೆಗಳನ್ನು ಸೃಷ್ಟಿಸಿ, ಪಾಸ್ ಪೋರ್ಟ್‌ಗಳನ್ನು ತಯಾರಿಸುತ್ತಿದ್ದರು. ವಿಮಾನ ನಿಲ್ದಾಣದಲ್ಲಿ ಅನುಮಾನ ಬರಬಾರದೆಂದು ದಾಖಲೆಗಳ ಮೇಲೆ ನಕಲಿ ಸೀಲ್‌ಗಳನ್ನು ಹಾಕುತ್ತಿದ್ದರು. ಬಳಿಕ, ಎರಡು ಮೂರು ದಿನಕ್ಕೊಮ್ಮೆ ಹಂತ – ಹಂತವಾಗಿ ಯುವತಿಯರನ್ನು ವಿದೇಶಗಳಿಗೆ ಕಳುಹಿಸಿಕೊಡುತ್ತಿದ್ದರು. ಬಳಿಕ, ವಿದೇಶಿ ಏಜೆಂಟರುಗಳ ಬಳಿ ಲಕ್ಷಾಂತ ರೂ. ಹಣ ಪಡೆಯುತ್ತಿದ್ದರು.
ಸಾಕಷ್ಟು ಏಜೆಂಟರುಗಳು ಈ ಅಕ್ರಮ ಜಾಲದಲ್ಲಿ ಭಾಗಿಯಾಗಿರುವ ಶಂಕೆಯಿದೆ. ಹೀಗಾಗಿ, ಪ್ರಕರಣವನ್ನು ಹಲವು ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಜತೆಗೆ, ಸಂತ್ರಸ್ತ ಯುವತಿಯರನ್ನು ನೇಪಾಳಕ್ಕೆ ಕಳುಹಿಸಿಕೊಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.