ಕಾಂಗ್ರೆಸ್‌ನಿಂದ ಬೆಂಗಳೂರು ಉಳಿಸಿ ಪಾದಯಾತ್ರೆ

Team Udayavani, Feb 28, 2018, 11:53 AM IST

padayatre.jpg

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಗೂಂಡಾಗಿರಿ, ಭ್ರಷ್ಟಾಚಾರದಿಂದ ಬೆಂಗಳೂರು ರಕ್ಷಿಸಿ ಎಂದು ಘೋಷವಾಕ್ಯದೊಂದಿಗೆ ಬಿಜೆಪಿ ನಗರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮಾ. 2ರಿಂದ 15ರವರೆಗೆ ಪಾದಯಾತ್ರೆ ಹಮ್ಮಿಕೊಂಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ, ವ್ಯಾಪಕ ಭ್ರಷ್ಟಾಚಾರ, ಕಳಪೆ ಮೂಲ ಸೌಕರ್ಯ, ನಿಯಂತ್ರಣ ತಪ್ಪಿದ ಸಂಚಾರ ವ್ಯವಸ್ಥೆ ಮತ್ತು ಬೆಂಕಿ ಹತ್ತಿ ಉರಿಯುತ್ತಿರುವ ಕೆರೆಗಳು ಎಂಬ ಐದು ಪ್ರಮುಖ ವಿಚಾರಗಳನ್ನು ಇಟ್ಟುಕೊಂಡು ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಹೇಳಿದ್ದಾರೆ.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾ. 2ರಂದು ಬೆಳಗ್ಗೆ 9 ಗಂಟೆಗೆ ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನ ಮತ್ತು ಗವಿ ಗಂಗಾಧರೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿ ಬಳಿಕ ದೇಗುಲದ ಬಳಿಯಿರುವ ಕೆಂಪೇಗೌಡರ ಪ್ರತಿಮೆಗೆ ಗೌರವ ಸಲ್ಲಿಸಿ ಪಾದಯಾತ್ರೆ ಆರಂಭಿಸಲಾಗುವುದು ಎಂದರು.

ಪಾದಯಾತ್ರೆಯಲ್ಲಿ ಕೇಂದ್ರ ಸಚಿವರಾದ ಅನಂತಕುಮಾರ್‌, ಡಿ.ವಿ.ಸದಾನಂದಗೌಡ, ಪ್ರಕಾಶ್‌ ಜಾವಡೇಕರ್‌, ರಾಜ್ಯ ಉಸ್ತುವಾರಿ ಮುರಳೀಧರರಾವ್‌, ನಗರದ ಸಂಸದರು, ಶಾಸಕರು ಪಾಲ್ಗೊಳ್ಳಲಿದ್ದಾರೆ. ಮಾ. 15ರವರೆಗೆ ಪ್ರತಿದಿನ ಪಾದಯಾತ್ರೆ ನಡೆಯಲಿದೆ. ಮಾ. 15ರಂದು ಸಮಾರೋಪ ನಡೆಯಲಿದ್ದು, ಇದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರನ್ನು ಕರೆಸಲಾಗುವುದು ಎಂದು ತಿಳಿಸಿದರು.

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ಕಾಂಗ್ರೆಸ್‌ನವರ ಗೂಂಡಾಗಿರಿ ಹೆಚ್ಚಾಗಿದೆ. ಇದಕ್ಕೆ ಆಡಳಿತ ನಡೆಸುವವರೇ ಕುಮ್ಮಕ್ಕು ನೀಡುತ್ತಿರುವುದು ಸಾಬೀತಾಗಿದೆ. ಇದಕ್ಕೆ ಇತ್ತೀಚೆಗೆ ಉದ್ಯಮಿ ಪುತ್ರ ವಿದ್ವತ್‌ ಮೇಲೆ ಕಾಂಗ್ರೆಸ್‌ ಶಾಸಕ ಎನ್‌.ಎ.ಹ್ಯಾರಿಸ್‌ ಪುತ್ರ ಮೊಹಮ್ಮದ್‌ ನಲಪಾಡ್‌ ಹ್ಯಾರಿಸ್‌ ನಡೆಸಿದ ಹಲ್ಲೆ ಪ್ರಕರಣ ಸೇರಿದಂತೆ ನಗರದಲ್ಲಿ ನಡೆದಿರುವ ದೌರ್ಜನ್ಯ ಪ್ರಕರಣಗಳೇ ಉದಾಹರಣೆ ಎಂದು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಸದ ಪಿ.ಸಿ.ಮೋಹನ್‌, ಶಾಸಕರಾದ ಎಸ್‌.ಸುರೇಶ್‌ಕುಮಾರ್‌, ಡಾ.ಸಿ.ಎನ್‌.ಅಶ್ವತ್ಥನಾರಾಯಣ, ರಾಮಚಂದ್ರಗೌಡ, ಬಿ.ಎನ್‌.ವಿಜಯಕುಮಾರ್‌, ರವಿಸುಬ್ರಮಣ್ಯ, ಕೃಷ್ಣಪ್ಪ ಮತ್ತಿತರರು ಇದ್ದರು.

ಟಾಪ್ ನ್ಯೂಸ್

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

6(1

Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್‌ ನಿಲ್ದಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.