ವಿಕಲಚೇತನರಿಗೆ ಉಪಕರಣ ನೀಡಿ ನೆರವಿಗೆ ಧಾವಿಸಿದ ಎಸ್‌ಬಿಎಂ
Team Udayavani, Mar 15, 2017, 11:44 AM IST
ಬೆಂಗಳೂರು: ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಮೈಸೂರು (ಎಸ್‌ಬಿಎಂ) ಲಿಂಗರಾಜಪುರಂನ ಎಪಿಡಿ ಮುಖ್ಯ ಕಾರ್ಯಾಲಯದಲ್ಲಿ ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ ಯೋಜನೆಯಡಿ ವಿಕಲಚೇತನರಿಗೆ ಗಾಲಿ ಕುರ್ಚಿ ಮತ್ತಿತರ ಸಲಕರಣೆಗಳ ವಿತರಣೆ ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಂಡಿತ್ತು.
ಈ ಸಂದರ್ಭದಲ್ಲಿ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಎನ್. ಕೃಷ್ಣಮಾಚಾರಿ ಅವರು ಮಾತನಾಡಿ, ಎಸ್‌ಬಿಎಂ ಸದಾ ಇಂತಹ ಸಿಎಸ್‌ಆರ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಮಾಜದ ನಿರ್ಲಕ್ಷಿತ ಸಮುದಾಯದವರ ಅಭಿವೃದ್ಧಿಗಾಗಿ ಸಹಾಯ ಮತ್ತು ಸಹಕಾರ ನೀಡುತ್ತಾ ಬಂದಿದೆ.
ಈ ಸಮುದಾಯದವರು ಅವರವರ ಆಸಕ್ತಿಯ ಕ್ಷೇತ್ರಗಳಲ್ಲಿ ಅಗತ್ಯವಿರುವ ಕೌಶಲ್ಯ ತರಬೇತಿಗಳನ್ನು ಪಡೆದುಕೊಂಡು ಇತರ ಸಾಮಾನ್ಯ ಪ್ರಜೆಗಳಂತೆ ಆತ್ಮವಿಶ್ವಾಸದಿಂದ ಸ್ವತಂತ್ರ ಜೀವನ ನಡೆಸುವ ಅವಕಾಶವನ್ನು ನಾವು ಕಲ್ಪಿಸಿಕೊಡಬೇಕಾಗಿದೆ ಎಂದರು.
ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನರಿಗೆ ಉದ್ಯೋಗ ಒದಗಿಸಿರುವ ಭಾರತೀಯ ಸ್ಟೇಟ್ ಬ್ಯಾಂಕ್ ಬೆಂಗಳೂರಿನಲ್ಲಿ ಸ್ಥಾಪಿಸಿರುವ ಕೌಶಲ್ಯಾಭಿವೃದ್ಧಿ ಕೇಂದ್ರದ ಸಹಾಯವನ್ನು ವಿಕಲಚೇತನ ಸಂಘ, ಸಂಸ್ಥೆಗಳು, ಎನ್‌ಜಿಒಗಳು ಪಡೆದುಕೊಳ್ಳ ಬೇಕು ಎಂದು ಅವರು ಕರೆ ನೀಡಿದರು.
ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟೀಸ್ (ಎಪಿಡಿ) ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಕ್ರಿಸ್ತಿ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಕೆ.ಎನ್. ಗೋಪಿನಾಥ್ ಅವರು ಮಾತನಾಡಿ ತಮ್ಮ ಸಂಸ್ಥೆಯವರು ಕರ್ನಾಟಕದ ವಿವಿಧ ಕೇಂದ್ರಗಳಲ್ಲಿ ನಡೆಸುವ ತರಬೇತಿ ಮತ್ತು ಇತರ ಚಟುವಟಿಕೆಗಳ ಬಗ್ಗೆ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.